ಮಡಿಕೇರಿ, ಆ. ೨೨ : ಅಪಘಾತದಿಂದ ಕೆಳಗುರುಳಿದ ವೀರ ಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆ ಪುನರ್ ನಿರ್ಮಾಣ ಸಂಬAಧ ಶಾಸಕರಾದ ಡಾ.ಮಂಥರ್ ಗೌಡ ಹಾಗೂ ಮಾಜಿ ಸಚಿವರಾದ ಎಂ.ಸಿ.ನಾಣಯ್ಯ ಅವರ ಉಪಸ್ಥಿತಿಯಲ್ಲಿ ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಕ್ಯಾಂಟೀನ್ ಸಭಾಂಗಣದಲ್ಲಿ ಸುದೀರ್ಘ ಸಮಾಲೋಚನಾ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಶಾಸಕ ಡಾ. ಮಂಥರ್ ಗೌಡ ಅವರು ವೀರ ಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆ ನಿರ್ಮಾಣ ಸಂಬAಧ ಎಲ್ಲರ ಸಹಕಾರ ಪಡೆಯುವ ನಿಟ್ಟಿನಲ್ಲಿ ಸಭೆ ಆಹ್ವಾನಿಸಲಾಗಿದೆ. ಸದ್ಯ ಈಗಿರುವ ಪ್ರತಿಮೆಯನ್ನು ಸರಿಪಡಿಸಿ ಪುನರ್ ನಿರ್ಮಾಣ ಮಾಡುವಂತಾಗಬೇಕು. ಆ ನಿಟ್ಟಿನಲ್ಲಿ ಪ್ರತಿಮೆ ನಿರ್ಮಾಣದ ಖರ್ಚು ವೆಚ್ಚವನ್ನು ಭರಿಸಲಾಗುವುದು.

ಹೊಸ ಪ್ರತಿಮೆ ನಿರ್ಮಾಣ ಮಾಡುವುದಕ್ಕೆ ಅಭ್ಯಂತರವಿಲ್ಲ. ಆದರೆ ಈಗಿರುವ ಮಾದರಿಯಲ್ಲಿ ಪ್ರತಿಮೆ ‘ಫಿನಿಶಿಂಗ್’ ಬರುತ್ತದೆ ಎಂದು ಹೇಳುವುದು ಕಷ್ಟಸಾಧ್ಯವಾಗಿದೆ. ಜೊತೆಗೆ ಕಾಲಾವಕಾಶ ಬೇಕಿದೆ. ಆದ್ದರಿಂದ ಈಗಿರುವ ಪ್ರತಿಮೆಯನ್ನು ಸರಿಪಡಿಸಿ ಆದಷ್ಟು ಶೀಘ್ರ ಪ್ರತಿಮೆ ಪುನರ್ ಸ್ಥಾಪಿಸುವುದು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಅವರು ಈಗಿರುವ ಸ್ಥಳದ ಬದಲಾವಣೆ ಇಲ್ಲ. ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್‌ಗಳು ಅಭಿಪ್ರಾಯ ನೀಡುವಂತಾಗಬೇಕು ಎಂದರು.

ಮಾಜಿ ಸಚಿವ ಎಂ.ಸಿ. ನಾಣಯ್ಯ ಅವರು ಮಾತನಾಡಿ ಈಗಿರುವ ಪ್ರತಿಮೆಯನ್ನು ತ್ವರಿತವಾಗಿ ಪುನರ್ ಸ್ಥಾಪಿಸಬೇಕು. ೫೦ ವರ್ಷಗಳ ಹಿಂದೆ ಪ್ರತಿಮೆ ಸ್ಥಾಪಿಸುವ ನಿಟ್ಟಿನಲ್ಲಿ ಶ್ರಮಿಸಲಾಗಿತ್ತು. ಜನರಲ್ ತಿಮ್ಮಯ್ಯ ಅವರ ೩೦-೩೫ ಫೋಟೋಗಳನ್ನು ಸಂಗ್ರಹಿಸಿ ಅದರಲ್ಲಿ ಎತ್ತರದ ಫೋಟೋವನ್ನು ಆಯ್ಕೆ ಮಾಡಿ ಪ್ರತಿಮೆ ನಿರ್ಮಾಣ ಮಾಡಲಾಗಿತ್ತು. ಈ ರೀತಿಯ ಪ್ರತಿಮೆ ನಿರ್ಮಿಸುವುದು ಕಷ್ಟಸಾಧ್ಯವಾಗಲಿದೆ. ಆದ್ದರಿಂದ ಹೊಸ ಪ್ರತಿಮೆ ಬದಲಾಗಿ, ಈಗಿರುವ ಪ್ರತಿಮೆಯನ್ನು ಸರಿಪಡಿಸಿ ಪುನರ್ ಸ್ಥಾಪಿಸಬೇಕಿದೆ ಎಂದು ಎಂ.ಸಿ. ನಾಣಯ್ಯ ಹೇಳಿದರು.

ಪ್ರತಿಮೆ ನಿರ್ಮಾಣ ಸಂಬAಧ ಜಿಲ್ಲಾಡಳಿತ, ನಗರಸಭೆ ಹೆಚ್ಚಿನ ಜವಾಬ್ದಾರಿ ವಹಿಸಬೇಕು. ಸಂಚಾರ ದಟ್ಟಣೆ, ನಿಯಂತ್ರಣ ಸಂಬAಧ ಪೊಲೀಸ್ ಇಲಾಖೆ ಅಗತ್ಯ ಕ್ರಮ ವಹಿಸಬೇಕು. ಒಂದು ತಿಂಗಳೊಳಗೆ ಪ್ರತಿಮೆ ಪುನರ್ ಸ್ಥಾಪಿಸಬೇಕು ಎಂದು ಎಂ.ಸಿ. ನಾಣಯ್ಯ ಒತ್ತಾಯಿಸಿದರು.

ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಅವರು

(ಮೊದಲ ಪುಟದಿಂದ) ಮಾತನಾಡಿ ಪ್ರತಿಮೆ ನಿರ್ಮಾಣ ಸಂಬAಧ ನಗರಸಭೆ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ, ಪ್ರತಿಮೆ ನಿರ್ಮಾಣಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು.

ಪ್ರತಿಮೆ ರಿಪೇರಿ ಸಂಬAಧ ಅಂದಾಜು ಪಟ್ಟಿ ತಯಾರಿಸಲಾಗಿದೆ. ಹಾಗೆಯೇ ಪ್ರತಿಮೆ ಜಾಗದಲ್ಲಿ ಪೌಂಡೇಶನ್ ನಿರ್ಮಾಣ ಮತ್ತಿತರ ಸಂಬAಧ ಅಗತ್ಯ ಕ್ರಮವಹಿಸಲಾಗುವುದು ಎಂದರು. ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್ ಅವರ ಮಡಿಕೇರಿ ನಗರಸಭೆ ವ್ಯಾಪ್ತಿಗೆ ಜಾಗ ಬರಲಿದೆ. ಹಾಗಾಗಿ ನಗರಸಭೆ ಮತ್ತು ಪೊಲೀಸ್ ಇಲಾಖೆ ಸಂಚಾರ ನಿಯಂತ್ರಣ ಬಗ್ಗೆ ಕ್ರಮವಹಿಸಬೇಕಿದೆ ಎಂದು ತಿಳಿಸಿದರು.

ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಎಂ.ಪಿ. ಮುತ್ತಪ್ಪ ಮಾತನಾಡಿ, ಈಗಿರುವ ಜಾಗದಲ್ಲಿಯೇ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಪುನರ್ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದರು.

ಪ್ರಮುಖರಾದ ತೆನ್ನಿರಾ ಮೈನಾ ಅವರು ಮಾತನಾಡಿ, ವೀರ ಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆ ಭಾವನಾತ್ಮಕ ಸಂಬAಧವನ್ನು ಹೊಂದಿದ್ದು, ಈಗಿನ ಪ್ರತಿಮೆ ಭಗ್ನವಾಗಿದೆ. ಆದ್ದರಿಂದ ಹೊಸ ಪ್ರತಿಮೆ ನಿರ್ಮಾಣ ಮಾಡಬೇಕು ಎಂದು ಸಲಹೆ ನೀಡಿದರು. ಪುಲಿಯಂಡ ಜಗದೀಶ್ ಮಾತನಾಡಿ, ಜನರಲ್ ತಿಮ್ಮಯ್ಯ ಅವರ ಪ್ರತಿಮೆ ನಿರ್ಮಾಣ ಮಾಡಿ ೫೦ ವರ್ಷ ಕಳೆದಿರುವುದರಿಂದ ಹೊಸ ಪ್ರತಿಮೆ ನಿರ್ಮಾಣ ಮಾಡುವುದು ಸೂಕ್ತ ಎಂದರು.

ಪ್ರಮುಖರಾದ ಮಂಜು ಚಿಣ್ಣಪ್ಪ ಮಾತನಾಡಿ, ಪ್ರತಿಮೆಗೆ ಮೂರು ನಾಲ್ಕು ಕಡೆ ರಂದ್ರವಾಗಿದ್ದು, ಭಗ್ನವಾದ ಪ್ರತಿಮೆಯನ್ನು ಪುನರ್ ಸ್ಥಾಪಿಸಬಹುದೇ ಎಂಬ ಬಗ್ಗೆ ಯೋಚಿಸಬೇಕಿದೆ ಎಂದರು.

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸತೀಶ್ ಪ್ರತಿಮೆ ಶೀಘ್ರ ಪುನರ್ ಸ್ಥಾಪನೆ ಸಂಬAಧ ಸಮಿತಿ ರಚಿಸಬೇಕು. ಹೊಣೆಗಾರಿಕೆಯನ್ನು ಹಂಚಬೇಕು ಎಂದು ಅವರು ಸಲಹೆ ನೀಡಿದರು.

ಪ್ರಮುಖರಾದ ಚೆಯ್ಯಂಡ ಸತ್ಯ ಮಾತನಾಡಿ, ಈಗಿರುವ ಪ್ರತಿಮೆ ಉತ್ತಮವಾಗಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು ಎಂದರು.

ಪ್ರಮುಖರಾದ ಟಿ.ಪಿ.ರಮೇಶ್ ಮಾತನಾಡಿ, ಮಡಿಕೇರಿಯ ವಿವಿಧ ವೃತ್ತಗಳಲ್ಲಿ ‘ಸಿಗ್ನಲ್ ಲೈಟ್’ ಅಳವಡಿಸಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬ್ಯಾರಿಕೇಡ್ ಅಳವಡಿಸಿ ಸಂಚಾರ ನಿಯಂತ್ರಣಕ್ಕೆ ಕ್ರಮವಹಿಸಲಾಗುವುದು ಎಂದರು.

ಪ್ರಮುಖರಾದ ಚುಮ್ಮಿ ದೇವಯ್ಯ, ಮಡಿಕೇರಿ ನಗರದಲ್ಲಿ ಯಾವುದೇ ವಾಹನಗಳು ೨೦ ಕಿ.ಮೀ. ವೇಗದಲ್ಲಿ ಸಂಚಾರ ಮಾಡಬೇಕು ಎಂದು ಹಲವರು ಸಲಹೆ ಮಾಡಿದರು. ಕನ್ನಂಡ ಕವಿತಾ ಮಾತನಾಡಿ, ಹೊಸ ಪ್ರತಿಮೆ ನಿರ್ಮಾಣ ಮಾಡಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ, ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್, ತಹಶೀಲ್ದಾರ್ ಪ್ರವೀಣ್ ಕುಮಾರ್, ಕೆಎಸ್‌ಆರ್‌ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕಿ ಗೀತಾ, ಪೌರಾಯುಕ್ತ ವಿಜಯ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಸಿದ್ದೇಗೌಡ, ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಧನಂಜಯ ಇತರರು ಇದ್ದರು.