ಮುಳ್ಳೂರು, ಆ. ೨೩: ವಿದ್ಯಾರ್ಥಿಗಳಿಗೆ ಪಠ್ಯ ಶಿಕ್ಷಣದಿಂದ ಜ್ಞಾನ ವೃದ್ದಿಸಿದರೆ ಕ್ರೀಡಾ ಶಿಕ್ಷಣದಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವು ವೃದ್ಧಿಸುತ್ತದೆ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆ ಗಳಲ್ಲಿ ಪಾಲ್ಗೊಳ್ಳುವಂತೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಅಭಿಪ್ರಾಯಪಟ್ಟರು. ಅವರು ಸಮೀಪದ ಆಲೂರು-ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲಾ ಆಟದ ಮೈದಾನದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ-ಸAಘ ಮತ್ತು ಆಲೂರು ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರುವ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಶನಿವಾರಸಂತೆ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ಕೇವಲ ಪಠ್ಯ ಶಿಕ್ಷಣಕಷ್ಟೆ ಸೀಮಿತ ವಾಗದೆ ಕ್ರೀಡಾ ಚುಟುವಟಿಕೆಗಳತ್ತ ಆಸಕ್ತಿವಹಿಸುವ ಮೂಲಕ ಶಾಲೆಗಳಲ್ಲಿ ನಡೆಯುವ ಕ್ರೀಡಾ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು, ಸೋಲು ಗೆಲವು ಸಹಜ, ಸ್ಫರ್ಧೆಯಲ್ಲಿ ಭಾಗವಹಿಸುವುದು ಮುಖ್ಯವಾಗಿ ರುತ್ತದೆ ಎಂದರು. ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಸೋಮಶೇಖರ್ ಮಾತನಾಡಿ, ಕಳೆದ ಎರಡು ಮೂರು ವರ್ಷ ಕೋವಿಡ್ ಸಮಸ್ಯೆಯಿಂದ ವಿದ್ಯಾರ್ಥಿ ಗಳ ಕ್ರೀಡಾಕೂಟವು ನಡೆಸಲಾಗಿ ರಲಿಲ್ಲ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಗಳಿಗೆ ಕ್ರೀಡಾಕೂಟಗಳನ್ನು ನಡೆಸ ಲಾಗುತ್ತಿದ್ದು ಈ ದಿಸೆಯಲ್ಲಿ ವಿದ್ಯಾರ್ಥಿ ಗಳು ದೈಹಿಕ ಮತ್ತು ಮಾನಸಿಕ ಆರೋಗ್ಯ ಸದೃಢತೆಗೊಳ್ಳಲು ಕ್ರೀಡಾ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವಂತೆ ಸಲಹೆ ನೀಡಿದರು. ಜಿ.ಪಂ. ಮಾಜಿ ಸದಸ್ಯ ಡಿ.ಬಿ. ಧರ್ಮಪ್ಪ ಮಾತನಾಡಿದರು, ವೇದಿಕೆಯಲ್ಲಿ ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲೆ ಕೆ.ಆರ್. ಭಾರತಿ, ಗ್ರಾ.ಪಂ. ಅಧ್ಯಕ್ಷೆ ಮೀನಾಕ್ಷಿ, ಸದಸ್ಯೆ ದಮಯಂತಿ, ಪಿಡಿಓ ಹರೀಶ್ ಪ್ರಮುಖರಾದ ಎಸ್.ಎಂ. ಡಿಸಿಲ್ವ, ಶಾಂತ್ವೆರಿ ವಸಂತ್, ಜೀವನ್, ವಿಜಯ್, ದೈಹಿಕ ಶಿಕ್ಷಣ ಇಲಾಖೆಯ ಪರಿವೀಕ್ಷಕಿ ಸುಕುಮಾರಿ, ದೈಹಿಕ ಶಿಕ್ಷಕರ ಸಂಘದ ರತ್ನಕುಮಾರ್, ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಅಲೋಕ್ ಮುಂತಾದವರು ಇದ್ದರು. ಕ್ರೀಡಾಕೂಟದಲ್ಲಿ ಶನಿವಾರಸಂತೆ ವಲಯದ ವಿವಿಧ ೧೩ ಪ್ರೌಢಶಾಲೆಗಳಿಂದ ನೂರಾರು ಕ್ರೀಡಾಪಟುಗಳು ಭಾಗವಹಿಸಿದ್ದರು.