ಮಡಿಕೇರಿ, ಆ. ೨೦: ಮೂರ್ನಾಡು ಮಾರುತಿ ಸಂಯುಕ್ತ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ೨೦೨೩-೨೪ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು.
ಶಾಲೆ ಮತ್ತು ಕಾಲೇಜಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಪ್ರಮಾಣ ವಚನ ಸ್ವೀಕರಿಸಿದರು. ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಮುಂಡAಡ ಅಪ್ಪಚ್ಚು ಮತ್ತು ಕಾರ್ಯದರ್ಶಿಗಳಾದ ಬಡುವಂಡ ಅರುಣ್ ಅಪ್ಪಚ್ಚು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಶಿಸ್ತು, ಪ್ರಾಮಾಣಿಕತೆಯನ್ನು ಅಳವಡಿಸಿಕೊಂಡು ಪೋಷಕರಿಗೆ ಕೀರ್ತಿ ತರುವಂತಾಗಬೇಕೆAದು ಕಿವಿ ಮಾತು ಹೇಳಿದರು.
ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಚೇಂದ್ರಿಮಾಡ ಸೋಮಯ್ಯ ಮತ್ತು ನಿರ್ದೇಶಕರಾದ ಬಡುವಂಡ ನೀಲಮ್ಮ ಮುದ್ದಪ್ಪ, ಮುಂಡAಡ ಮುತ್ತಣ್ಣ ಉಪಸ್ಥಿತರಿದ್ದರು. ಪ್ರಾಂಶುಪಾಲೆ ಸುಮಿತ ಪಿ.ಟಿ., ಉಪ ಪ್ರಾಂಶುಪಾಲೆ ಹೇಮಾವತಿ ಎಂ.ಡಿ., ಉಪನ್ಯಾಸಕರು, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಹಾಜರಿದ್ದರು.