ಮಡಿಕೇರಿ, ಆ. ೧೯: ದ್ವಿತೀಯ ಪಿಯುಸಿ ೨ನೇ ಪೂರಕ ಪರೀಕ್ಷೆಯು ಆಗಸ್ಟ್ ೨೧ ರಿಂದ ಸೆಪ್ಟೆಂಬರ್ ೨ ರವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಕ್ಕೆ ನಿಯೋಜಿಸುವ ಅಧಿಕಾರಿ ವರ್ಗದವರು ಅನಗತ್ಯ ಕಾರಣಗ ಳಿಂದ ತಮ್ಮ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡದೆ ಪರೀಕ್ಷೆ ಮುಗಿಯುವವರೆಗೂ ದಿನದ ೨೪ ಗಂಟೆಯು ಸಹ ಆನ್ ನಲ್ಲಿ ಇಡುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ೨ನೇ ಪೂರಕ ಪರೀಕ್ಷೆ ಸಂಬAಧ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರೀಕ್ಷಾ ಸಮಯದಲ್ಲಿ ಯಾವುದೇ ರೀತಿಯ ಅವ್ಯವಹಾರಗಳಿಗೆ ಅವಕಾಶ ಕೊಡದೆ ಪರೀಕ್ಷಾ ಪಾವಿತ್ರತೆಯನ್ನು ಕಾಪಾಡುವಂತೆ ಹಾಗೂ ಗುಣಮಟ್ಟದ ಪರೀಕ್ಷೆ ನಡೆಸಲು ಅವರು ತಿಳಿಸಿದರು.

ಪರೀಕ್ಷಾ ಸಮಯದಲ್ಲಿ ವಿದ್ಯಾ ರ್ಥಿಗಳಿಗೆ ಸೂಕ್ತ ರೀತಿಯ ವ್ಯವಸ್ಥೆ ಯನ್ನು ಕಲ್ಪಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಹಾಗೂ ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ಅವುಗಳು ಚಲನೆಯಲ್ಲಿ ವೆಯೇ ಎಂದು ಪರೀಕ್ಷಿಸಬೇಕು ಹಾಗೂ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆ ಹಾಗೂ ಉತ್ತರ ಪತ್ರಿಕೆಯನ್ನು ಕೊಂಡೊ ಯ್ಯುವ ವಾಹನಗಳಿಗೆ ಜಿಪಿಎಸ್ ಕಡ್ಡಾ ಯವಾಗಿ ಅಳವಡಿಕೆ ಮಾಡಬೇಕು. ಅದರ ರೂಟ್ ಮ್ಯಾಪ್ ಪರೀಕ್ಷಿಸಬೇಕು.

ಪರೀಕ್ಷೆ ನಡೆಯುವ ಕೇಂದ್ರದ ಸುತ್ತ ೨೦೦ ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸ ಲಾಗುವುದು. ಪರೀಕ್ಷಾ ಕೇಂದ್ರದ ಸುತ್ತಮುತ್ತ ಇರುವ ಜೆರಾಕ್ಸ್, ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚ ಬೇಕು ಹಾಗೂ ಪ್ರತಿ ಪರೀಕ್ಷಾ ಕೇಂದ್ರ ಗಳಿಗೆ ಪುರುಷ ಪೊಲೀಸ್‌ಪೇದೆ ಜೊತೆಗೆ ಮಹಿಳಾ ಪೊಲೀಸ್ ಪೇದೆ ಯನ್ನು ಸಹ ನೇಮಿಸಬೇಕು ಮತ್ತು ಪರೀಕ್ಷಾ ಕೇಂದ್ರಕ್ಕೆ ನರ್ಸ್ಗಳನ್ನು ನೇಮಿಸುವಂತೆ ಆರೋಗ್ಯಾ ಧಿಕಾರಿಗಳಿಗೆ ಸೂಚನೆ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾ ಖೆಯ ಉಪ ನಿರ್ದೇಶಕರಾದ ಪುಟ್ಟರಾಜು ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ಒಟ್ಟು ೧೨ ದಿನಗಳು ಪರೀಕ್ಷೆ ನಡೆಯಲಿದ್ದು, ೩ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.

ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಸೋಮವಾರ ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ವೀರಾಜಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇ ಜಿನಲ್ಲಿ ಪರೀಕ್ಷೆ ನಡೆಯಲಿದ್ದು ಒಟ್ಟಾರೆ ಜಿಲ್ಲೆಯ ೬೫೧ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಬಳಕೆ, ಕೈಗಡಿಯಾರ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳನ್ನು ಕೊಂಡೊಯ್ಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಉಪ ವಿಭಾಗಾಧಿ ಕಾರಿ ಡಾ.ಯತೀಶ್ ಉಲ್ಲಾಳ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್ ಕುಮಾರ್, ಮಡಿಕೇರಿ ತಹಶೀಲ್ದಾರ್ ಪಿ.ಸಿ.ಪ್ರವೀಣ್ ಕುಮಾರ್, ಜಿಲ್ಲಾ ಖಜಾನೆಯ ಉಪ ನಿರ್ದೇಶಕರಾದ ಪದ್ಮಜಾ, ಪೊಲೀಸ್ ವೃತ್ತ ನಿರೀಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮಾರ್ಗ ಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಹಾಗೂ ಇತರರು ಪಾಲ್ಗೊಂಡಿದ್ದರು.

ಕೇAದ್ರಗಳ ಸುತ್ತ ನಿಷೇಧಾಜ್ಞೆ

ಕೊಡಗು ಜಿಲ್ಲೆಯಲ್ಲಿ ತಾ. ೨೧ ರಿಂದ ಸೆಪ್ಟೆಂಬರ್ ೨ ರವರೆಗೆ ನಡೆ ಯುವ ದ್ವಿತೀಯ ಪಿಯುಸಿ ೨ನೇ ಪೂರಕ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ ೧೯೭೩ ರ ಕಲಂ ೧೪೪ ರಡಿ ದತ್ತವಾದ ಅಧಿಕಾರ ದಂತೆ ಮಡಿಕೇರಿ, ವೀರಾಜಪೇಟೆ ಮತ್ತು ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಈ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.

ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ.

ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟಾçನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಯಾವುದೇ ನಿಯಮಬಾಹಿರ ಕಾರ್ಯಗಳನ್ನು ನಡೆಸತಕ್ಕದ್ದಲ್ಲ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ.

ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬAಧಿಸಿದ ಯಾವುದೇ ವಿಷಯಗಳನ್ನು/ ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗು ವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ೨೦೦ ಮೀಟರ್ ವ್ಯಾಪ್ತಿಯಲ್ಲಿರುವ ಕಂಪ್ಯೂಟರ್ ಮತ್ತು ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿ ಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.