ಮಡಿಕೇರಿ, ಆ. ೨೨: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದಿ. ಬಿ.ಎಸ್ ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಸ್ಥಾಪಿತವಾಗಿರುವ ದತ್ತಿ ಕಾರ್ಯಕ್ರಮದಂತೆ ಕೊಡಗು ಜಿಲ್ಲಾ ಮಟ್ಟದ ಮುಕ್ತ ಕಥಾ ಸ್ಪರ್ಧೆಯನ್ನು ಏರ್ಪಡಿಸಿದೆ.
ಜಿಲ್ಲೆಯ ಹಿರಿಯ ಸಾಹಿತಿಗಳು, ಪತ್ರಕರ್ತರು ಶಕ್ತಿ ದಿನ ಪತ್ರಿಕೆಯ ಸಂಸ್ಥಾಪಕರು ಆಗಿದ್ದ ಬಿ.ಎಸ್ ಗೋಪಾಲಕೃಷ್ಣ ಅವರ ನೆನಪಿನಲ್ಲಿ ಅವರ ಪುತ್ರ ಬಿ.ಜಿ ಅನಂತಶಯನ ಈ ದತ್ತಿ ಸ್ಥಾಪಿಸಿದ್ದು ಜಿಲ್ಲೆಯ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಈ ಕಥಾಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ.
ಕಥೆಯನ್ನು ಎ೪ ಅಳತೆಯ ಹಾಳೆಯಲ್ಲಿ ೨ ಪುಟ ಮೀರದಂತೆ ರಚಿಸತಕ್ಕದ್ದು. ಕಥೆ ಬರೆದು ಸಲ್ಲಿಸಲು ತಾ.೨೮ ಕೊನೆಯ ದಿನವಾಗಿದೆ.
ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಎಸ್.ಜಿ.ಆರ್.ವೈ ಕಟ್ಟಡ, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಇಲ್ಲಿಗೆ ಅಂಚೆ ಮೂಲಕ ಕಳುಹಿಸಬಹುದು ಅಥವಾ ಹೆಚ್ಚಿನ ಮಾಹಿತಿಗೆ ೯೪೪೮೩೪೬೨೭೬ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.