ಮಡಿಕೇರಿ, ಆ. ೧೮: ಅಕ್ರಮವಾಗಿ ಇಸ್ಪೀಟ್ ಆಡುತ್ತಿದ್ದ ಮನೆ ಮೇಲೆ ನಗರ ಹಾಗೂ ಡಿಸಿಐಬಿ ಪೊಲೀಸರು ದಾಳಿ ನಡೆಸಿ ೮ ಜನರನ್ನು ವಶಕ್ಕೆ ಪಡೆದಿದ್ದಾರೆ.
ಕನ್ನಂಡಬಾಣೆಯ ಮನೆಯೊಂದರಲ್ಲಿ ಜೂಜಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು, ವಾಹನ ಹಾಗೂ ರೂ. ೨೯ ಸಾವಿರ ನಗದನ್ನು ವಶಕ್ಕೆ ಪಡೆದಿದ್ದಾರೆ.