ವೀರಾಜಪೇಟೆ, ಆ. ೧೫ : ತಿತಿಮತಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸಿವಿಕ್ ಕ್ಲಬ್ ಅನ್ನು ಪ್ರಾಂಶುಪಾಲರಾದ ಷಡಾಕ್ಷರಿ ಹೆಚ್.ಆರ್. ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳ ಹಕ್ಕುಗಳು, ಜವಾಬ್ದಾರಿಗಳು ಹಾಗೂ ಪ್ರಜಾಸತಾತ್ಮಕ ಮೌಲ್ಯಗಳ ಬಗ್ಗೆ ತಿಳಿಸಿದರು.
ಸಮಾಜ ವಿಜ್ಞಾನ ಶಿಕ್ಷಕಿ ಭವ್ಯ ಕೆ.ಎನ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.