ಕೂಡಿಗೆ, ಆ. ೨೧: ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ‘ಒeಡಿi ಒಚಿಚಿಣi ಒeಡಿಚಿ ಆesh' ಅಭಿಯಾನದ ಅಂಗವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಕೂಡಿಗೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

‘ಅಮೃತ ಕಳಶ’ದಲ್ಲಿ ಗ್ರಾಮ ಪಂಚಾಯಿತಿಯ ಪವಿತ್ರ ಮಣ್ಣನ್ನು ಸಂಗ್ರಹಿಸಿ ದರು. ಜೊತೆಗೆ ‘ವಸುಧ ವಂದನ’ ಭಾಗವಾಗಿ ಗಿಡ ನೆಟ್ಟು ಸಂಭ್ರಮಿಸಿದರು. ಈ ಸಂದರ್ಭ ಶಾಲೆಯ ಪ್ರಾಂಶುಪಾಲ ಪ್ರಕಾಶ್, ಅಭಿವೃದ್ಧಿ ಅಧಿಕಾರಿ ಸಂತೋಷ್ ಸೇರಿದಂತೆ ಶಾಲೆಯ ಶಿಕ್ಷಕರ ವೃಂದ ಮತ್ತು ಪಂಚಾಯಿತಿ ಕರವಸೂಲಿಗಾರ ಅವಿನಾಶ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.