ಮಡಿಕೇರಿ, ಆ. ೧೭ : ಚುನಾ ವಣೆ ಸಂದರ್ಭ ರಾಜ್ಯದ ಜನತೆಗೆ ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳು ಅನುಷ್ಠಾನಗೊಳ್ಳು ತ್ತಿದ್ದು, ಸರ್ಕಾರ ನುಡಿದಂತೆ ನಡೆಯು ತ್ತಿದೆ. ಕಾಂಗ್ರೆಸ್ ಕಾರ್ಯ ಕರ್ತರು ಪ್ರತೀ ಬೂತ್ ಮಟ್ಟದಲ್ಲಿ ಗ್ಯಾರಂಟಿ ಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕೆಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಕರೆ ನೀಡಿದರು.
ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಡಾ.ಅಂಬೇಡ್ಕರ್ ಭವನದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜ ನಿಕರಿಗೆ ಯಾವುದೇ ರೀತಿಯ ಸಮಸ್ಯೆಯಾದರೂ ಗಮನಕ್ಕೆ ತಂದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ ಡಾ.ಮಂಥರ್ ಗೌಡ, ಅಧಿಕಾರಿಗಳು ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಜನಸೇವೆ ಮಾಡಬೇಕು ಎಂದರು.
ಚುನಾವಣಾ ಸಂದರ್ಭ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಸರ್ಕಾರ ನುಡಿದಂತೆ ನಡೆದಿದೆ ಎಂದು ಹೇಳಿದ ಅವರು, ಪ್ರತಿ ವಾರ್ಡ್ಗಳಿಗೂ ಭೇಟಿ ನೀಡಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.
ಮಡಿಕೇರಿ ನಗರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಈಗಾಗಲೇ ಯೋಜನೆಯನ್ನು ರೂಪಿಸಿದ್ದು, ಬಡ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮನೆ ನಿರ್ಮಾಣ ಸೇರಿದಂತೆ ವಿವಿಧ ಕಾರ್ಯ ಕ್ರಮಗಳನ್ನು ಕಾರ್ಯಗತಗೊಳಿ ಸಲಾಗುವುದು ಎಂದು ತಿಳಿಸಿದರು.
ಮಾಜಿ ಸಚಿವ ಯಂ.ಸಿ. ನಾಣಯ್ಯ ಮಾತನಾಡಿ, ೨೦-೨೫ ವರ್ಷಗಳ ನಂತರ ಕಾಂಗ್ರೆಸ್ ಪಕ್ಷ ಕೊಡಗಿನಲ್ಲಿ ಜಯ ಸಾಧಿಸಿದೆ. ಡಾ. ಮಂಥರ್ ಗೌಡ ಹಾಗೂ ಎ.ಎಸ್. ಪೊನ್ನಣ್ಣ ಅವರ ಶ್ರಮ ಇದರಲ್ಲಿ ಅಡಗಿದೆ ಎಂದರು.
ಮುಖ್ಯಮAತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಶಿವ ಕುಮಾರ್ ಅವರ ನೇತೃತ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಭರ ವಸೆಗಳು ಈಡೇರುತ್ತಿದೆ. ಮುಂದಿನ ದಿನಗಳಲ್ಲೂ ಜನರ ಬೇಕು ಬೇಡಿಕೆ ಗಳನ್ನು ಈಡೇರಿಸುವ ಕೆಲಸ ಆಗಬೇಕು ಎಂದು ಸಲಹೆ ನೀಡಿದರು.
ಕೆಪಿಸಿಸಿ ಮಾಧ್ಯಮ ಸಂವಹನ ವಕ್ತಾರ ಟಿ.ಪಿ. ರಮೇಶ್ ಮಾತನಾಡಿ, ಕ್ಷೇತ್ರದ ಮತದಾರರ ಆಶೀರ್ವಾದ ದಿಂದ ಬಹುಮತದೊಂದಿಗೆ ಡಾ. ಮಂಥರ್ ಗೌಡ ಅವರು ಗೆಲುವು ಸಾಧಿ ಸಿದ್ದಾರೆ. ಜನರ ಪ್ರೀತಿ ವಿಶ್ವಾಸಕ್ಕಾಗಿ ನಾವೆಲ್ಲರೂ ಪ್ರಾಮಾಣಿಕ ಸೇವೆ ಮಾಡಬೇಕಾಗಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಬಿಜೆಪಿ ಭದ್ರಕೋಟೆಯಾಗಿದ್ದ ಕೊಡಗಿನಲ್ಲಿ ಅನೇಕ ಸವಾಲುಗಳ ನಡುವೆ ಕಾಂಗ್ರೆಸ್ ಗೆಲುವು ಸಾಧಿಸಿದೆ. ಇಬ್ಬರು ಶಾಸಕರ ಪರಿಶ್ರಮದಿಂದ ಇಂದು ಜಿಲ್ಲೆಯಲ್ಲಿ ಕಾಂಗ್ರೆಸ್ ಗಟ್ಟಿಯಾಗುತ್ತಿದೆ. ಮುಂದಿನ ದಿನಗಳಲ್ಲಿ ಭಿನ್ನಭಿಪ್ರಾಯಗಳನ್ನು ಬದಿಗಿಟ್ಟು ಪಕ್ಷವನ್ನು ಸಂಘಟಿಸುವ ಕೆಲಸ ಆಗಬೇಕು ಎಂದರು.
ಕೊಡಗಿಗೆ ಸಂಸದ ಪ್ರತಾಪ್ ಸಿಂಹ ಅವರ ಕೊಡುಗೆ ಶೂನ್ಯ ಎಂದು ಅವರು ಟೀಕಿಸಿದರು.
ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್ ಮಾತನಾಡಿ, ಜಿಲ್ಲೆಯ ಪ್ರಗತಿ, ಜನರ ಭಾವನೆ, ವಿಚಾರಗಳನ್ನು ಅರಿತು ಪ್ರತಿಯೊಬ್ಬರು ಕಾರ್ಯನಿರ್ವಹಿಸಬೇಕು ಎಂದರು.
ಕೆಪಿಸಿಸಿ ಸದಸ್ಯ ಹೆಚ್.ಎಂ. ನಂದಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮಡಿಕೇರಿ ನಗರಾಧ್ಯಕ್ಷ ಬಿ.ವೈ. ರಾಜೇಶ್, ಎಸ್.ಸಿ. ಘಟಕದ ಜಿಲ್ಲಾ ಧ್ಯಕ್ಷ ಜಯೇಂದ್ರ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಾಸಕ ಡಾ. ಮಂಥರ್ ಗೌಡ ಹಾಗೂ ಕಾಂಗ್ರೆಸ್ ಜಿಲ್ಲಾ ಗೌರವ ಕಾರ್ಯದರ್ಶಿ, ಹಿರಿಯ ಮುಖಂಡ ವಿ.ಪಿ.ಸುರೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾ ಯಿತು. ಮಡಿಕೇರಿ ನಗರ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ವಿವಿಧ ಘಟಕಗಳಿಗೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸಲಾಯಿತು.
ಇದೇ ಸಂದರ್ಭ ನಿರಂಜನ್ ಹಾಗೂ ಸಂಗಡಿಗರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಮಡಿಕೇರಿ ಬ್ಲಾಕ್ ಅಧ್ಯಕ್ಷ ಹೆಚ್.ಎಂ. ಹಂಸ, ಕೆಪಿಸಿಸಿ ಅಲ್ಪ ಸಂಖ್ಯಾತರ ಘಟಕದ ಸದಸ್ಯ ಅಬ್ದುಲ್ ಗಫೂರ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್, ಸೇವಾದಳದ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಕೆ.ಆರ್.ದಿನೇಶ್, ಮಾಜಿ ಸೈನಿಕ ಘಟಕದ ಜಿಲ್ಲಾಧ್ಯಕ್ಷ ಗಣೇಶ್, ಯೂತ್ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಪ್ರಮೋದ್, ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷ ಖಲೀಲ್ ಭಾಷ, ಹಿಂದುಳಿದ ಘಟಕದ ಬ್ಲಾಕ್ ಅಧ್ಯಕ್ಷ ಜಿ.ಸಿ.ಜಗದೀಶ್, ಎಸ್.ಸಿ.ಘಟಕದ ಬ್ಲಾಕ್ ಅಧ್ಯಕ್ಷ ಮುದ್ದುರಾಜ್, ಮಡಿಕೇರಿ ನಗರದ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ, ಯೂತ್ ಕಾಂಗ್ರೆಸ್ ನಗರಾಧ್ಯಕ್ಷ ದರ್ಶನ್ ಪೆಮ್ಮಯ್ಯ, ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ.ಪೀಟರ್, ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರು ಗಳಾದ ಯಾಕೂಬ್, ಪ್ರಕಾಶ್ ಆಚಾರ್ಯ, ಸದಾ ಮುದ್ದಪ್ಪ, ನಗರಸಭೆ ಮಾಜಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಪ್ರಮುಖರಾದ ಜುಲೆಕಾಬಿ, ಸ್ವರ್ಣಲತ, ಮಿನಾಜ್, ದಿವ್ಯ, ಪ್ರೇಮಲಿಂಗಪ್ಪ, ಪ್ರೆೆÃಮ ಕೃಷ್ಣಪ್ಪ, ಶಶಿ, ಕವನ್ ಕೊತ್ತೋಳಿ, ರಿಯಾ ಝುದ್ದೀನ್ ಸೇರಿದಂತೆ ಬೂತ್ ಅಧ್ಯ ಕ್ಷರು, ಮಡಿಕೇರಿ ನಗರದ ಪದಾ ಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಡಿಸಿಸಿ ಸದಸ್ಯ ಲಿಯಾಖತ್ ಆಲಿ ಪ್ರಾರ್ಥಿಸಿ, ಮಡಿಕೇರಿ ನಗರ ಪ್ರಧಾನ ಕಾರ್ಯದರ್ಶಿ ಆರ್.ಪಿ. ಚಂದ್ರ ಶೇಖರ್ ಸ್ವಾಗತಿಸಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್ ನಿರೂಪಿಸಿ, ಡಿಸಿಸಿ ಮಾಜಿ ಸದಸ್ಯ ಟಿ.ಎಂ. ಅಯ್ಯಪ್ಪ ವಂದಿಸಿದರು.