ಸೋಮವಾರಪೇಟೆ, ಆ. ೨೦: ಸಮೀಪದ ಶಾಂತಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

ಪಂಚಾಯಿತಿಯ ೨ನೇ ಅವಧಿಯ ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ರಂಜಿತ ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾ.ಪಂ. ಸಭಾಂಗಣದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸ್ವಾಮಿ ಅವರು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಂ. ಲೋಕೇಶ್, ಬ್ಲಾಕ್ ಅಧ್ಯಕ್ಷ ಬಿ.ಬಿ. ಸತೀಶ್, ಪಕ್ಷದ ಮುಖಂಡರಾದ ಕೆ.ಕೆ. ಮುತ್ತಣ್ಣ, ಸುಬ್ಬಯ್ಯ, ಜಿ.ಎಸ್. ಮಧುಕುಮಾರ್, ಹರಗ ಆದಿತ್ಯ, ರಾಜಪ್ಪ, ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ನಾಗರಾಜು, ಕಾರ್ಯದರ್ಶಿ ಮಹಮ್ಮದ್ ಶಫಿ ಸೇರಿದಂತೆ ಇತರರು ಉಪಸ್ಥಿತರಿದ್ದು, ಸಂಭ್ರಮಾಚರಣೆ ಮಾಡಿದರು.