ಮಡಿಕೇರಿ, ಆ. ೨೨: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮಡಿಕೇರಿಯಲ್ಲಿ ನಡೆದ ೮೦ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ರಾಗಿದ್ದ ನಾ.ಡಿಸೋಜಾ ರವರ ಹೆಸರಿನಲ್ಲಿ ಸ್ಥಾಪಿತ ವಾಗಿರುವ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿನಿಧಿಯಂತೆ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕಥೆ ಬರೆಯುವ ಸ್ಪರ್ಧೆ ಮತ್ತು ಕಥೆ ರಚನಾ ವಿಧಾನದ ಕುರಿತು ಉಪನ್ಯಾಸವು ಮಡಿಕೇರಿಯ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ತಾ.೨೫ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ವಹಿಸಿಕೊಳ್ಳಲಿದ್ದು, ಉದ್ಘಾಟನೆಯನ್ನು ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜು ಉಪ ನಿರ್ದೇಶಕ ಪುಟ್ಟರಾಜು ನೆರವೇರಿಸಲಿದ್ದಾರೆ. ಕಥೆ ರಚನೆ ಕುರಿತು ಉಪನ್ಯಾಸವನ್ನು ಸಾಹಿತಿ ಸುನೀತಾ ಕುಶಾಲನಗರ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಡಿಕೇರಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್. ವಿಜಯ, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಕಡ್ಲೆರ ತುಳಸಿ ಮೋಹನ್ ಉಪಸ್ಥಿತರಿರಲಿದ್ದಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್ ಐ ಮುನೀರ್ ಅಹ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.