ಚೆಯ್ಯಂಡಾಣೆ, ಆ. ೨೦: ಸಾರ್ವಜನಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡವರು ಜನರ ಕಷ್ಟ ಸುಖಗಳಿಗೆ ಸ್ಪಂದಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿತ್ವವನ್ನು ಉಳಿಸಿಕೊಳ್ಳಬೇಕೆಂದು ಮಡಿಕೇರಿ ಶಾಸಕ ಡಾ.ಮಂಥರ್ ಗೌಡ ಹೇಳಿದರು.

ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹೊದ್ದೂರು ಗ್ರಾ.ಪಂ ಅಧ್ಯಕ್ಷ ಎಚ್.ಎ.ಹಂಸ ಕೊಟ್ಟಮುಡಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಹಂಸ ಹಿತೈಷಿಗಳ ಬಳಗದ ವತಿಯಿಂದ ನಾಪೋಕ್ಲು ಬಳಿಯ ಚೆರಿಯಪರಂಬು ಶಾದಿ ಮಹಲ್ ನಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರ, ಆಟೋ ಚಾಲಕರಿಗೆ ಸಮವಸ್ತç ವಿತರಣೆ, ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ತಮ್ಮ ಹುಟ್ಟುಹಬ್ಬದ ದಿನದಂದು ರಕ್ತದಾನ ಶಿಬಿರ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದರು.

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಕ್ತ ನಿಧಿ ಕೇಂದ್ರದ ಮುಖ್ಯಸ್ಥರಾದ ಡಾ. ಕರುಂಬಯ್ಯ ಮಾತನಾಡಿ ಜಿಲ್ಲೆಯ ರಕ್ತನಿಧಿ ಕೇಂದ್ರಕ್ಕೆ ಹೆಚ್ಚಿನ ರಕ್ತಗಳ ಅವಶ್ಯಕತೆ ಇದೆ. ಇಂತಹ ಕಾರ್ಯಕ್ರಮಗಳ ಮೂಲಕ ರಕ್ತವನ್ನು ಸಂಗ್ರಹಿಸಿ ರೋಗಿಗಳಿಗೆ ನೀಡಲಾಗುತ್ತಿದೆ. ಮುಂದೆ ವಿವಿಧ ಸಂಘ-ಸAಸ್ಥೆಗಳು ಇದೇ ರೀತಿ ಕಾರ್ಯಕ್ರಮ ಆಯೋಜಿಸಿ ರೋಗಿಗಳ ನೆರವಿಗೆ ಮುಂದೆ ಬರಬೇಕು ಎಂದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ಯಾಕೂಬ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಲತೀಫ್ ಸುಂಟಿಕೊಪ್ಪ, ಹೊದ್ದೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ, ಹೊದ್ದೂರು ಗ್ರಾಮ ಪಂಚಾಯಿತಿ ಸದಸ್ಯರಾದ ಹಮೀದ್ ಕಬಡಕೇರಿ, ಮೊಣ್ಣಪ್ಪ ಸೇರಿದಂತೆ ವಿವಿಧ ನಾಯಕರು ಹಂಸ ಅವರ ಹುಟ್ಟುಹಬ್ಬಕ್ಕೆ ಶುಭಕೋರಿ ಮಾತನಾಡಿದರು.

ಹುಟ್ಟುಹಬ್ಬದ ಕಾರ್ಯಕ್ರಮಕ್ಕೂ ಮೊದಲು ಚೆರಿಯಪರಂಬು ಪ್ರಾಥಮಿಕ ಶಾಲೆಗೆ ತೆರಳಿದ ಹಂಸ ವಿದ್ಯಾರ್ಥಿಗಳಿಗೆ ನೋಟು ಪುಸ್ತಕ ಹಾಗೂ ಪರಿಕರಗಳನ್ನು ವಿತರಿಸಿದರು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ನಾಪೋಕ್ಲುವಿನ ಆಟೋ ಚಾಲಕರಿಗೆ ಸಮವಸ್ತç ವಿತರಿಸಲಾಯಿತು. ಜಿಲ್ಲೆ, ರಾಜ್ಯ ಹಾಗೂ ರಾಷ್ಟçಮಟ್ಟದ ವಿವಿಧ ಕ್ಷೇತ್ರದಲ್ಲಿ ಗುರುತಿಸಿಕೊಂಡು ಸಾಧನೆ ಮಾಡಿದ ವ್ಯಕ್ತಿಗಳನ್ನು ಹಾಗೂ ಮಡಿಕೇರಿ ಬ್ಲಾಕ್ ಹಂಸ ಅವರನ್ನು ಮಡಿಕೇರಿ ಶಾಸಕ ಡಾಕ್ಟರ್ ಮಂಥರ್ ಗೌಡ ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು.

ರಕ್ತದಾನ ಶಿಬಿರದಲ್ಲಿ ಸುಮಾರು ೫೦ಕ್ಕೂ ಅಧಿಕ ದಾನಿಗಳಿಂದ ರಕ್ತವನ್ನು ಸಂಗ್ರಹಿಸಿ ಮಡಿಕೇರಿಯ ರಕ್ತ ನಿಧಿ ಕೇಂದ್ರಕ್ಕೆ ಕಳುಹಿಸಿಕೊಡಲಾಯಿತು.

ಈ ಸಂದರ್ಭ ಕೊಟ್ಟಮುಡಿ ಮರ್ಕಜ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಸಖಾಫಿ, ಜೆಡಿಎಸ್ ಮುಖಂಡ ಮನ್ಸೂರ್ ಆಲಿ, ಕೊಟ್ಟಮುಡಿ ಜಮಾಅತ್ ಅಧ್ಯಕ್ಷ ಉಸ್ಮಾನ್, ಹಂಸ ಮುಸ್ಲಿಯಾರ್, ನಾಪೋಕ್ಲು ಆಟೋ ಚಾಲಕರ ಸಂಘದ ಅಧ್ಯಕ್ಷ ರಾಜೀವನ್, ವಿಶ್ವನಾಥ್, ಮೈಸಿ ಕತ್ತಣೀರ, ಕೊಡಗು ಸುನ್ನೀ ವೆಲ್ಫೇರ್ ಜಿಸಿಸಿ ಅಧ್ಯಕ್ಷ ಅಬೂಬಕ್ಕರ್ ಹಾಜಿ, ಕಲೀಲ್ ಕ್ರಿಯೆಟಿವ್, ನಾಪೋಕ್ಲು ಯೂತ್ ಕಾಂಗ್ರೆಸ್ ಅಧ್ಯಕ್ಷ ಸಿರಾಜ್, ಅಹಮದ್ ಸಿ. ಎಚ್, ಅರಫಾತ್, ನಾಪೋಕ್ಲು ಗ್ರಾಂ.ಪA. ಸದಸ್ಯ ಖುರೇಶಿ, ಮಹಮ್ಮದ್, ಮಾಜಿ ಸದಸ್ಯರಾದ ರಶೀದ್, ಅಜೀಜ್, ಹಂಸ ಹಿತೈಷಿ ಬಳಗದ ಪದಾಧಿಕಾರಿಗಳು, ಆಟೋ ಚಾಲಕರು, ಕಾಂಗ್ರೆಸ್ ಕಾರ್ಯಕರ್ತರು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಿಬ್ಬಂದಿಗಳು ಮತ್ತಿತರರು ಹಾಜರಿದ್ದರು.

ಅಶ್ರಫ್