ಪೊನ್ನಂಪೇಟೆ, ಆ. ೨೦: ಸಮೀಪದ ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಸ್ಥಾನದಲ್ಲಿ ನಾಗರಪಂಚಮಿ ಹಬ್ಬದ ಪ್ರಯುಕ್ತ ತಾ. ೨೧ರಂದು (ಇಂದು) ಸಾಮೂಹಿಕ ಆಶ್ಲೇಷ ಬಲಿಪೂಜೆ ಹಾಗೂ ನಾಗದೇವರಿಗೆ ಪಂಚಾಮೃತಾಭಿಷೇಕ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಚಮ್ಮಟೀರ ಸುಗುಣ ಮುತ್ತಣ್ಣ ತಾ. ೨೧ರಂದು ಬೆಳಿಗ್ಗೆ ೧೦ ಗಂಟೆಯಿAದ ಮಧ್ಯಾಹ್ನ ೧ರ ತನಕ ನಾಗರಪಂಚಮಿ ಅನುಸಾರವಾಗಿ ವಿಶೇಷ ಪೂಜೆ ನಡೆಯಲಿದೆ. ಈ ಸಂದರ್ಭದಲ್ಲಿ ಆಶ್ಲೇಷ ಬಲಿ ಹಾಗೂ ಪಂಚಾಮೃತಾ ಭಿಷೇಕ ಬಳಿಕ ಶ್ರೀ ಭದ್ರಕಾಳಿ ದೇವರಿಗೆ ವಿಶೇಷ ಮಹಾಮಂಗಳಾರತಿ ನಡೆಯಲಿದೆ, ಪ್ರಸಾದ ವಿನಿಯೋಗದ ನಂತರ ಅನ್ನದಾನ ವ್ಯವಸ್ಥೆ ಇರಲಿದೆ ಎಂದು ತಿಳಿಸಿದ್ದಾರೆ.