*ಗೋಣಿಕೊಪ್ಪ, ಆ. ೨೩: ತಿತಿಮತಿ ಸರ್ಕಾರಿ ಪದವಿಪೂರ್ವ ಕಾಲೇಜಿನ ೨೦೨೩-೨೪ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ನೌಕಾಪಡೆಯ ನಿವೃತ್ತ ಕಮಾಂಡರ್ ಚಕ್ಕೆರ ಎಂ. ಬೆಳ್ಳಿಯಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಾಳುಗೋಡು ಏಕಲವ್ಯ ಮಾದರಿ ಪದವಿಪೂರ್ವ ವಸತಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ. ಐ.ಎಂ ದಿಲನ್, ಕಾಲೇಜಿನ ಪ್ರಬಾರ ಪ್ರಾಂಶುಪಾಲ ಚಾರ್ಲ್ಸ್ ಡಿಸೋಜ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹಿತನುಡಿಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ, ತಿತಿಮತಿ ಪ್ರಾಥಮಿಕ ಕೃಷಿ ವ್ಯವಸಾಯ ಉತ್ಪನ್ನ ಸಹಕಾರ ಸಂಘದ ಅಧ್ಯಕ್ಷ ಚೆಪ್ಪುಡಿರ ರಾಮಕೃಷ್ಣ, ತಿತಿಮತಿ ಗ್ರಾಮ ಪಂಚಾಯಿತಿ ಸದಸ್ಯ ಅನೂಪ್, ಪ್ರೌಢಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಮಂಗಳರವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳೇ ರೂಪಿಸಿದ ಈ ಕಾರ್ಯಕ್ರಮವನ್ನು ಸಿಂಚನ, ಸೋನಾ, ನಿವಿತಾ, ರಿಷಿತ, ವರ್ಷ ನಿರ್ವಹಿಸಿದ್ದರು.

ರಾಜ್ಯಶಾಸ್ತç ಉಪನ್ಯಾಸಕಿ ರೂಪ, ವಿದ್ಯಾರ್ಥಿ ನಾಯಕರುಗಳಿಗೆ ಪ್ರತಿಜ್ಞಾ ವಿಧಿಯನ್ನು ಯಮುನಾ ಬೋಧಿಸಿದರು.