ಸುಂಟಿಕೊಪ್ಪ, ಆ. ೧೮: ಎಸ್.ಎಸ್.ಎಫ್. ಕೊಡಗು ಜಿಲ್ಲಾ ಸಮಿತಿ ವತಿಯಿಂದ ಸುಂಟಿಕೊಪ್ಪ ಪಟ್ಟಣದಲ್ಲಿ ಬೃಹತ್ ರ‍್ಯಾಲಿ ನಡೆಸಲಾಯಿತು. ಕೂರ್ಗ್ ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಸಯ್ಯದ್ ಶಿಹಾಬುದ್ದೀನ್ ಕಿಲ್ಲೂರು ತಂಙ್ಙಳ್ ರವರು ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಭಾಷಣಕಾರರಾಗಿ ಎಸ್.ವೈ.ಎಸ್. ರಾಜ್ಯ ನಾಯಕ ಅಹ್ಮದ್ ಶರೀಫ್ ಸಖಾಫಿ ಕಿಲ್ಲೂರು ರವರು ಭಾರತದಲ್ಲಿರುವ ಭಾವೈಕ್ಯತೆಯ ಕುರಿತು ಆಳವಾಗಿ ವಿವರಿಸಿ ಸೆಪ್ಟೆಂಬರ್ ೧೦ ರಂದು ಬೆಂಗಳೂರಿನಲ್ಲಿ ನಡೆಯುವ ಎಸ್.ಎಸ್.ಎಫ್. ಗೋಲ್ಡನ್ ಫಿಫ್ಟಿ ಮಹಾ ಸಮ್ಮೇಳನವನ್ನು ಯಶಸ್ವಿಗೊಳಿಸಲು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಸಕರಾದ ಡಾ. ಮಂಥರ್ ಗೌಡ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಕಾಂಗ್ರೆಸ್ ನಾಯಕರಾದ ವಿ.ಪಿ. ಶಶಿಧರ್ ಹಾಗೂ ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ ಲತೀಫ್ ಸುಂಟಿಕೊಪ್ಪ ಮಾತನಾಡಿದರು. ಜಿಲ್ಲಾಧ್ಯಕ್ಷ ಝುಬೈರ್ ಸಅದಿ ಉಸ್ತಾದರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಅಹ್ಸನಿ ಉಸ್ತಾದ್, ಎಸ್.ವೈ.ಎಫ್. ರಾಜ್ಯಾಧ್ಯಕ್ಷ ಹಫೀಲ್ ಸಅದಿ, ಮಾಜಿ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕರ್ನಾಟಕ ಮುಸ್ಲಿಂ ಜಮಾಅತ್ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ, ಎಸ್.ಜೆ.ಎಂ. ಜಿಲ್ಲಾಧ್ಯಕ್ಷ ಮುಸ್ತಫಾ ಸಖಾಫಿ, ಪ್ರಧಾನ ಕಾರ್ಯದರ್ಶಿ ಅಶ್ರಫ್ ಸಖಾಫಿ, ಜಿಲ್ಲಾಧ್ಯಕ್ಷರಾದ ಹಮೀದ್ ಮುಸ್ಲಿಯಾರ್ ಪ್ರಧಾನ ಕಾರ್ಯದರ್ಶಿ ಅಹ್ಮದ್ ಮದನಿ ಎಸ್.ಎಸ್.ಎಫ್. ರಾಷ್ಟಿçÃಯ ಸಮಿತಿ ಕಾರ್ಯದರ್ಶಿ ಯಾಕೂಬ್ ಮಾಷ್ಟರ್, ಶರೀಫ್ ಮಾಷ್ಟರ್ ಕೊಡಗು ಮಾಜಿ ಜಿಲ್ಲಾಧ್ಯಕ್ಷರಾದ ಶಾಫಿ ಸಅದಿ ಉಪಸ್ಥಿತರಿದ್ದರು ಗದ್ದೇಹಳ ಸರ್ಕಳ್ ನಿಂದ ಪ್ರಾರಂಭಗೊAಡ ಬೃಹತ್ ಆಝಾದಿ ಸಂದೇಶ ಜಾಥಾ ಸುಂಟಿಕೊಪ್ಪ ಪಟ್ಟಣದ ವಾಹನ ಚಾಲಕರ ಹಾಗೂ ಮಾಲೀಕರ ಸಂಘದ ಸಾರ್ವಜನಿಕ ವೇದಿಕೆಯಲ್ಲಿ ಸಮಾರೋಪ ಸಮಾರಂಭ ನಡೆಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜುನೈದ್ ಅಮ್ಮತ್ತಿ ಸ್ವಾಗತಿಸಿ, ವಂದಿಸಿದರು.