ಮಡಿಕೇರಿ, ಆ. ೧೮: ಪ್ರಸಕ್ತ (೨೦೨೩-೨೪) ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆ ಅಡಿಯಲ್ಲಿ ೨೦೨೨ ನೇ ವರ್ಷದಲ್ಲಿ (೦೧-೦೧-೨೦೨೨ ರಿಂದ ೩೧-೧೨-೨೦೨೨) ರ ರಾಷ್ಟಿçÃಯ, ಅಂತರರಾಷ್ಟಿçÃಯ ಮತ್ತು ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕವನ್ನು ರಾಷ್ಟçಮಟ್ಟದ ಕ್ರೀಡಾಕೂಟಗಳಲ್ಲಿ ಅಧಿಕೃತವಾಗಿ ಪ್ರತಿನಿಧಿಸಿ ಪದಕ ಪಡೆದ ಅರ್ಹ ಕ್ರೀಡಾಪಟುಗಳು ರಾಷ್ಟಿçÃಯ, ಅಂತರರಾಷ್ಟಿçÃಯ ಮತ್ತು ರಾಜ್ಯ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿದ ಕೊಡಗು ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿ ಇಲ್ಲಿ ಪಡೆದು ಸೆಪ್ಟೆಂಬರ್ ೨ ರೊಳಗೆ ಕಚೇರಿಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗೆ ದೂ.ಸಂ.೦೮೨೭೨-೨೨೦೯೮೬ ಮತ್ತು ತರಬೇತುದಾರರು ೯೯೮೦೮೮೭೪೯೯ ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ತಿಳಿಸಿದ್ದಾರೆ.