ಮಡಿಕೇರಿ, ಆ. ೧೭: ಮಾನವ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ ೨೦೨೪-೨೫ನೇ ಸಾಲಿಗೆ ೬ನೇ ತರಗತಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್ ಲೈನ್ ಅರ್ಜಿಯನ್ನು ಈಗಾಗಲೇ ಆಹ್ವಾನಿಸಿದ್ದು ಅರ್ಜಿ ಸಲ್ಲಿಸುವ ದಿನಾಂಕವನ್ನು ತಾ.೨೫ ರವರೆಗೆ ವಿಸ್ತರಿಸಲಾಗಿದೆ. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿಗಳು hಣಣಠಿs://ಟಿಚಿvoಜಚಿಥಿಚಿ.gov.iಟಿ ವೆಬ್‌ಸೈಟ್‌ನಲ್ಲಿ ಸೂಕ್ತ ವಿವರ ಮತ್ತು ದಾಖಲೆಗಳನ್ನು ಅಪ್‌ಲೋಡ್ ಮಾಡಬಹುದಾಗಿದೆ. ಅಲ್ಲದೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ನಂತರ ಎರಡು ದಿನ ಈಗಾಗಲೇ ಸಲಿಸಿದ ಅರ್ಜಿಯಲ್ಲಿ ಏನಾದರೂ ತಿದ್ದುಪಡಿ ಮಾಡಬೇಕಿದ್ದಲ್ಲಿ ಅವಕಾಶ ನೀಡಲಾಗಿದ್ದು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಲು ಸೂಚಿಸಲಾಗಿದೆ.