ಚೆಯ್ಯAಡಾಣೆ, ಆ. ೨೨. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ವೀರಾಜಪೇಟೆ ನಿವಾಸಿ ಕೆ.ಎಸ್. ಅಶ್ರಫ್, ಎಮ್ಮೆಮಾಡು ಕೂರುಳಿ ಗ್ರಾಮದ ನಿವಾಸಿಗಳಾದ ಪಿ.ಎಂ. ಹಸೈನಾರ್, ಕೆ.ಎ. ಬಶೀರ್, ಹಾಗೂ ಕೆ.ಯು. ಹಕೀಮ್ ಬಂಧಿತ ಆರೋಪಿಗಳು.
ಎಮ್ಮೆಮಾಡು ಕೂರುಳಿ ಗ್ರಾಮದ ಕೂಡುರಸ್ತೆ ಬಳಿಯಲ್ಲಿ ಗಾಂಜಾ ಸೇವನೆ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳ ತಂಡ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.ಪ್ರಕರಣ ದಾಖಲಿಸಿಕೊಂಡಿರುವ ನಾಪೋಕ್ಲು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಾಪೋಕ್ಲು ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬAದಲ್ಲಿ ಸಾರ್ವಜನಿಕರು ಠಾಣೆಯ ಮೊಬೈಲ್ ಸಂಖ್ಯೆಗೆ (೯೪೮೦೮೦೪೯೪೮) ಮಾಹಿತಿ ನೀಡುವಂತೆ ಠಾಣಾಧಿಕಾರಿ ಮಂಜುನಾಥ್ ಮನವಿ ಮಾಡಿದ್ದಾರೆ. ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದ್ದಾರೆ. - ಅಶ್ರಫ್