ಪೊನ್ನಂಪೇಟೆ, ಆ. ೨೦: ಗೋಣಿ ಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಗ್ರಂಥಾಲಯ ಪಿತಾಮಹ ಡಾ. ಎಸ್.ಆರ್. ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ರಾಷ್ಟಿçÃಯ ಗ್ರಂಥಾಲಯ ದಿನ ಆಚರಿಸಲಾಯಿತು.
ಈ ಸಂದರ್ಭ ಗ್ರಂಥಪಾಲಕರಾದ ಟಿ.ಕೆ. ಲತಾ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ಮಾತನಾಡಿ ಭಾರತೀಯ ಗ್ರಂಥಾಲಯ ವಿಜ್ಞಾನಕ್ಕೆ ಬಹುದೊಡ್ಡ ಕೊಡುಗೆ ನೀಡುವುದರ ಜೊತೆಗೆ, ಗ್ರಂಥಾಲಯಕ್ಕೆ ವೈಜ್ಞಾನಿಕ ಸ್ವರೂಪ ನೀಡಿದವರು ಡಾ. ಎಸ್.ಆರ್. ರಂಗನಾಥನ್ ಅವರು. ಆದ್ದರಿಂದ ಅವರ ಜನ್ಮ ದಿನವಾದ ತಾ. ೧೨ ರಂದು ಗ್ರಂಥಾಲಯ ದಿನ ಆಚರಿಸುವ ಮೂಲಕ ರಂಗನಾಥ್ ಅವರಿಗೆ ಗೌರವ ಸಲ್ಲಿಸಲಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾವೇರಿ ಪದವಿ ಕಾಲೇಜು ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿ ಯಪ್ಪ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಂಡು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು.
ಉತ್ತಮ ಪುಸ್ತಕಗಳು ಒಳ್ಳೆಯ ಗೆಳೆಯರಿದ್ದಂತೆ ಎಂದರು. ಕಾವೇರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಎಸ್.ಎಸ್. ಮಾದಯ್ಯ ಮಾತನಾಡಿ, ಇಂದಿನ ಡಿಜಿಟಲ್ ಯುಗದಲ್ಲೂ ಕೂಡ ಪುಸ್ತಕಗಳು ತನ್ನದೇ ಆದ ಪ್ರಾಮುಖ್ಯತೆಯನ್ನು ಉಳಿಸಿಕೊಂಡಿವೆ. ಮನುಷ್ಯನ ಸರ್ವತೋಮುಖ ಬೆಳವಣಿಗೆಯಲ್ಲಿ ಪುಸ್ತಕಗಳು ಮಹತ್ವದ ಪಾತ್ರ ನಿರ್ವಹಿಸುತ್ತವೆ ಎಂದರು.
ಈ ಸಂದರ್ಭ ವಿದ್ಯಾರ್ಥಿಗಳಿಗೆ ಮಹಾತ್ಮ ಗಾಂಧೀಜಿ ಮತ್ತು ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆ ಪುಸ್ತಕಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರಾದ ಬ್ರೈಟ ಕುಮಾರ್, ಪ್ರದಸ ಆಲ್ವಿನ್ ಸೀಕ್ವೆರ, ಗ್ರಂಥಾಲಯ ಸಿಬ್ಬಂದಿಗಳಾದ ಅನುರಾಧ, ವನಿತ, ಬೋಧಕ ವರ್ಗ, ಆಡಳಿತಾತ್ಮಕ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.