ಪೊನ್ನಂಪೇಟೆ, ಆ. ೧೬: ಕೇಂದ್ರ ಪಂಚಾಯತ್ ರಾಜ್ ಮಂತ್ರಾಲಯದ ವತಿಯಿಂದ "ಖಿheme: ೮ ಠಿಚಿಟಿಛಿhಚಿಥಿಚಿಣh ತಿiಣh gooಜ goveಡಿಟಿಚಿಟಿಛಿe" ಎಂಬ ವಿಷಯದ ಕುರಿತು ತಾ.೨೧ರಿಂದ ೨೩ ರವರೆಗೆ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಶ್ರೀನಗರದಲ್ಲಿ ನಡೆಯಲಿರುವ ರಾಷ್ಟಿçÃಯ ಕಾರ್ಯಾಗಾರದಲ್ಲಿ ಭಾಗವಹಿಸಲು ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಆಯ್ಕೆಯಾಗಿದೆ.
ಈ ಕಾರ್ಯಾಗಾರಕ್ಕೆ ಕರ್ನಾಟಕ ರಾಜ್ಯದಿಂದ ೩ ಗ್ರಾಮ ಪಂಚಾಯಿತಿಗಳು ಮಾತ್ರ ಆಯ್ಕೆಯಾಗಿದ್ದು, ಇದರಲ್ಲಿ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಕೂಡ ಒಂದಾಗಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗಿರಿಜಾ ವೆಂಕಟೇಶ್ ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆರ್.ಜೆ.ಪುಟ್ಟರಾಜು ಅವರನ್ನು ಕಾರ್ಯಾಗಾರಕ್ಕೆ ಆಹ್ವಾನಿಸಲಾಗಿದೆ. ಅತ್ಯುತ್ತಮ ಆಡಳಿತ ವ್ಯವಸ್ಥೆ, ಪಂಚಾಯಿತಿ ಸೇವೆಗಳು, ಅತ್ಯುತ್ತಮವಾದ ಕಾರ್ಯನಿರ್ವಹಣೆ, ಉತ್ತಮ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ, ಬಯಲು ಗ್ರಂಥಾಲಯ ನಿರ್ಮಾಣ, ಕಸ ಸುರಿಯುತ್ತಿದ್ದ ಸ್ಥಳವನ್ನು ಉದ್ಯಾನವನವನ್ನಾಗಿ ನಿರ್ಮಿಸಲು ಪ್ರಯತ್ನಿಸುತ್ತಿರುವುದು ಇವೆಲ್ಲವನ್ನು ಪರಿಗಣಿಸಿ, ಪೊನ್ನಂಪೇಟೆ ಗ್ರಾಮ ಪಂಚಾಯಿತಿಯನ್ನು ರಾಷ್ಟಿçÃಯ ಕಾರ್ಯಾಗಾರಕ್ಕೆ ಆಯ್ಕೆ ಮಾಡಲಾಗಿದೆ. ಪಂಚಾಯಿತಿಯ ಈ ಎಲ್ಲಾ ಕಾರ್ಯವೈಖರಿಯ ಬಗ್ಗೆ ಗ್ರಾ.ಪಂ. ಅಧ್ಯಕ್ಷರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಷ್ಟಿçÃಯ ಕಾರ್ಯಾಗಾರದಲ್ಲಿ ಪಿಪಿಟಿ ಪ್ರದರ್ಶನದ ಮೂಲಕ ಪ್ರಸ್ತುತ ಪಡಿಸಬೇಕಿದೆ.
ಈ ಹಿಂದೆ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ೨೦೧೯-೨೦ನೇ ಸಾಲಿನಿಂದ ೨೦೨೧- ೨೦೨೨ ನೇ ಸಾಲಿನ ರವರೆಗೆ ಸತತವಾಗಿ ಮೂರು ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆದುಕೊಳ್ಳುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದೆ. -ಚನ್ನನಾಯಕ