ಮಡಿಕೇರಿ, ಆ. ೧೭: ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೊಣಂಜಗೇರಿ ಪಾರಾಣೆ ಗ್ರಾಮದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ನಾಯಿದಾಳಿ ಪ್ರಕರಣಕ್ಕೆ ಸಂಬAಧಿಸಿದAತೆ ನಾಯಿಯ ಮಾಲೀಕ ಬಿ.ಎ. ಮಾಚಯ್ಯ ವಿರುದ್ಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಗ್ಯ ಇಲಾಖೆಯ ಸಿಬ್ಬಂದಿ ಕೆ.ಕೆ. ಭವ್ಯ ಅವರು ಬಾಣಂತಿಯ ಆರೋಗ್ಯ ವಿಚಾರಿಸಲು ತೆರಳಿದ ಸಂದರ್ಭ ‘ರಾಟ್ ವೈಲರ್’ ಸಾಕುನಾಯಿ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿತ್ತು. ಗಾಯಗೊಂಡಿರುವ ಭವ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೊಲೀಸ್ ಇಲಾಖೆ ಎಚ್ಚರಿಕೆ
ಮನೆಯ ಸಾಕು ನಾಯಿಗಳು ಯಾವುದೇ ವ್ಯಕ್ತಿಗಳ ಮೇಲೆ ದಾಳಿ ಮಾಡಿರುವ ಘಟನೆ ಕಂಡು ಬಂದಲ್ಲಿ ಸಾಕು ನಾಯಿ ಮಾಲೀಕರ ಮೇಲೆ ಸೆಕ್ಷನ್ ೨೮೯ ಐಪಿಸಿಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಹಾಗೂ ೬ ತಿಂಗಳ ಜೈಲು ವಾಸ ಮತ್ತು ದಂಡ ವಿಧಿಸಲಾಗುವುದು ಎಂದು ಕೊಡಗು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
(ಮೊದಲ ಪುಟದಿಂದ) ಸಾಕು ನಾಯಿ ದಾಳಿ ಮಾಡಿರುವ ಘಟನೆಗಳು ಕಂಡುಬAದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ ೧೧೨ ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾAಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮಾಹಿತಿ ಒದಗಿಸುವವರ ವಿವರ ಬಹಿರಂಗಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.