ನಾಪೋಕ್ಲು, ಆ. ೨೩: ಇಲ್ಲಿನ ಗ್ರಾಮ ಪಂಚಾಯಿತಿ ಎರಡನೇ ಅವಧಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ವನಜಾಕ್ಷಿ ಆರ್. ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಹೇಮಾವತಿ ಕೆ.ಎ. ಆಯ್ಕೆಯಾದರು.
ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ವನಜಾಕ್ಷಿ ಆರ್. ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಮೀನ ವಿರುದ್ಧ ೧೫-೮ ಮತಗಳ ಅಂತರದಿAದ ಗೆಲುವು ಸಾಧಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಹೇಮಾವತಿ ಕೆ.ಎ. ಬಿಜೆಪಿ ಬೆಂಬಲಿತ ಅಭ್ಯರ್ಥಿ ನೀಲಮ್ಮ ವಿರುದ್ದ ೧೪-೮ ಮತಗಳ ಅಂತರದಿAದ ಗೆಲುವು ಸಾಧಿಸಿದರು.
ಪಂಚಾಯತಿಯಲ್ಲಿ ಒಟ್ಟು ೨೩ ಸದಸ್ಯರಿದ್ದು ಒಬ್ಬರು ಗೈರು ಹಾಜರಾಗಿದ್ದರು.
೨೨ ಮಂದಿ ಮತದಾನದಲ್ಲಿ ಪಾಲ್ಗೊಂಡಿದ್ದರು. ಚುನಾವಣಾ ಅಧಿಕಾರಿಯಾಗಿ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಸೀತಾಲಕ್ಷಿö್ಮ ಕಾರ್ಯನಿರ್ವಹಿಸಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ ಇದ್ದರು.
ಈ ಸಂದರ್ಭ ಕಾಂಗ್ರೆಸ್ ವಲಯ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ಬೂತ್ ಅಧ್ಯಕ್ಷ ಮಾಚೆಟ್ಟಿರ ಕುಶು ಕುಶಾಲಪ್ಪ, ಗ್ರಾಮ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷೆ ಪಾರ್ವತಿ ಹೆಚ್.ಎಸ್., ಉಪಾಧ್ಯಕ್ಷ ಮಹಮ್ಮದ್ ಕೆ.ಎ., ಪಂಚಾಯಿತಿ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದು, ಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
-ದುಗ್ಗಳ