ವೀರಾಜಪೇಟೆ, ಆ. ೨೨: ಧರ್ಮಸ್ಥಳದಲ್ಲಿ ನಡೆದಿರುವ ಸೌಜನ್ಯ ಕೊಲೆಯ ನಿಜವಾದ ಆರೋಪಿಯನ್ನು ಬಂಧಿಸುವ ನಿಟ್ಟಿನಲ್ಲಿ ಸರಕಾರ ತನಿಖೆ ನಡೆಸುವಂತೆ ಒತ್ತಾಯಿಸಿ ಸಿ.ಐ.ಟಿ.ಯು ಮಹಿಳಾ ಸಂಘಟನೆ ವತಿಯಿಂದ ವೀರಾಜಪೇಟೆ ಗಡಿಯಾರ ಕಂಬದ ಬಳಿ ಪ್ರತಿಭಟನೆ ನಡೆಸಿ ತಾ.೨೮ ರಂದು ಬೆಳ್ತಂಗಡಿಯಲ್ಲಿ ನಡೆಯುವ ಪ್ರತಿಭಟನೆಗೆ ಬೆಂಬಲ ಸೂಚಿಸಲಾಯಿತು.
ಕಟ್ಟಡ ಕಾರ್ಮಿಕ ಸಂಘದ ರಾಜ್ಯ ಮಹಿಳಾ ಮುಖಂಡರಾದ ಮಂಡ್ಯದ ಸಿ.ಕುಮಾರಿ ಅವರು ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿ, ಧರ್ಮಸ್ಥಳದಲ್ಲಿ ನಡೆದಿರುವ ಸೌಜನ್ಯಳ ಕೊಲೆಗೆ ನ್ಯಾಂiÀi ದೊರಕಬೇಕು ಎಂದು ಒತ್ತಾಯಿಸಿದರು.
ಕಟ್ಟಡ ಕಾರ್ಮಿಕ ಸಂಘದ ಜಿಲ್ಲಾ ಅಧ್ಯಕ್ಷ ಎ.ಸಿ. ಸಾಬು, ಸಿಐಟಿಯು ಸಂಘಟನೆಯ ಜಿಲ್ಲಾ ಅಧ್ಯಕ್ಷ ಪಿ.ಆರ್. ಭರತ್ ಮಾತನಾಡಿ ಸೌಜನ್ಯ ಕೊಲೆ ಆರೋಪಿಯನ್ನು ಬಂಧಿಸಿ ಶಿಕ್ಷೆ ನೀಡುವಂತೆ ಒತ್ತಾಯಿಸಿದರು.
ಕಟ್ಟಡ ಕಾಮಿಕ ಸಂಘದ ಜಿಲ್ಲಾ ಸಮಿತಿಯ ಪದ್ಮಿನಿ, ಹರಿದಾಸ್, ಸುಬ್ರಮಣಿ ಹರಿದಾಸ್ ಸೇರಿದಂತೆ ೬೫ ಕ್ಕೂ ಹೆಚ್ಚು ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.