ಮಡಿಕೇರಿ, ಆ. ೧೭: ಕನ್ನಡ ಸಾಹಿತ್ಯ ಪರಿಷತ್ ಮತ್ತು ವೀರಾಜಪೇಟೆ ತಾಲೂಕು ಘಟಕ ಅಮ್ಮತ್ತಿ ಹೋಬಳಿ ವತಿಯಿಂದ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ ತಾ.೧೯ರಂದು ಪಾಲಿಬೆಟ್ಟ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ.

ಪತ್ರಿಕಾ ಪ್ರಕಟಣೆ ನೀಡಿದ ಹೋಬಳಿ ಅಧ್ಯಕ್ಷ ಟಿ,ಹೆಚ್ ಮಂಜುನಾಥ್, ಬೆಳಿಗ್ಗೆ ೧೦.೩೦ ಗಂಟೆಗೆ ಎಂ.ಕೆ. ಚಂಗಪ್ಪ ಜ್ಞಾಪಕಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಕಾವೇರಿ ಕಾಲೇಜು ಉಪನ್ಯಾಸಕ ಎಸ್.ಎಂ. ರಜನಿ, ಕನ್ನಡ ಮತ್ತು ಕೊಡವ ಭಾಷೆ ಬೆಳವಣಿಗೆ ವಿಚಾರವಾಗಿ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವಕಾಮತ್, ಗ್ರಾಮ ಪಂಚಾಯಿತಿ ಅಧ್ಯಕೆÀ್ಷ ಲೀಲಾವತಿ, ಪದವಿಪೂರ್ವ ಕಾಲೇಜು ಉಪನ್ಯಾಸಕ ಶಿವದಾಸ್, ವೀರಾಜಪೇಟೆ ತಾಲೂಕು ಕಸಾಪ ಅಧ್ಯಕ್ಷ ರಾಜೇಶ್ ಪದ್ಮನಾಭ, ಪದವಿಪೂರ್ವ ಕಾಲೇಜು ಉಪಾಧ್ಯಕ್ಷ ಎಂ.ಎA. ಕಾಳಪ್ಪ, ತಾ.ಪಂ. ಮಾಜಿ ಸದಸ್ಯ ರಾಮದಾಸ್ ಪಾಲ್ಗೊಳ್ಳಲಿದ್ದಾರೆ