ಮರಗೋಡು : ಮರಗೋಡು ಗ್ರಾಮದ ಜನತಾ ಕಾಲೋನಿಯ ವಾಸುಕಿ ಸನ್ನಿಧಿಯಲ್ಲಿ ನಾಗರ ಪಂಚಮಿ ಅಂಗವಾಗಿ ವಿಶೇಷ ಪೂಜೆ ನಡೆಯಿತು. ಅರ್ಚಕರಾದ ಗುರುರಾಜ್ ಭಟ್ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ನಂತರ ಮಹಾಪೂಜೆಯೊಂದಿಗೆ ಪ್ರಸಾದ ವಿನಿಯೋಗ ನಡೆಯಿತು.ಕರಿಕೆ: ಇಲ್ಲಿಗೆ ಸಮೀಪದ ಚೆತ್ತುಕಾಯ ವನಶಾಸ್ತಾವು ದೇವಸ್ಥಾನದ ಆವರಣದಲ್ಲಿರುವ ನಾಗ ದೇವರ ಸನ್ನಿಧಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷವಾಗಿ ಪೂಜಾ ಕೈಂಕರ್ಯಗಳು ನಡೆದವು.

ಶ್ರೀ ವನಶಾಸ್ತಾವು ದೇವರಿಗೆ ಅಭಿಷೇಕ, ಮಹಾಪೂಜೆ ನಂತರ ನಾಗದೇವರಿಗೆ ಎಳನೀರು ಅಭಿಷೇಕ, ಕ್ಷೀರ ಅಭಿಷೇಕ ಸೇರಿದಂತೆ ಇತರೆ ಸೇವೆಗಳು ನೆರವೇರಿದವು. ದೇವಾಲಯದ ಅರ್ಚಕರಾದ ಗೌರಿಶಂಕರ ಭಟ್ ಪೂಜಾ ಕಾರ್ಯ ನೆರವೇರಿಸಿದರು. ದೇವಾಲಯ ಆಡಳಿತ ಸಮಿತಿ ಅಧ್ಯಕ್ಷ ನಾರಾಯಣ ಕೆ.ಎ., ಉಪಾಧ್ಯಕ್ಷ ಬಾಲಕೃಷ್ಣ ಕೆ.ಡಿ.,ಕಾರ್ಯದರ್ಶಿ ತಾರೇಶ್ ಹೊದ್ದೆಟ್ಟಿ, ಸೇರಿದಂತೆ ಆಡಳಿತ ಮಂಡಳಿಯ ಪ್ರಮುಖರು, ಗ್ರಾಮಸ್ಥರು ಹಾಜರಿದ್ದರು. ನಾಪೋಕ್ಲು: ಹೋಬಳಿ ವ್ಯಾಪ್ತಿಯ ವಿವಿಧೆಡೆ ನಾಗರ ಪಂಚಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಸಮೀಪದ ಪಾಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯ, ಕಕ್ಕಬೆಯ ಪಾಡಿ ಶ್ರೀ ಇಗ್ಗುತಪ್ಪ ದೇವಾಲಯ, ಕೂರುಳಿ ಸುಭಾಷ್ ನಗರ ಹಾಗೂ ಬಲ್ಲಮಾವಟಿಯ ಶ್ರೀ ಭಗವತಿ ದೇವಾಲಯಗಳಲ್ಲಿ ನಾಗರ ಪಂಚಮಿಯನ್ನು ಆಚರಿಸಲಾಯಿತು.

ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಅರ್ಚಕ ಜಗದೀಶ್ ಭಟ್ ದೇವಾಲಯದ ನಾಗನಕಟ್ಟೆಯಲ್ಲಿ ವಿಶೇಷ ಪೂಜಾ ವಿಧಿ ವಿಧಾನ ಕೈಂಕರ್ಯವನ್ನು ನೆರವೇರಿಸಿದರು. ಈ ಸಂದರ್ಭ ಭಕ್ತಾದಿಗಳು ಶ್ರದ್ಧಾಭಕ್ತಿಯಿಂದ ಭಾಗವಹಿಸಿ ತೀರ್ಥ ಪ್ರಸಾದ ಸ್ವೀಕರಿಸಿದರು. ಬಳಿಕ ದೇವಾಲಯದಲ್ಲಿ ವಿಶೇಷ ಮಹಾಪೂಜೆ ಅನ್ನದಾನ ನೆರವೇರಿತು.

ಪಾಲೂರಿನ ಮಹಾಲಿಂಗೇಶ್ವರ ದೇವಾಲಯದಲ್ಲಿ ಅರ್ಚಕ ದೇವಿ ಪ್ರಸಾದ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ದೇವಾಲಯದಲ್ಲಿ ನಾಗನ ಕಲ್ಲಿಗೆ ಹಾಲು , ಎಳೆ ನೀರು ಅಭಿಷೇಕ ಸೇರಿದಂತೆ ಹಣ್ಣು ಕಾಯಿ ಪೂಜೆಯನ್ನು ನೆರವೇರಿಸಿ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಿಸಿದರು. ಕೂರುಳಿ ಸುಭಾಷ್ ನಗರದಲ್ಲಿ ಶ್ರೀ ಭಗವತಿ ದೇವಾಲಯದ ಅರ್ಚಕ ಹರೀಶ್ ಭಟ್ ನಾಗನಕಟ್ಟೆಯಲ್ಲಿ ನಾಗನ ಕಲ್ಲಿಗೆ ಪಂಚಾಮೃತ ಅಭಿಷೇಕ ಮಂಗಳಾರತಿ ಮಹಾಪೂಜೆಯನ್ನು ನೆರವೇರಿಸಿದರು. ಈ ಸಂದರ್ಭ ನಗರದ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.

ಬಲ್ಲಮಾವಟಿ ಗ್ರಾಮದ ಭಗವತಿ ದೇವಾಲಯದ ಸಮೀಪ ನಾಗನಕಟ್ಟೆಯಲ್ಲಿ ನಾಗರ ಪಂಚಮಿಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಅರ್ಚಕ ಶಶಿಧರ್ ಭಟ್ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿದರು. ಭಕ್ತಾದಿಗಳು ಅವರ ವ್ಯಾಪ್ತಿಯ ವಿವಿಧ ದೇವಾಲಯಗಳಿಗೆ ತೆರಳಿ ನಾಗದೇವತೆಗೆ ನಮನ ಸಲ್ಲಿಸಿ ಶ್ರದ್ಧಾ ಭಕ್ತಿಯಿಂದ ಭಾಗವಹಿಸಿ ಹಬ್ಬವನ್ನು ಆಚರಿಸಿಕೊಂಡರು.ಸುAಟಿಕೊಪ್ಪ: ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಾಲಯಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಿಸಲಾಯಿತು.

ದೇವಾಲಯದ ಮುಖ್ಯ ಅರ್ಚಕ ಮಂಜುನಾಥ ಉಡುಪ ಮತ್ತು ಹಿರಿಯ ಅರ್ಚಕ ಹಾ.ಮಾ.ಗಣೇಶ ಶರ್ಮಾ ಅವರ ನೇತೃತ್ವದಲ್ಲಿ ಅರಸಿನ, ಕುಂಕುಮ, ಹಾಲು, ಎಳೆನೀರು ಅಭಿಷೇಕ ನಡೆಯಿತು. ನಂತರ ನಾಗ ದೇವರಿಗೆ ಹೂವಿನ ಅಲಂಕಾರ ಮಾಡಲಾಯಿತು. ನಂತರ ಮಹಾಪೂಜೆ, ಮಹಾಮಂಗಳಾರತಿ ಪ್ರಸಾದ ವಿನಿಯೋಗ ನಡೆಯಿತು.ಗುಡ್ಡೆಹೊಸೂರು: ಇಲ್ಲಿಗೆ ಸಮೀಪದ ಬೆಟ್ಟಗೇರಿ ಗ್ರಾಮದ ಶ್ರೀ ಚೌಡೇಶ್ವರಿ ದೇವಸ್ಥಾನದ ಆವರಣದ ನಾಗಬನದಲ್ಲಿ ನಾಗರ ಪಂಚಮಿ ಅಂಗವಾಗಿ ವಿಶೇಷ ಪೂಜೆ ನಡೆಯಿತು.

ಈ ಪೂಜಾಕಾರ್ಯದಲ್ಲಿ ದೇವಸ್ಥಾನ ಸಮಿತಿಯವರು ಮತ್ತು ಅಧಿಕ ಗ್ರಾಮಸ್ಥರು ಹಾಜರಿದ್ದರು. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅರ್ಚಕರಾದ ಸೋಮಶೇಖರ್ ಮತ್ತು ತಂಡದವರು ಪೂಜಾಕಾರ್ಯ ನಡೆಸಿದರು.ಪುದುಪಾಡಿ ದೇವಸ್ಥಾನ

ವೀರಾಜಪೇಟೆ: ಬೇಟೋಳಿ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿರುವ ನಾಗದೇವರ ಗುಡಿಯಲ್ಲಿ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ದೇವಸ್ಥಾನದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ಸಂಕಲ್ಪ, ಹಾಲು ಹಾಗೂ ಕ್ಷೀರಾಭಿಷೇಕ ಮಾಡಿ ದೇವರಿಗೆ ಎಡೆಯನ್ನಿಟ್ಟು ನೈವೇದ್ಯವನ್ನು ಸಮರ್ಪಿಸಿದರು. ವಿಶೇಷ ಸೇವೆಯಾದ ನಾಗ ತಂಬಿಲವನ್ನು ಮಾಡಿ ಮಹಾ ಮಂಗಳಾರತಿ ಬೆಳಗಿದರು. ಬಳಿಕ ಪ್ರಸಾದ ವಿನಿಯೋಗ ಹಾಗೂ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಸಮೀಪದ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ದೇವಸ್ಥಾನದ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.

ಪೆರಾಜೆ: ಇಲ್ಲಿಯ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಶ್ರಾವಣ ಮಾಸದ ಶುಕ್ಲ ಪಕ್ಷದಲ್ಲಿ ಪ್ರಾರಂಭವಾಗುವ ಮೊದಲ ಹಬ್ಬವಾದ ನಾಗರ ಪಂಚಮಿಯ ಆಚರಣೆ ವಿಜೃಂಭಣೆಯಿAದ ನಡೆಯಿತು.

ಈ ಸಂದರ್ಭ ಶ್ರೀ ಶಾಸ್ತಾವು ದೇವಸ್ಥಾನ ಆಡಳಿತ ಮೊಕ್ತೇಸರರಾದ ಜಿತೇಂದ್ರ ನಿಡ್ಯಮಲೆ, ಕಾರ್ಯದರ್ಶಿ ತೇಜಪ್ರಸಾದ್ ಅಮಚೂರು, ಸಹ ಕಾರ್ಯದರ್ಶಿ ಅಡ್ಕದ ಚಿನ್ನಪ್ಪ, ಮಾಜಿ ಆಡಳಿತ ಮೊಕ್ತೇಸರರು, ದೇವತಕ್ಕ, ತಕ್ಕರುಗಳು, ಆಡಳಿತ ಮುಂಡಳಿಯ ಸದಸ್ಯರು ಗ್ರಾಮದ ಭಕ್ತಾದಿಗಳು ಭಾಗವಹಿಸಿದ್ದರು.

ಶನಿವಾರಸಂತೆ: ಸಮೀಪದ ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಲುವಾಗಿಲು- ಬೆಸೂರು ಗ್ರಾಮದ ಶ್ರೀ ಬಾಲ ತ್ರಿಪುರ ಸುಂದರಿ ದೇವಾಲಯದ ಆವರಣದಲ್ಲಿರುವ ನಾಗ ದೇವರ ಬನದಲ್ಲಿ ನಾಗರ ಪಂಚಮಿ ಹಬ್ಬವನ್ನು ಗ್ರಾಮಸ್ಥರು ಶ್ರದ್ಧಾಭಕ್ತಿಯಿಂದ ಆಚರಿಸಿದರು.

ದೇವಾಲಯದ ಅರ್ಚಕರುಗಳಾದ ದರ್ಶನ್ ಮತ್ತು ಸುನೀಲ್ ಅವರು ನಾಗದೇವರಿಗೆ ಅರಶಿನ ಹಚ್ಚಿ, ಹಾಲು, ಎಳನೀರಿನ ಅಭಿಷೇಕ ಮಾಡಿ, ತನಿ ಎರೆದು ಹೂವಿನಿಂದ ಅಲಂಕರಿಸಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಮಹಾಪೂಜೆ, ಮಹಾ ಮಂಗಳಾರತಿ ನಡೆದು ತೀರ್ಥ-ಪ್ರಸಾದ ವಿನಿಯೋಗವಾಯಿತು. ಭಕ್ತಾದಿಗಳು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡಿದ್ದರು ದಾಸೋಹ ಏರ್ಪಡಿಸಲಾಗಿತ್ತು.ದೇವಾಲಯ ಸಮಿತಿ ಅಧ್ಯಕ್ಷ ಹಾಲಪ್ಪ, ಕಾರ್ಯದರ್ಶಿ ದೇವೇಗೌಡ, ಸದಸ್ಯರಾದ ಸಿ.ಬಿ.ಪ್ರಸನ್ನ, ಮಲ್ಲಪ್ಪ, ರೂಪಾ, ಹರೀಶ್, ರಾಮು, ಗುರು ಹಾಜರಿದ್ದರು.ಸುಂಟಿಕೊಪ್ಪ : ನಾಗರ ಪಂಚಮಿ ಹಿನ್ನೆಲೆ ಕೊಡಗರಹಳ್ಳಿಯಲ್ಲಿರುವ ಶ್ರೀಬೈತೂರಪ್ಪ, ಪೊವ್ವೆದಿ ಬಸವೇಶ್ವರ ದೇವಾಲಯದ ಆವರಣದಲ್ಲಿ ಇರುವ ನಾಗಸ್ಥಾನದಲ್ಲಿ ಸೋಮವಾರದಂದು ನೂರಾರು ಭಕ್ತಾದಿಗಳ ಉಪಸ್ಥಿತಿಯಲ್ಲಿ ವಿಶೇಷ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು.

ದೇವಸ್ಥಾನ ಮುಖ್ಯ ಅರ್ಚಕ ಭಾನುಪ್ರಕಾಶ್ ಭಟ್, ಸಹ ಅರ್ಚಕÀ ರಮೇಶ್ ವೈದ್ಯ ಮತ್ತು ಶಂಕರನಾರಾಯಣಭಟ್ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ನಾಗರಪಂಚಮಿ ಪ್ರಯುಕ್ತವಾಗಿ ತನುತಂಬಿಲ, ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಎಳನೀರು ಅಭಿಷೇಕ, ಹರಿದ್ರಣಾಭಿಷೇಕ ನಡೆದವು.

ಈ ಸಂದರ್ಭ ದೇವಾಲಯ ಟ್ರಸ್ಟ್ ಅಧ್ಯಕ್ಷ ಕೆ.ಎನ್.ಪೂಣಚ್ಚ, ಕಾರ್ಯದರ್ಶಿ ಬಿ.ಸಿ.ದಿನೇಶ್, ಖಜಾಂಜಿ ಡಾ.ತಮ್ಮಯ್ಯ, ಟ್ರಸ್ಟಿಗಳು, ದೇವಾಲಯ ಪಾರುಪಾತ್ಯಗಾರ ಅಕ್ಕಪಂಡ ರಾಜೇಂದ್ರ ಸೇರಿದಂತೆ ನೂರಾರು ಭಕ್ತಾಧಿಗಳು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡಿದ್ದರು.

ಸುAಟಿಕೊಪ್ಪ ಪಟ್ಟಣ ವ್ಯಾಪ್ತಿಯ ವಿವಿಧ ದೇವಾಲಯ ಹಾಗೂ ಹೋಬಳಿ ವ್ಯಾಪ್ತಿಯ ವಿವಿಧ ದೆವಾಲಯಗಳಲ್ಲಿ ನಾಗರಪಂಚಮಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ವಿವಿಧ ಪೂಜಾ ಕೈಂಕರ್ಯಗಳೊAದಿಗೆ ನೆರವೇರಿಸಿದರು.

ಸೋಮವಾರಪೇಟೆ: ಶ್ರಾವಣಮಾಸದ ಪ್ರಥಮ ಹಬ್ಬವಾದ ನಾಗರಪಂಚಮಿಯನ್ನು ಪಟ್ಟಣದ ಸುತ್ತಮುತ್ತಲಿನ ವಿವಿಧ ದೇವಾಲಯಗಳಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ತೊರೆನೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಅರಸಿನಕುಪ್ಪೆ ಗ್ರಾಮದಲ್ಲಿರುವ ಶ್ರೀ ಮಂಜುನಾಥಸ್ವಾಮಿ ಮತ್ತು ನವನಾಗನಾಥಸ್ವಾಮಿ ದೇವಾಲಯದಲ್ಲಿ ನಾಗರಪಂಚಮಿಯನ್ನು ಆಚರಿಸಲಾಯಿತು. ಬೆಳಿಗ್ಗೆ ಗಣಪತಿ ಹೋಮದೊಂದಿಗೆ ಆರಂಭವಾದ ಪೂಜಾ ಕೈಂಕರ್ಯಗಳು ಮಧ್ಯಾಹ್ನ ಸಂಪನ್ನಗೊAಡಿತು.

ನಾಗದೇವರ ಸನ್ನಿಧಿಯಲ್ಲಿ ನವನಾಗನಾಥನಿಗೆ ಜಲಾಭಿಷೇಕ, ಹಾಲಿನ ಅಭಿಷೇಕ, ಎಳನೀರು ಅಭಿಷೇಕ, ಪಂಚಾಮೃತ ಅಭಿಷೇಕ, ತಂಬಿಲ ಸೇವೆಯೊಂದಿಗೆ ಪೂಜೆ ಸಲ್ಲಿಸಲಾಯಿತು. ನಂತರ ಹೂವಿನ ಅಲಂಕಾರದೊAದಿಗೆ ಮಹಾಮಂಗಳಾರತಿ ನಡೆಸಲಾಯಿತು. ದೇವಾಲಯದ ಪ್ರಧಾನ ಅರ್ಚಕರಾದ ಜಗದೀಶ್ ಉಡುಪ ಅವರ ಪೌರೋಹಿತ್ಯದಲ್ಲಿ ಪೂಜಾ ಕೈಂಕರ್ಯಗಳು ಧಾರ್ಮಿಕ ವಿಧಿವಿಧಾನಗಳೊಂದಿಗೆ ಮುಕ್ತಾಯವಾಯಿತು. ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಪಟ್ಟಣದ ಕಕ್ಕೆಹೊಳೆ ಬಳಿಯಿರುವ ಶ್ರೀ ಮುತ್ತಪ್ಪಸ್ವಾಮಿ ಮತ್ತು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ನಾಗರಪಂಚಮಿಯನ್ನು ಆಚರಿಸಲಾಯಿತು. ಕ್ಷೇತ್ರದ ಪ್ರಧಾನ ಅರ್ಚಕರಾದ ಮಣಿಕಂಠನ್ ನಂಬೂದರಿ ಅವರ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ಜರುಗಿದವು. ನಂತರ ಪ್ರಸಾದ ವಿತರಿಸಲಾಯಿತು.

ಪಟ್ಟಣದ ಸೋಮೇಶ್ವರ ದೇವಾಲಯದಲ್ಲಿ ಪ್ರಧಾನ ಅರ್ಚಕರಾದ ಚಿತ್ರಕುಮಾರ್ ಭಟ್ ಅವರ ಪೌರೋಹಿತ್ಯದಲ್ಲಿ ನಾಗರಪಂಚಮಿಯನ್ನು ಆಚರಿಸಲಾಯಿತು. ಆನೆಕೆರೆ ಬಳಿಯಿರುವ ನಾಗನಕಟ್ಟೆಯಲ್ಲಿ ವರ್ಷಂಪ್ರತಿ ಆಚರಿಸುವಂತೆ ನಾಗರಪಂಚಮಿಯನ್ನು ಭಕ್ತಾದಿಗಳು ಅರಳಿಕಟ್ಟೆ ಬಳಿಯಿರುವ ನಾಗದೇವರಿಗೆ ತೆನೆ ಎರೆಯುವ ಮೂಲಕ ಆಚರಿಸಿದರು.

ಆಂಜನೇಯ ದೇವಾಲಯದಲ್ಲಿರುವ ಅರಳಿಕಟ್ಟೆಯಲ್ಲಿರುವ ಹುತ್ತಕ್ಕೆ ಭಕ್ತರು ತೆನೆ ಎರೆಯುವ ಮೂಲಕ ಪೂಜೆಯನ್ನು ಸಲ್ಲಿಸಿದರು. ಪಟ್ಟಣದ ಸುತ್ತಮುತ್ತಲಿನ ಗ್ರಾಮಗಳ ನಾಗಬನಗಳಲ್ಲಿ, ವಿವಿಧ ದೇವಾಲಯಗಳಲ್ಲಿ ಮಹಿಳೆಯರು ತಮ್ಮ ಕುಟುಂಬಸ್ಥರೊAದಿಗೆ ಭಕ್ತಿಪೂರ್ವಕವಾಗಿ ನಾಗದೇವರಿಗೆ ಪೂಜೆ ಸಲ್ಲಿಸುವ ಮೂಲಕ ನಾಗರಪಂಚಮಿಯನ್ನು ಆಚರಿಸಿದರು. ಮೂರ್ನಾಡು: ಮೂರ್ನಾಡು ಸಮೀಪದ ಕೊಡಂಬೂರು ಶ್ರೀ ಭದ್ರಕಾಳಿ ಹಾಗೂ ಧರ್ಮಶಾಸ್ತಾವು ಅಯ್ಯಪ್ಪ ದೇವಸ್ಥಾನದಲ್ಲಿ ನಾಗರಪಂಚಮಿ ಅಂಗವಾಗಿ ಶ್ರೀ ನಾಗದೇವರ ಸ್ಥಾನದಲ್ಲಿ ಪೂಜೆ ಕಾರ್ಯಕ್ರಮ ನಡೆಯಿತು. ೧೦.೩೦ ಗಂಟೆಯಿAದ ಪೂಜಾ ವಿಧಿವಿಧಾನ ಹಾಲು ತುಪ್ಪ, ಎಳನೀರು, ಕುಂಕುಮ, ಅರಸಿನ ಅಭಿಷೇಕದೊಂದಿಗೆ ಮಹಾ ಮಂಗಳಾರತಿ ನಡೆಯಿತು.

ಊರಿನವರು ಹಾಗೂ ಸುತ್ತಮುತ್ತಲಿನ ಭಕ್ತಾದಿಗಳು ಪೂಜೆಯಲ್ಲಿ ಭಾಗಿಯಾದರು. ನಂತರ ಅನ್ನ ಸಂತರ್ಪಣೆ, ಪ್ರಸಾದ ವಿತರಣೆ ಜರುಗಿತು.