ಕೊಡ್ಲಿಪೇಟೆ, ಆ. ೧೯: ಸಾರ್ವ ಜನಿಕರಿಂದ ಸಲ್ಲಿಕೆಯಾಗುವ ಅರ್ಜಿಗಳನ್ನು ವಿಲೇವಾರಿ ಮಾಡಲು ವಿಳಂಬ ನೀತಿ ಅನುಸರಿಸಬಾರದು. ಎಲ್ಲಾ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಅಧಿಕಾರಿಗಳು ಮುಂದಾಗಬೇಕೆAದು ಶಾಸಕ ಡಾ. ಮಂಥರ್‌ಗೌಡ ಸೂಚಿಸಿದರು.

ಸಮೀಪದ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಕಚೇರಿಯ ಆವರ ಣದಲ್ಲಿ ಸಾರ್ವಜನಿಕರ ಕುಂದುಕೊರ ತೆಗಳ ಬಗ್ಗೆ ಸಭೆ ನಡೆಸಿ, ಸಮಸ್ಯೆಗಳನ್ನು ಆಲಿಸಿ ಅವರು ಮಾತನಾಡಿದರು. ಬ್ಯಾಡಗೊಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳ ಸಾರ್ವಜನಿಕರು ತಮ್ಮ ಸಮಸ್ಯೆಗಳ ಕುರಿತು ಶಾಸಕರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಶಾಸಕರು, ಕೆಲವೊಂದು ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡುವಂತೆ ಸಂಬA ಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೆ, ಸ್ಥಳದಲ್ಲೇ ಕೆಲವು ಸಮಸ್ಯೆಗಳನ್ನು ಪರಿಹರಿಸಿದರು.

ಶಾಸಕರ ಅನುದಾನದಿಂದ ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕೆಲವೊಂದು ಕೆಲಸಗಳನ್ನು ಮಾಡಿಕೊಡುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಗ್ರಾ.ಪಂ. ಆಡಳಿತ ಮಂಡಳಿಯ ವತಿಯಿಂದ ಶಾಸಕರನ್ನು ಸನ್ಮಾನಿಸಿ, ಗ್ರಾಮ ಪಂಚಾಯಿತಿಯ ಕೆಲವು ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲಾಯಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷರಾದ ಮಹಮ್ಮದ್ ಹನೀಫ್ ವಹಿಸಿದ್ದರು. ವೇದಿಕೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷರು ಮತ್ತು ಸದಸ್ಯರುಗಳು ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಕೊಡ್ಲಿಪೇಟೆಯಲ್ಲಿ: ಕೊಡ್ಲಿಪೇಟೆ ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಶಾಸಕ ಡಾ.ಮಂಥರ್ ಗೌಡ ರವರು ಸಾರ್ವಜನಿಕ ಕುಂದು ಕೊರತೆ ಸಭೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ಮನವಿ ಸಲ್ಲಿಸಿದರು.

ಈ ಸಂದರ್ಭ ಮಾತನಾಡಿದ ಶಾಸಕರು, ಹಲವು ವರ್ಷಗಳಿಂದ ಸಮಸ್ಯೆಗಳು ಬಗೆಹರಿಯದೇ ಇರುವುದಕ್ಕೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷö್ಯ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಆದ್ಯತೆಯ ಮೇರೆ ಜನರ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಗೀತಾ ತ್ಯಾಗರಾಜ್ ವಹಿಸಿದ್ದರು. ಹಿರಿಯ ಸದಸ್ಯ ಕೆ.ಆರ್.ಚಂದ್ರಶೇಖರ್ ಮಾತನಾಡಿ, ಹಿಂದಿನ ಜನಪ್ರತಿನಿಧಿಗಳು ಯಾರೂ ಸಹ ಗ್ರಾಮ ಮಟ್ಟದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿರಲಿಲ್ಲ. ನೂತನ ಶಾಸಕರ ಈ ಪ್ರಯತ್ನ ಜನ ವಲಯದಲ್ಲಿ ಆತ್ಮ ವಿಶ್ವಾಸ ಮೂಡಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಗ್ರಾ.ಪಂ. ವತಿಯಿಂದ ಶಾಸಕರನ್ನು ಸನ್ಮಾನಿಸ ಲಾಯಿತು. ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಯಶೋದಾ ಧರ್ಮಪ್ಪ, ಸದಸ್ಯರಾದ ನಗೀನಾ ಭಾನು, ಅಪ್ಸರ ಬೇಗಂ, ಪ್ರಸನ್ನ, ಹನೀಫ್ ಕಿರಿಕೊಡ್ಲಿ, ವಹಾಬ್, ನಂದೀಶ್, ಮುತ್ತಯ್ಯ, ಗ್ರಾ.ಪಂ. ಮಾಜಿ ಅಧ್ಯಕ್ಷ ಔರಂಗ ಜೇಬ್ ಇತರರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಹಂಡ್ಲಿ ಗ್ರಾಮ ಪಂಚಾಯತ್ ಹಾಗೂ ಬೆಸೂರು ಪಂಚಾಯತ್‌ನಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಲಾಯಿತು. ಈ ಸಂದರ್ಭ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್, ಕಂದಾಯ ಪರಿವೀಕ್ಷಕ ಮನು, ತಾಲೂಕು ವಸತಿ ಮೇಲ್ವಿಚಾರಕ ಪ್ರದೀಪ್, ಜಿಲ್ಲಾ ಪಂಚಾಯತ್ ಇಂಜಿನಿಯರ್ ಟಿ.ಪಿ. ವೀರೇಂದ್ರ, ಸಲೀಂ, ಲೋಕೋಪಯೋಗಿ ಇಲಾಖೆಯ ವೆಂಕಟೇಶ್ ನಾಯಕ್, ಅರ್ಬಾಜ್, ಹೆಚ್.ಆರ್.ಪಿ. ಇಲಾಖೆಯ ರಶೀದ್ ಸೇರಿದಂತೆ ಇತರ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.