ಮಡಿಕೇರಿ, ಆ. ೧೯: ಮಡಿಕೇರಿ ದಸರಾ ದಶಮಂಟಪ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀ ಕೋದಂಡರಾಮ ದೇವಾಲಯ ದಸರಾ ಸಮಿತಿಯ ಮಂಜುನಾಥ್ ಇಂದು ಅಧಿಕಾರ ಸ್ವೀಕರಿಸಿದರು.

ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಮನು ಮಂಜುನಾಥ್ ಅಧಿಕಾರ ಹಸ್ತಾಂತರಿಸಿದರು.

ಇದೇ ಸಂದರ್ಭ ನಿಕಟಪೂರ್ವ ಅಧ್ಯಕ್ಷ ಮನು ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಮಡಿಕೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷ ಕೆ.ಎಸ್. ರಮೇಶ್, ಸಲಹೆಗಾರ ಟಿ.ಪಿ. ರಾಜೇಂದ್ರ, ಗೌರವಾಧ್ಯಕ್ಷ ತಾತಪಂಡ ನಂದ ಉತ್ತಪ್ಪ, ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯ ಪ್ರಧಾನ ಅರ್ಚಕ ಪಿ.ಪಿ. ಚಾಮಿ, ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯ ದಸರಾ ಸಮತಿ ಅಧ್ಯಕ್ಷ ಕೆ.ಆರ್. ರವಿ, ಸಲಹೆಗಾರ ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.