ಶನಿವಾರಸಂತೆ, ಆ. ೧೮ : ಪಟ್ಟಣದ ಕಾವೇರಿ ವಿದ್ಯಾಸಂಸ್ಥೆ ಆಂಗ್ಲ ಮಾದ್ಯಮ ಶಾಲೆ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ೨೦೨೩-೨೪ ನೇ ಸಾಲಿನ ಪ್ರಾಥಮಿಕ ಶಾಲಾ ವಲಯ ಮಟ್ಟದ ಕ್ರೀಡಾಕೂಟ ತಾ. ೨೧ ರಂದು ಬೆಳಿಗ್ಗೆ ೯ ಗಂಟೆಗೆ ವಿದ್ಯಾಸಂಸ್ಥೆಯ ಕ್ರೀಡಾ ಮೈದಾನದಲ್ಲಿ ನಡೆಯಲಿದೆ.

ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್.ಎನ್.ದೇವರಾಜ್ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಪ್ರಜ್ವಲ್ ಎಜುಕೇಶನ್ ಟ್ರಸ್ಟ್ನ ಕಾರ್ಯದರ್ಶಿ ಜಿ.ಎಂ.ಹೂವಯ್ಯ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಸಿ.ಕೆ. ದಿನೇಶ್, ವಲಯ ಕ್ರೀಡಾಕೂಟ ಸಮಿತಿ ಕಾರ್ಯದರ್ಶಿ ಕೆ.ಎಂ. ಸುನಂದಾ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಮಲ್ಲಿಕಾರ್ಜುನ್, ದುಂಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸತ್ಯವತಿ ದೇವರಾಜ್, ಶನಿವಾರಸಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್, ಸದಸ್ಯೆ ನಂದಿನಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಾಂಶುಪಾಲ ಎಚ್.ಎನ್. ದೇವರಾಜ್ ತಿಳಿಸಿದ್ದಾರೆ.