ಮಡಿಕೇರಿ, ಆ. ೨೦: ಕೊಡಗು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಜ್ವರದಿಂದಾಗಿ ಪ್ಲೆಟ್ಲೇಟ್ ರಕ್ತಕ್ಕೆ ಹೆಚ್ಚು ಬೇಡಿಕೆ ಇದೆ. ಆದರೆ ಪ್ಲೆಟ್ಲೇಟ್‌ಗಳನ್ನು ಪ್ರತ್ಯೇಕಿಸುವ ಉಪಕರಣದ ಕೊರತೆ ಹಿನ್ನೆಲೆಯಲ್ಲಿ ಸಮಸ್ಯೆಯಾಗುತ್ತಿದೆ ಎಂದು ಜಿಲ್ಲಾ ರಕ್ತ ನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಕರುಂಬಯ್ಯ ಮಾಹಿತಿ ನೀಡಿದ್ದಾರೆ.

ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಕೊಡಗು ಘಟಕದ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ರಕ್ತ ನಿಧಿ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿಯ ಸ್ಟುವರ್ಟ್ ಹಿಲ್‌ನಲ್ಲಿರುವ ರೆಡ್‌ಕ್ರಾಸ್ ಸಭಾಭವನದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ರಕ್ತ ನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಕರುಂಬಯ್ಯ, ಕೊಡಗು ಜಿಲ್ಲೆಯಲ್ಲಿ ರಕ್ತದಾನದಂಥ ಶಿಬಿರಗಳು ಇನ್ನಷ್ಟು ಆಯೋಜನೆಯಾಗಬೇಕು. ಈಗಾಗಲೇ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿದ್ದು ರಕ್ತದ ಕೊರತೆ ಕಾಡುತ್ತಿದೆ. ಡೆಂಗ್ಯೂ ಜ್ವರಕ್ಕೆ ಪ್ಲೇಟ್ಲೆಟ್‌ಗಳು ಬೇಕಾಗಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ ಪ್ಲೇಟ್ಲೆಟ್‌ಗಳನ್ನು ಪ್ರತ್ಯೇಕಿಸಿ ತೆಗೆಯುವ ಉಪಕರಣ ಇಲ್ಲದ ಕಾರಣ ಒಟ್ಟು ಆರು ಬಾಟಲ್ ರಕ್ತದ ಅವಶ್ಯಕತೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಅನಿವಾರ್ಯವಾಗಿ ಹೊರ ಜಿಲ್ಲೆಗಳಿಗೆ ರೋಗಿಗಳನ್ನು ಕಳುಹಿಸುವ ಪರಿಸ್ಥಿತಿ ಉಂಟಾಗುತ್ತಿದೆ ಎಂದರು. ಮುಂದಿನ ದಿನಗಳಲ್ಲಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡ ನಿರ್ಮಾಣವಾದ ಮಡಿಕೇರಿ, ಆ. ೨೦: ಕೊಡಗು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಜ್ವರದಿಂದಾಗಿ ಪ್ಲೆಟ್ಲೇಟ್ ರಕ್ತಕ್ಕೆ ಹೆಚ್ಚು ಬೇಡಿಕೆ ಇದೆ. ಆದರೆ ಪ್ಲೆಟ್ಲೇಟ್‌ಗಳನ್ನು ಪ್ರತ್ಯೇಕಿಸುವ ಉಪಕರಣದ ಕೊರತೆ ಹಿನ್ನೆಲೆಯಲ್ಲಿ ಸಮಸ್ಯೆಯಾಗುತ್ತಿದೆ ಎಂದು ಜಿಲ್ಲಾ ರಕ್ತ ನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಕರುಂಬಯ್ಯ ಮಾಹಿತಿ ನೀಡಿದ್ದಾರೆ.

ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಕೊಡಗು ಘಟಕದ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ರಕ್ತ ನಿಧಿ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿಯ ಸ್ಟುವರ್ಟ್ ಹಿಲ್‌ನಲ್ಲಿರುವ ರೆಡ್‌ಕ್ರಾಸ್ ಸಭಾಭವನದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ರಕ್ತ ನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಕರುಂಬಯ್ಯ, ಕೊಡಗು ಜಿಲ್ಲೆಯಲ್ಲಿ ರಕ್ತದಾನದಂಥ ಶಿಬಿರಗಳು ಇನ್ನಷ್ಟು ಆಯೋಜನೆಯಾಗಬೇಕು. ಈಗಾಗಲೇ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿದ್ದು ರಕ್ತದ ಕೊರತೆ ಕಾಡುತ್ತಿದೆ. ಡೆಂಗ್ಯೂ ಜ್ವರಕ್ಕೆ ಪ್ಲೇಟ್ಲೆಟ್‌ಗಳು ಬೇಕಾಗಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ ಪ್ಲೇಟ್ಲೆಟ್‌ಗಳನ್ನು ಪ್ರತ್ಯೇಕಿಸಿ ತೆಗೆಯುವ ಉಪಕರಣ ಇಲ್ಲದ ಕಾರಣ ಒಟ್ಟು ಆರು ಬಾಟಲ್ ರಕ್ತದ ಅವಶ್ಯಕತೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಅನಿವಾರ್ಯವಾಗಿ ಹೊರ ಜಿಲ್ಲೆಗಳಿಗೆ ರೋಗಿಗಳನ್ನು ಕಳುಹಿಸುವ ಪರಿಸ್ಥಿತಿ ಉಂಟಾಗುತ್ತಿದೆ ಎಂದರು. ಮುಂದಿನ ದಿನಗಳಲ್ಲಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡ ನಿರ್ಮಾಣವಾದ