ಮಡಿಕೇರಿ, ಆ. ೨೦: ತಾ. ೨೩ ರಂದು ಬೆಳಿಗ್ಗೆ ೧೧ ಗಂಟೆಗೆ ರಫ್ತುದಾರರ ಉತ್ತೇಜನ ಕಾರ್ಯಕ್ರಮವು ಕುಶಾಲನಗರದ ಸರ್ಕಾರಿ ಎಂಜಿನಿಯರಿAಗ್ ಕಾಲೇಜಿನಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ವಿವಿಧ ಉತ್ಪನ್ನಗಳ ರಫ್ತುದಾರರು ಭಾಗವಹಿಸಲಿದ್ದಾರೆ. ಸದರಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಅವರು ಉದ್ಘಾಟಿಸಲಿದ್ದಾರೆ. ಆದ್ದರಿಂದ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ರಫ್ತುದಾರರು ಹಾಗೂ ರಫ್ತು ಮಾಡಲು ಇಚ್ಚಿಸುವ ಉದ್ದಿಮೆದಾರರು ಭಾಗವಹಿಸಿ ರಫ್ತು ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಕೋರಿದ್ದಾರೆ.