ಕೂಡಿಗೆ, ಆ. ೨೨: ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯ ನೀರಿನ ಹರಿಯುವಿಕೆಯ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಕ್ಷೀಣಿಸಿದೆ. ಕಾವೇರಿ ನದಿ ಮತ್ತು ಹಾರಂಗಿ ನದಿಗಳು ಸಂಗಮವಾಗಿ ಮುಂದೆ ಹರಿಯುವ ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯ ಎದುರು ಕಾವೇರಿ ನದಿಯು ತೀರ ತಳಮಟ್ಟದಲ್ಲಿ ಹರಿಯುತ್ತಿದೆ. ಕಳೆದ ೧೦ ವರ್ಷಗಳಿಂದಲೂ ಆಗಸ್ಟ್ ತಿಂಗಳಿನಲ್ಲಿ ತುಂಬಿ ಹರಿಯುತ್ತಿದ್ದ ಕಾವೇರಿ ನದಿ ಈ ವರ್ಷ ಇಳಿಕೆ ಕಂಡಿರುವುದು ಆತಂಕಕ್ಕೆ ಕಾರಣವಾಗಿದೆ.