ತಾಳತ್ತಮನೆ: ನೇತಾಜಿ ಯುವಕ ಹಾಗೂ ಯುವತಿ ಮಂಡಳಿ ತಾಳತ್ತಮನೆ ವತಿಯಿಂದ ೭೭ನೇ ವರ್ಷದ ಸ್ವಾತಂತ್ರ‍್ಯ ದಿನಾಚರಣೆ ನಡೆಯಿತು. ನಿವೃತ್ತ ಪೊಲೀಸ್ ಗಂಗಾಧರ ಅವರು ಧ್ವಜಾರೋಹಣ ನೆರವೇರಿಸಿದರು, ಹಾಗೂ ತಾಳತ್ತಮನೆ ವ್ಯಾಪ್ತಿಯ ಮಕ್ಕಳಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಸುಂಟಿಕೊಪ್ಪ: ಸಮೀಪದ ಗುಂಡುಗುಟ್ಟಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ೭೭ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸಲಾಯಿತು.

ನಿವೃತ್ತ ಸೇನಾನಿ ಬಿ.ಎಂ. ಚಂದ್ರಶೇಖರ್ ಧ್ವಜರೋಹಣವನ್ನು ನೆರವೇರಿಸಿ ಮಾತನಾಡಿ, ಮಕ್ಕಳಿಗೆ ದೇಶಾಭಿಮಾನವನ್ನು ಬೆಳೆಸಿಕೊಂಡು ಸಮಾಜದ ಸತ್ಪçಜೆಯಾಗಲು ಕರೆ ನೀಡಿ ದೇಶದ ಮಹತ್ವವನ್ನು ತಿಳಿಸಿದರು. ಶಾಲೆಯ ಶಿಕ್ಷಕಿ ಜಯಲಕ್ಷಿö್ಮ ಮಾತನಾಡಿದರು. ಪ್ರಬಾರಿ ಮುಖ್ಯ ಶಿಕ್ಷಕಿ ಗೌರಮಣಿ ಎಸ್.ಎಲ್, ಎ.ಸಿ. ಪೊನ್ನಪ್ಪ, ಬಿ.ಬಿ. ಜಯರಾಮ್, ಎಂ.ಎ. ವಸಂತ್, ಹಿರಿಯ ವಿದ್ಯಾರ್ಥಿಗಳ ತಂಡದ ನಾಯಕ ಮೋಹನ್, ಶಶಿ, ವಿಜಿ, ಪನ್ಯ ಯುವಕ ಸಂಘದ ನಾಯಕ ವಿಶ್ವನಾಥ್, ಎಸ್.ಡಿ.ಎಂ.ಸಿ. ಅಧ್ಯಕ್ಷÀ ಶಂಕರ್, ಎಸ್.ಡಿ.ಎಂ.ಸಿ. ಸದಸ್ಯರು, ಪೋಷಕರು, ನಾಗರಿಕರು ಹಾಜರಿದ್ದರು. ವಿದ್ಯಾರ್ಥಿಗಳಿಂದ ಭಾಷಣ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಮಡಿಕೇರಿ: ಮಡಿಕೇರಿ ನಗರ ಮಂಡಲ ಬಿ.ಜೆ.ಪಿ. ಘಟಕದ ವತಿಯಿಂದ ಜಿಲ್ಲಾ ಬಿ.ಜೆ.ಪಿ. ಕಚೇರಿ ಎದುರು ಧ್ವಜಾರೋಹಣ ಮಾಡ ಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಪಂಡ ರವಿ ಕಾಳಪ್ಪ ಧ್ವಜಾರೋಹಣ ಮಾಡಿದರು.

ಮಡಿಕೇರಿ: ಮಡಿಕೇರಿ ನಗರ ಮಂಡಲ ಬಿ.ಜೆ.ಪಿ. ಘಟಕದ ವತಿಯಿಂದ ಜಿಲ್ಲಾ ಬಿ.ಜೆ.ಪಿ. ಕಚೇರಿ ಎದುರು ಧ್ವಜಾರೋಹಣ ಮಾಡ ಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಪಂಡ ರವಿ ಕಾಳಪ್ಪ ಧ್ವಜಾರೋಹಣ ಮಾಡಿದರು.

ನಗರ ಅಧ್ಯಕ್ಷ ಮನು ಮಂಜುನಾಥ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಬಿ.ಕೆ. ಜಗದೀಶ್, ಖಜಾಂಚಿ ಎಸ್. ಮುರುಘನ್, ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷ ರಾಜೇಶ್, ನಗರಸಭಾ ಉಪಾಧ್ಯಕ್ಷೆ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ. ಸತೀಶ್‌ಕುಮಾರ್, ಸದಸ್ಯರುಗಳಾದ ಕೆ.ಸ್. ರಮೇಶ್, ಕೆ.ಎಂ. ಅಪ್ಪಣ್ಣ, ಶ್ವೇತಾ ಪ್ರಶಾಂತ್, ಮಂಜುಳ, ಚಿತ್ರಾವತಿ. ಕಲಾವತಿ, ಶಾರದಾ ನಾಗರಾಜ, ಉಷಾ ಕಾವೇರಪ್ಪ, ಪಕ್ಷದ ಪ್ರಮುಖರು ಪಾಲ್ಗೊಂಡಿದ್ದರು.ಮಡಿಕೇರಿ: ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ೭೭ನೇ ಸ್ವಾತಂತ್ರೊö್ಯÃತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು. ನಗರದ ವಿದ್ಯಾ ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ದೇಶಕ್ಕೆ ಸ್ವಾತಂತ್ರö್ಯ ತಂದು ಕೊಟ್ಟ ಹಿರಿಯರನ್ನು ಸ್ಮರಿಸಿದ ಅವರು ಬಲಿಷ್ಠ ಭಾರತ ನಿರ್ಮಾಣಕ್ಕೆ ಎಲ್ಲರೂ ಪಣ ತೊಡಬೇಕೆಂದು ಕರೆ ನೀಡಿದರು.

ಗೌಡ ವಿದ್ಯಾ ಸಂಘದ ಕಾರ್ಯದರ್ಶಿ ಪೇರಿಯನ ಉದಯ ಕುಮಾರ್, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಆರ್. ಸೋಮಣ್ಣ, ಸಂಘದ ನಿರ್ದೇಶಕರುಗಳು ಹಾಗೂ ಗೌಡ ಬಾಂಧವರು ಹಾಜರಿದ್ದು ರಾಷ್ಟçಧ್ವಜಕ್ಕೆ ಗೌರವ ಸಲ್ಲಿಸಿದರು.ಕಡಂಗ : ವಿವಿಧೋದ್ದೇಶ ಪ್ರಾರ್ಥಮಿಕ ಕೃಷಿ ಪತ್ತಿನ ಬ್ಯಾಂಕ್‌ನಲ್ಲಿ ೭೭ನೇ ಸ್ವಾತಂತ್ರೊö್ಯÃತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಕೃಷಿ ಪತ್ತಿನ ಸಹಕಾರ ಬ್ಯಾಂಕ್‌ನ ಅಧ್ಯಕ್ಷ ಕೋಡಿರ ಪ್ರಸನ್ನ ತಮ್ಮಯ್ಯ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಅತಿಥಿಗಳು ಸ್ವಾತಂತ್ರೋತ್ಸವದ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯರು ಮತ್ತು ಸಂಸ್ಥೆಯ ಸಿಬ್ಬಂದಿಗಳು ಹಾಜರಿದ್ದರು.ಪೊನ್ನಂಪೇಟೆ: ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಸ್ವಾತಂತ್ರö್ಯ ದಿನಾಚರಣೆ ಪ್ರಯುಕ್ತ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಬಿ.ಎಂ. ಪಾರ್ವತಿ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಪ್ರತಿಯೊಬ್ಬರೂ ದೇಶ ಪ್ರೇಮವನ್ನು ಮೈಗೂಡಿಸಿ ಕೊಂಡು ದೇಶ ಕಟ್ಟುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಸೈನ್ಯಕ್ಕೆ ಸೇರುವ ಮೂಲಕ ದೇಶಸೇವೆಗೆ ಮುಂದಾಗುವAತೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಕಾವೇರಿ ಕಾಲೇಜು ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ ಮಾತನಾಡಿ ನಮ್ಮ ಹಿರಿಯರ ತ್ಯಾಗ ಬಲಿದಾನದಿಂದ ದೊರಕಿರುವ ಸ್ವಾತಂತ್ರ‍್ಯವನ್ನ ಸಂರಕ್ಷಿಸಿಕೊAಡು ಹೋಗಬೇಕಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.

ಎನ್.ಸಿ.ಸಿ,, ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ದೇಶ ಭಕ್ತಿಗೀತೆಗಳು ಮೂಡಿಬಂದವು. ಕಾರ್ಯಕ್ರಮದಲ್ಲಿ ಕಾವೇರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಸಂಚಿಕೆ ‘ಕಾವೇರಿ ದರ್ಶಿನಿ’ ಯನ್ನು ಗೋಣಿಕೊಪ್ಪಲು ಕಾವೇರಿ ಎಜುಕೇಷನ್ ಸೊಸೈಟಿ ನಿರ್ದೇಶಕ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ ಬಿಡುಗಡೆಗೊಳಿಸಿದರು. ಈ ಸಂದರ್ಭ ಕಾವೇರಿ ಪದವಿ ಪೂರ್ವ ಕಾಲೇಜು ಎಂದರು.

ಎನ್.ಸಿ.ಸಿ,, ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ದೇಶ ಭಕ್ತಿಗೀತೆಗಳು ಮೂಡಿಬಂದವು. ಕಾರ್ಯಕ್ರಮದಲ್ಲಿ ಕಾವೇರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಸಂಚಿಕೆ ‘ಕಾವೇರಿ ದರ್ಶಿನಿ’ ಯನ್ನು ಗೋಣಿಕೊಪ್ಪಲು ಕಾವೇರಿ ಎಜುಕೇಷನ್ ಸೊಸೈಟಿ ನಿರ್ದೇಶಕ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ ಬಿಡುಗಡೆಗೊಳಿಸಿದರು. ಈ ಸಂದರ್ಭ ಕಾವೇರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಎಸ್.ಎಸ್. ಮಾದಯ್ಯ, ನಿವೃತ್ತ ಸೈನಿಕ ಸುಬ್ಬಯ್ಯ ಜಪ್ಪು , ಎನ್.ಸಿ.ಸಿ. ಅಧಿಕಾರಿಗಳಾದ ಲೆಫ್ಟಿನೆಂಟ್ ಎಂ.ಆರ್. ಆಕ್ರಂ, ಲೆಫ್ಟಿನೆಂಟ್ ಐ.ಡಿ. ಲೇಪಾಕ್ಷಿ, ಎನ್.ಎಸ್.ಎಸ್. ಅಧಿಕಾರಿಗಳಾದ ಎಂ.ಎನ್. ವನಿತ್ ಕುಮಾರ್, ಎನ್.ಪಿ. ರೀತಾ, ಯುವ ರೆಡ್ ಕ್ರಾಸ್ ಅಧಿಕಾರಿ ಎಂ.ಎ. ಕುಶಾಲಪ್ಪ, ಉಪನ್ಯಾಸಕ ವರ್ಗ, ಆಡಳಿತಾತ್ಮಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.ಪೊನ್ನಂಪೇಟೆ: ಪೊನ್ನಂಪೇಟೆ ಕುಶಾಲಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ೭೭ನೇ ಸ್ವಾತಂತ್ರೊö್ಯÃತ್ಸವವನ್ನು ಆಚರಿಸಲಾಯಿತು. ಮುಖ್ಯ ಶಿಕ್ಷಕÀ ವಾಸುವರ್ಮ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಸಹ ಶಿಕ್ಷಕರು, ವಿದ್ಯಾರ್ಥಿಗಳು, ಅಂಗನವಾಡಿ ಮಕ್ಕಳು ಹಾಗೂ ಸಿಬ್ಬಂದಿ ಹಾಜರಿದ್ದರು.ಸುಂಟಿಕೊಪ್ಪ: ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಹಾಗೂ ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ೭೭ನೇ ಸ್ವಾತಂತ್ರೊö್ಯÃತ್ಸವವನ್ನು ಆಚರಿಸ ಲಾಯಿತು. ಸಂತ ಮೇರಿ, ಸಂತ ಅಂತೋಣಿ, ಸುಂಟಿಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಪ್ರೌಢಶಾಲೆ, ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಬ್ಯಾಂಡ್ ವಾದ್ಯದೊಂದಿಗೆ ಪಥ ಸಂಚಲನ ನಡೆಯಿತು. ಸುಂಟಿಕೊಪ್ಪ ಪೊಲೀಸರ ಧ್ವಜ ವಂದನೆಯೊAದಿಗೆ ರಾಷ್ಟçಧ್ವಜ ಆರೋಹಣವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್ ನೆರವೇರಿಸಿದರು.

ಮುಖ್ಯ ಭಾಷಣಕಾರರಾಗಿ ಸಾಹಿತಿ ವಹಿದ್‌ಜಾನ್ ಮಾತನಾಡಿ ಬ್ರಿಟಿಷರ ಕಪಿಮುಷ್ಠಿಯಿಂದ ಭಾರತ ದೇಶಕ್ಕೆ ಸ್ವಾತಂತ್ರö್ಯ ತಂದು ಕೊಡುವಲ್ಲಿ ತ್ಯಾಗ ಬಲಿದಾನ ಮಾಡಿದವರನ್ನು ನೆನೆಯುವುದು ಆದ್ಯ ಕರ್ತವ್ಯವಾಗಿದೆ ಎಂದರು.

ಮಾಜಿ ಜಿ.ಪಂ.ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಬಿ.ಭಾರತೀಶ್ ಮಾತನಾಡಿ ಜಾತ್ಯತೀತ, ರಾಷ್ಟçವಾದ ಭಾರತಕ್ಕೆ ಸ್ವಾತಂತ್ರö್ಯ ಬಂದ ನಂತರ ದೇಶದ ಅಭಿವೃದ್ಧಿಗೆ ಹಿರಿಯರು ಮಹತ್ತರ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು. ಮಾಜಿ ಜಿ.ಪಂ.ಸದಸ್ಯ ಪಿ.ಎಂ.ಲತೀಫ್ ನಿಜವಾಗಿ ದೇಶಕ್ಕೆ ಸ್ವಾತಂತ್ರö್ಯ ಇನ್ನೂ ತಲುಪಿಲ್ಲ. ಬಡವರು ಬಡವರಾಗಿಯೇ ಇದ್ದಾರೆ. ಎಲ್ಲರೂ ದೇಶದ ಅಭಿವೃದ್ಧಿಗೆ ಶ್ರಮಿಸಬೇಕೆಂದರು.

ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ. ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್ ೭೭ನೇ ಸ್ವಾತಂತ್ರೊö್ಯÃತ್ಸವದ ಶುಭಾಶಯಗಳನ್ನು ಕೋರಿ ಎಲ್ಲಾ ಕ್ಷೇತ್ರದ ದೇಶ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಹೇಳಿದರು. ವಿವಿಧ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಕಳೆದ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಗೌರವಿಸಲಾಯಿತು. ಮಾಜಿ ಸೈನಿಕ ಜಯಂತ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್, ಗ್ರಾ.ಪಂ.ಸದಸ್ಯ ಮಂಜುನಾಥ್, ಬಿ.ಎಂ.ಸುರೇಶ್, ಆಲಿಕುಟ್ಟಿ, ಪ್ರಸಾದ್ ಕುಟ್ಟಪ್ಪ, ಶಬ್ಬೀರ್, ಸೋಮನಾಥ್, ರಫೀಕ್‌ಖಾನ್, ನಾಗರತ್ನ ರೇಷ್ಮಾ, ಹಸೀನಾ, ವಸಂತಿ, ಮಂಜುಳ, ಗೀತಾ, ಮಾಜಿ ಅಧ್ಯಕ್ಷ ಕೆ.ಇ.ಕರೀಂ, ಎಂ.ಎ.ಉಸ್ಮಾನ್, ಉಪಾಧ್ಯಕ್ಷ ಬಿ.ಕೆ.ಮೋಹನ, ತಾ.ಪಂ.ಮಾಜಿ ಸದಸ್ಯೆ ಓಡಿಯಪ್ಪನ ವಿವiಲಾವತಿ, ಪಂಚಾಯಿತಿ ಲೆಕ್ಕಾ ಪರಿಶೋಧಕಿ ಚಂದ್ರಕಲಾ, ಬಿಲ್ ಕಲೆಕ್ಟರ್ ಶ್ರೀನಿವಾಸ್, ಸಂದ್ಯಾ, ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರುಗಳು ಇದ್ದರು.ಹೊದ್ದೂರು: ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲೇಮಾಡು ಗ್ರಾಮದಲ್ಲಿ ಅಮೃತ ಸರೋವರ ಸಮೀಪ ನಡೆಸಲಾದ ೭೭ನೇ ಸ್ವಾತಂತ್ರö್ಯ ದಿನದ ಅಂಗವಾಗಿ ಭಾರತೀಯ ಸೇನೆಯಲ್ಲಿ ಯೋಧರಾಗಿ ಸೇವೆ ಸಲ್ಲಿಸುತ್ತಿರುವ ಲಾರೆನ್ಸ್ ಅವರು ಧ್ವಜಾರೋಹಣ ಮಾಡಿದರು. ಗ್ರಾ.ಪಂ. ಅಧ್ಯಕ್ಷ ಹೆಚ್.ಎ. ಹಂಸ, ಸದಸ್ಯರುಗಳಾದ ಹೆಚ್. ಮೊಣ್ಣಪ್ಪ, ಕುಸುಮಾವತಿ, ಲಕ್ಷಿö್ಮÃ, ಹಮೀದ್, ಪಿಡಿಓ ಅಬ್ದುಲ್ಲಾ ಮತ್ತಿತರರು ಭಾಗವಹಿಸಿದ್ದರು. ಶನಿವಾರಸಂತೆ: ಭಾರತ ಮಾತೆಯ ಜನ್ಮ ದಿನವನ್ನು ರಾಷ್ಟಿçÃಯ ಹಬ್ಬವಾಗಿ ಆಚರಿಸುವುದರ ಜೊತೆಯಲ್ಲಿ ದೇಶವನ್ನು ದಾಸ್ಯದಿಂದ ಮುಕ್ತಗೊಳಿಸಿ ಸ್ವಾತಂತ್ರ‍್ಯ ತಂದು ಕೊಡಲು ಹೋರಾಡಿದ ಮಹನೀಯರ ತ್ಯಾಗ-ಬಲಿದಾನವನ್ನು ಸ್ಮರಿಸಿ ಗೌರವಿಸಬೇಕು ಎಂದು ಚಿಕ್ಕಕುಂದ ಗ್ರಾಮದ ನಿವೃತ್ತ ಸೈನಿಕ ಸಿ.ಬಿ. ಪ್ರಸನ್ನ ಅಭಿಪ್ರಾಯಪಟ್ಟರು. ಪಟ್ಟಣದ ಬ್ರೆöÊಟ್ ಅಕಾಡೆಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ನಡೆದ ಸ್ವಾತಂತ್ರö್ಯ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚಾದಂತೆ ಆ ದೇಶ ಅಭಿವೃದ್ಧಿ ಹೊಂದುತ್ತದೆ. ತಾಯಂದಿರು ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ವಿದ್ಯಾರ್ಥಿ ದೆಸೆಯಲ್ಲೆ ರಾಷ್ಟçಪ್ರೇಮ, ರಾಷ್ಟçಭಕ್ತಿಯ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಮುಖ್ಯ ಅತಿಥಿ ಸಾಹಿತಿ ಶ.ಗ. ನಯನತಾರಾ ಮಾತನಾಡಿ, ಸ್ವಾತಂತ್ರೊö್ಯÃತ್ಸವ ನಮ್ಮ ದೇಶದ ರಾಷ್ಟಿçÃÃಯ ಹಬ್ಬಗಳಲೆಲ್ಲ ಮಹತ್ವದ ಹಬ್ಬವಾಗಿದೆ. ಭಾರತೀಯರಲ್ಲಿ ಭಾವೈಕ್ಯತೆಯನ್ನು ಮೂಡಿಸಿ, ಭೇದ-ಭಾವ, ತಾರತಮ್ಯವಿಲ್ಲದೇ ಏಕತೆಯನ್ನು ಮೂಡಿಸುವ ಹಬ್ಬವಾಗಿದೆ. ಪುಟ್ಟ ಮಕ್ಕಳಲ್ಲೆ ಪೋಷಕರು ದೇಶ ಸಂಸ್ಕೃತಿ, ಸಂಸ್ಕಾರ, ಐಕ್ಯತೆ ಹಾಗೂ ನಿಜವಾದ ಸ್ವಾತಂತ್ರö್ಯದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಮತ್ತೋರ್ವ ಮುಖ್ಯ ಅತಿಥಿ, ಸಂಪನ್ಮೂಲ ವ್ಯಕ್ತಿ ಸಿ.ಕೆ. ದಿನೇಶ್ ಮಾತನಾಡಿ, ದೇಶ ಸ್ವಾತಂತ್ರ‍್ಯವನ್ನು ಮಹಾನ್ ನಾಯಕರು ಜೀವನವನ್ನೆ ಮುಡಿಪಾಗಿಟ್ಟು ತಂದುಕೊಟ್ಟಿದ್ದಾರೆ. ದೇಶ ನಮಗೇನು ಕೊಟ್ಟಿದೆ ಎಂದು ಪ್ರಶ್ನಿಸುವ ಬದಲು ದೇಶಕ್ಕೆ ನಾವೇನು ಕೊಟ್ಟಿದ್ದೇವೆ ಎಂದು ಚಿಂತನೆ ನಡೆಸಬೇಕು ಎಂದರು. ಪೂರ್ವ ಪ್ರಾಥಮಿಕದಿಂದ ೫ನೇ ತರಗತಿವರೆಗಿನ ವಿದ್ಯಾರ್ಥಿಗಳು ದೇಶಭಕ್ತಿಗೀತೆ, ಭಾಷಣ, ನೃತ್ಯ, ಛದ್ಮವೇಶ ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿ ಪೋಷಕರ ಮನ ರಂಜಿಸಿದರು.

ವಿದ್ಯಾಸಂಸ್ಥೆ ಕಾರ್ಯದರ್ಶಿ ಹೇಮಾ ಪರಮೇಶ್ ಧ್ವಜಾರೋಹಣ ನೆರವೇರಿಸಿ, ಸಮಾರಂಭದ ಅಧ್ಯಕ್ಷತೆ ವಹಿಸಿ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಸಂಸ್ಥೆ ಅಧ್ಯಕ್ಷ ಪರಮೇಶ್, ನಿರ್ದೇಶಕಿ ಸೀತಮ್ಮ, ಪತ್ರಕರ್ತ ಪ್ರಕಾಶ್ಚಂದ್ರ, ಮುಖ್ಯ ಶಿಕ್ಷಕಿ ಚೈತ್ರಾ ಶಿಕ್ಷಕಿಯರು ಹಾಜರಿದ್ದರು. ಶಿಕ್ಷಕಿ ಯೋಗೀಶ್ವರಿ ಕಾರ್ಯಕ್ರಮ ನಿರ್ವಹಿಸಿದರು. ಪ್ರ‍್ರಿ.ಕೆ.ಜಿ. ವಿದ್ಯಾರ್ಥಿಗಳಾದ ಗಾನಶ್ರೀ ಹಾಗೂ ಶ್ರೀಕರ ಸ್ವಾಗತಿಸಿ, ನಿರೂಪಿಸಿದರು.ಗೋಣಿಕೊಪ್ಪಲು: ಸ್ವಾತಂತ್ರೊö್ಯÃತ್ಸ ವದ ಅಂಗವಾಗಿ ಗೋಣಿಕೊಪ್ಪಲುವಿನ ಕಾವೇರಿ ಹಿಲ್ಸ್ ಬಡಾವಣೆಯಲ್ಲಿ ಕಾವೇರಿ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಶಾಂತೆಯAಡ ಮಧು ಮಾಚಯ್ಯ ಮುಂದಾಳತ್ವದಲ್ಲಿ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮನ್ನಕ್ಕಮನೆ ಸೌಮ್ಯ ಬಾಲು, ಧ್ವಜಾರೋಹಣ ನೆರವೇರಿಸಿದರು.

ಗ್ರಾ.ಪಂ. ಸದಸ್ಯರಾದ ಹಕ್ಕಿಮ್ ಹಾಗೂ ನೂರೆರ ರತಿ ಅಚ್ಚಪ್ಪ, ಬಿ.ಎನ್.ಪ್ರಕಾಶ್,ಮಾಜಿ ತಾ.ಪಂ. ಸದಸ್ಯೆ ಅಭಿಬುನ್ನಿಸಾ ಹಲವು ಗಣ್ಯರು ಬಡಾವಣೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ಎಂ.ಟಿ.ಎಲೆನಾ, ಡಿಲನ್ ಅಯ್ಯಪ್ಪ, ಪೊಟೋಗ್ರಾಫರ್ ಸಿ.ಕೆ.ಸುರೇಶ್, ಆರೋಗ್ಯ ಸುರಕ್ಷ ಅಧಿಕಾರಿ ಕೆ.ಆರ್.ಲತಶ್ರೀ ಹಾಗೂ ಆಶಾ ಕಾರ್ಯಕರ್ತೆ ಕೆ.ಪಿ.ಸರಸ್ವತಿ ರವರನ್ನು ಸನ್ಮಾನಿಸಿ ಗೌರವಿಸಿದರು.

ಕಾವೇರಿ ಸಂಘದ ಅಧ್ಯಕ್ಷರಾದ ಶಾಂತೆಯAಡ ಮಧು ಮಾಚಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ರಫಿಕ್, ಸುನೀಲ್, ಉಪಾಧ್ಯಕ್ಷÀ ಧನಲಕ್ಷಿö್ಮ, ಖಜಾಂಜಿ, ಸತ್ಯ, ಗೌರವಾಧ್ಯಕ್ಷ ತೋಮಸ್, ಪದಾಧಿಕಾರಿಗಳಾದ ಸೌಮ್ಯ, ಬಿಂದು ಶೈಲಜ, ಪ್ರವೀಣ, ವರ್ಗೀಸ್, ರಜಾಕ್ ಸೇರಿದಂತೆ ಇನ್ನಿತರರು ಹಾಜರಿದ್ದರು. ಸಂಘದ ಪದಾಧಿಕಾರಿಗಳು ಸೇರಿದಂತೆ ಬಡಾವಣೆಯ ಜನರು ಭಾಗವಹಿಸಿದ್ದರು. ಶಿಫಾನ, ಫಿದಾ, ಪ್ರೀತಲ್, ಪ್ರಾರ್ಥಿಸಿ ಶಿಕ್ಷಕರಾದ ತಿರುನೆಲ್ಲಿಮಾಡ ಜೀವನ್ ನಿರೂಪಿಸಿ, ಚೋನಿರ ಸತ್ಯ ಸ್ವಾಗತಿಸಿ ವಂದಿಸಿದರು.

ಹೊದ್ದೂರು : ಶ್ರೀ ಪ್ರಸನ್ನ ಗಣಪತಿ ಸಂಘದ ಅಶ್ರಯದಲ್ಲಿ ೭೭ನೇ ಸ್ವಾತಂತ್ರö್ಯ ದಿನವನ್ನು ಆಚರಿಸಲಾಯಿತು. ಶ್ರೀ ಶಾಸ್ತ - ಈಶ್ವರ ದೇವಸ್ಥಾನದ ಮುಂಭಾಗದಲ್ಲಿ ಸಂಘದ ಅಧ್ಯಕ್ಷ ಬಿ.ಕೆ. ಚಂದ್ರಶೇಖರ್ ಧ್ವಜಾರೋಹಣ ಮಾಡಿದರು. ನಂತರ ದೇವಾಲಯದ ಸುತ್ತಮುತ್ತಲಿನ ಕಾಡುಗಳನ್ನು ಕಡಿದು ಸ್ವಚ್ಛಗೊಳಿಸಲಾಯಿತು.

ಸಂಘದ ಕಾರ್ಯದರ್ಶಿ ಎಂ.ಆರ್. ರಘು, ಖಜಾಂಚಿ ಜಾಬು ಪೂಣಚ್ಚ, ಚೆಟ್ಟಿಮಾಡ ಜೀವನ್, ಬಿ. ಸುರೇಶ್, ಬಿ.ಎಸ್. ಸತೀಶ್, ತಂಬಾAಡ ಎಂ. ಮೊಣ್ಣಪ್ಪ, ಸಾಬ ಸುಬ್ರಮಣಿ ಭಾಗವಹಿಸಿದ್ದರು.ಗೋಣಿಕೊಪ್ಪಲು: ಕೊಡಗು ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆ, ಸ್ಥಾನೀಯ ಸಮಿತಿ ಗೋಣಿಕೊಪ್ಪಲು ವತಿಯಿಂದ ಸ್ವಾತಂತ್ರೊö್ಯÃತ್ಸವವನ್ನು ಆಚರಿಸ ಲಾಯಿತು. ನಗರದ ಹರಿಶ್ಚಂದ್ರ ಪುರದಲ್ಲಿರುವ ಗೋಣಿಕೊಪ್ಪ ಟ್ರೇರ‍್ಸ್ ಚಾರಿಟೇಬಲ್ ಟ್ರಸ್ಟ್ ಮುಂಭಾಗದಲ್ಲಿ ಸ್ಥಾನೀಯ ಸಮಿತಿಯ ಅಧ್ಯಕ್ಷ ಕಡೆಮಾಡ ಸುನೀಲ್ ಮಾದಪ್ಪ ಧ್ವಜರೋಹಣ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಗೋಣಿಕೊಪ್ಪ ಮರ್ಚೆಂಟ್ ಬ್ಯಾಂಕ್‌ನ ಅಧ್ಯಕ್ಷ ಕಿರಿಯಮಾಡ ಅರುಣ್ ಪೂಣಚ್ಚ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಅಡ್ಡ ದಾರಿ ಹಿಡಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.ಮಾದಕ ವಸ್ತುಗಳ ಸೇವನೆಯಿಂದ ತಮ್ಮ ಆರೋಗ್ಯದ ಮೇಲೆ ಆಗುವ ಪರಿಣಾಮವನ್ನು ಲೆಕ್ಕಿಸದೆ ಇವುಗಳಿಗೆ ದಾಸರಾಗುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಸಾಕಷ್ಟು ಪ್ರಕರಣಗಳು ಇತ್ತೀಚೆಗೆ ವರದಿಯಾಗಿವೆ. ಈ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸುವ ಕೆಲಸ ತ್ವರಿತಗತಿಯಲ್ಲಿ ಮುಂದುವರೆಯಬೇಕು. ಇದರಿಂದ ಒಂದಷ್ಟು ಯುವಕರನ್ನು ತಿದ್ದುವ ಕೆಲಸ ಆಗಲಿದೆ ಎಂದರು.

ಸ್ಥಾನೀಯ ಸಮಿತಿ ಅಧ್ಯಕ್ಷ ಕಡೇಮಾಡ ಸುನೀಲ್ ಮಾದಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚೇಂಬರ್ ಆಫ್ ಕಾಮರ್ಸ್ನ ಮಾಜಿ ಅಧ್ಯಕ್ಷ ಬಿ.ಎನ್. ಪ್ರಕಾಶ್, ಹಿರಿಯ ವರ್ತಕ ಕೆ.ಎಂ.ಅಜಿತ್ ಅಯ್ಯಪ್ಪ, ಹಿರಿಯ ವೈದ್ಯಾಧಿಕಾರಿ ಡಾ.ಶಿವಪ್ಪ, ಡಾ.ಚಂದ್ರಶೇಖರ್ ಸೇರಿದಂತೆ ಇನ್ನಿತರ ಪ್ರಮುಖರು ಸ್ವಾತಂತ್ರೊö್ಯÃತ್ಸವದ ಕುರಿತು ಮಾತನಾಡಿದರು. ಎಫ್‌ಕೆಸಿಸಿಯ ಕಾಡ್ಯಮಾಡ ಗಿರೀಶ್ ಗಣಪತಿ, ಹಿರಿಯ ವರ್ತಕ ಅಹಮ್ಮದ್, ಮಾಜಿ ತಾ.ಪಂ.ಸದಸ್ಯೆ ಅಭಿಬುನ್ನಿಸಾ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಚೇಂಬರ್‌ನ ನಿರ್ದೇಶಕ ಚೇಂದAಡ ಸುಮಿ ಸುಬ್ಬಯ್ಯ ಪ್ರಾರ್ಥಿಸಿ, ಉಪಾಧ್ಯಕ್ಷ ಪೊನ್ನಿಮಾಡ ಸುರೇಶ್ ಸ್ವಾಗತಿಸಿ, ಖಜಾಂಜಿ ಮನೋಹರ್ ನಿರೂಪಿಸಿ ವಂದಿಸಿದರು.