ಕುಶಾಲನಗರ, ಆ. ೧೮: ಕುಶಾಲನಗರದಲ್ಲಿ ನೂತನವಾಗಿ ನ್ಯಾಯಾಲಯ ಕಟ್ಟಡ ನಿರ್ಮಾಣಗೊಳ್ಳಲಿರುವ ಸ್ಥಳಕ್ಕೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶ್ಯಾಮ ಪ್ರಸಾದ್ ಭೇಟಿ ನೀಡಿದರು. ಕುಶಾಲನಗರ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿರುವ ಜಾಗದಲ್ಲಿ ಮಾರ್ಚ್ ತಿಂಗಳಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು.
ಈ ಸಂದರ್ಭ ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಸಾದ್, ಕುಶಾಲನಗರ ವಕೀಲರ ಸಂಘದ ಅಧ್ಯಕ್ಷ ಆರ್.ಕೆ. ನಾಗೇಂದ್ರ ಬಾಬು, ಪ್ರಮುಖರಾದ ವೆಂಕಟರಮಣ ಭಟ್ ಇದ್ದರು.