ವೀರಾಜಪೇಟೆ, ಆ. ೨೨ : ನಗರ ಕಾಂಗ್ರೆಸ್ ಪಕ್ಷದ ಹಾಗೂ ಮೈಸೂರಿನ ಮಣಿಪಾಲ್ ಆಸ್ಪತ್ರೆ ಯ ಸಂಯೋಗದಲ್ಲಿ ನಗರದ ಪುರಭವನದಲ್ಲಿ ತುರ್ತು ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಮೈಸೂರಿನ ಮಣಿಪಾಲ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ವೈದ್ಯಧಿಕಾರಿಯಾದ ಡಾ. ಪ್ರದೀಪ ರಾಜ್ ತುರ್ತು ಸಂದರ್ಭದಲ್ಲಿ ಜೀವ ಉಳಿಸಲು ಯಾವ ರೀತಿ ಪ್ರಥಮ ಚಿಕಿತ್ಸೆ ಮಾಡಬೇಕು ಎಂಬುದರ ಬಗ್ಗೆ ತರಬೇತಿ ನೀಡಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ, ಪ್ರತಿ ಮನುಷ್ಯನಿಗೂ. ಪ್ರಥಮ ಚಿಕಿತ್ಸೆ ಬಗ್ಗೆ ಅರಿವು ಇರಬೇಕು. ಮನುಷ್ಯ ಜೀವ ರಕ್ಷಣೆ ಆಸ್ಪತ್ರೆಯ ವೈದ್ಯರು ಮಾಡುತ್ತಾರೆ. ಅನಾಹುತ ಸಂಭವಿಸಿದ ಸ್ಥಳದಲ್ಲಿ ವ್ಯಕ್ತಿಗೆ ಪ್ರಥಮ ಚಿಕಿತ್ಸೆಯ ಅವಶ್ಯಕತೆ ಇರುತ್ತದೆ. ಅದನ್ನು ಯಾವ ರೀತಿ ಮಾಡಬೇಕು ಎಂಬುದು ವೈದ್ಯರು ತರಬೇತಿ ನೀಡಿದ್ದಾರೆ. ಇದನ್ನು ಸರಿಯಾದ ರೀತಿಯಲ್ಲಿ ಮಾಡಬೇಕು. ಟೀಮ್ ಎ.ಎಸ್.ಪಿ ತಂಡ ಈ ರೀತಿಯ ಕಾರ್ಯಕ್ರಮ ಏರ್ಪಾಡು ಮಾಡಿರುವುದು ಪ್ರತಿಯೊಬ್ಬರಿಗೂ ಪ್ರಯೋಜನವಾಗುತ್ತದೆ ಎಂದು ಹೇಳಿದರು. ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ, ನಗರ ಪ್ರಧಾನ ಕಾರ್ಯದರ್ಶಿ ಶಶಿಧರ್, ಪರುಸಭೆ ಸದಸ್ಯರಾದ ಮಹಮ್ಮದ್ ರಾಫಿ, ಮತೀನ್, ನಗರ ಕಾಂಗ್ರೆಸ್ ಉಪಾಧ್ಯಕ್ಷ ಹಮೀದ್, ಹಿರಿಯ ಕಾಂಗ್ರೆಸ್ ಮುಖಂಡ ಚಿಲ್ಲವಂಡ ಕಾವೇರಪ್ಪ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು. ಟೀಮ್ ಎ.ಎಸ್.ಪಿ. ಸಂಘದ ಸದಸ್ಯರು ಹಾಜರಿದ್ದರು.