ಮುಳ್ಳೂರು, ಆ. ೨೨: ಸಮೀಪದ ದುಂಡಳ್ಳಿ ಗ್ರಾ.ಪಂ. ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಗ್ರಂಥಪಾಲಕರ ದಿನಾಚರಣೆ ಆಚರಿಸಲಾಯಿತು. ಗ್ರಂಥಾಲಯ ಕೇಂದ್ರದಲ್ಲಿ ನಡೆದ ಗ್ರಂಥಪಾಲಕರ ದಿನದ ಕಾರ್ಯ ಕ್ರಮವನ್ನು ದುಂಡಳ್ಳಿ ಗ್ರಾ.ಪಂ. ಅಧ್ಯಕ್ಷೆ ಸತ್ಯವತಿ ಉದ್ಘಾಟಿಸಿ ಶುಭ ಹಾರೈಸಿದರು.
ದಿನದ ಮಹತ್ವ ಕುರಿತು ಡಿಜಿಟಲ್ ಗ್ರಂಥಾಲಯದ ಮೇಲ್ವಿಚಾರಕಿ ಎಸ್.ಪಿ. ಮುಳ್ಳೂರು, ಆ. ೨೨: ಸಮೀಪದ ದುಂಡಳ್ಳಿ ಗ್ರಾ.ಪಂ. ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಗ್ರಂಥಪಾಲಕರ ದಿನಾಚರಣೆ ಆಚರಿಸಲಾಯಿತು. ಗ್ರಂಥಾಲಯ ಕೇಂದ್ರದಲ್ಲಿ ನಡೆದ ಗ್ರಂಥಪಾಲಕರ ದಿನದ ಕಾರ್ಯ ಕ್ರಮವನ್ನು ದುಂಡಳ್ಳಿ ಗ್ರಾ.ಪಂ. ಅಧ್ಯಕ್ಷೆ ಸತ್ಯವತಿ ಉದ್ಘಾಟಿಸಿ ಶುಭ ಹಾರೈಸಿದರು.
ದಿನದ ಮಹತ್ವ ಕುರಿತು ಡಿಜಿಟಲ್ ಗ್ರಂಥಾಲಯದ ಮೇಲ್ವಿಚಾರಕಿ ಎಸ್.ಪಿ. ನಿರ್ವಹಿಸುತ್ತಿರುವ ಗ್ರಂಥಪಾಲಕರ ಸೇವೆ ಬಹು ಮುಖ್ಯವಾಗಿದ್ದು ಈ ಹಿನ್ನೆಲೆಯಲ್ಲಿ ಗ್ರಂಥಪಾಲಕರ ದಿನವನ್ನು ಆಚರಿಸಲಾಗುತ್ತಿದೆ ಎಂದರು.
ಈ ಸಂದರ್ಭ ಅಂಚೆ ಇಲಾಖೆಯ ತಮ್ಮೇಗೌಡ ಮಾತನಾಡಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಶಿಕ್ಷಕಿ ಅಶ್ವಿನಿ, ಪ್ರಮುಖರಾದ ಮೀನಾಕ್ಷಿ, ವಿಮಲಾಕ್ಷಿ, ಸ್ವಸಹಾಯ ಸಂಘದ ಸದಸ್ಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.