*ಗೋಣಿಕೊಪ್ಪ, ಆ. ೨೦: ತಾಲೂಕು ಮಟ್ಟದ ತೀವ್ರತರ ಮಿಷನ್ ಇಂದ್ರ ಧನುಷ್ ಕಾರ್ಯಕ್ರಮ ತಿತಿಮತಿ ರೇಷ್ಮೆಹಾಡಿ ಸಮುದಾಯ ಭವನದಲ್ಲಿ ನಡೆಯಿತು.
ತಿತಿಮತಿ ಪ್ರಾಥಮಿಕ ಆರೋಗ್ಯ ಕೇಂದ್ರ, ಹೆಬ್ಬಾಲೆ ಉಪಕೇಂದ್ರದ ಸಹಯೋಗದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ. ಯತಿರಾಜ್ ಉಪಸ್ಥಿತಿಯಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಸ್ವತಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ತಾಲೂಕು ಮಟ್ಟದ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಶಾಲಾ ಶಿಕ್ಷಕರು ಸ್ಥಳೀಯ ಗ್ರಾಮಸ್ಥರು, ಗರ್ಭಿಣಿಯರು, ತಾಯಂದಿರು ಇದ್ದರು.