ಕೂಡಿಗೆ, ಆ. ೧೬: ಇಲ್ಲಿಗೆ ಸಮೀಪದ ಶಿರಂಗಾಲ ಗ್ರಾಮ ಪಂಚಾಯಿತಿ ವತಿಯಿಂದ ಮೇರಿ ಮಾಟಿ, ಮೇರಿ ದೇಶ ಅಜಾಧಿಕಾ ಅಮೃತ್ ಮಹೋತ್ಸವ ಅಂಗವಾಗಿ ನನ್ನ ಮಣ್ಣು ನನ್ನ ದೇಶ ಅಭಿಯಾನದ ಕಾರ್ಯಕ್ರಮವು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಶಾಲಾ ಕಾಲೇಜುಗಳಲ್ಲಿ ಗಿಡಗಳನ್ನು ನೆಡುವ ಮೂಲಕ ಆಚರಣೆ ಮಾಡಲಾಯಿತು.

ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾಬಾಯಿ ಗಿಡ ನೆಡುವ ಮೂಲಕ ಚಾಲನೆಯನ್ನು ನೀಡಿದರು. ಯೋಜನೆ ಮಹತ್ವದ ಬಗ್ಗೆ ಅಭಿವೃದ್ಧಿ ಅಧಿಕಾರಿ ಹೇಮಲತಾ ಸವಿಸ್ತಾರವಾಗಿ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಸವರಾಜ್, ಕಾರ್ಯದರ್ಶಿ ಕೆ.ಸಿ. ರವಿ ಸೇರಿದಂತೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಶಿಕ್ಷಕರ ವೃಂದ, ವಿದ್ಯಾರ್ಥಿಗಳು ಹಾಜರಿದ್ದರು.