ಸುAಟಿಕೊಪ್ಪ, ಆ. ೨೩: ಮಡಿಕೇರಿ ವಿಧಾನ ಕ್ಷೇತ್ರದ ವ್ಯಾಪ್ತಿಯಲ್ಲಿ ಯಾವುದೇ ಸರಕಾರಿ ಕೆಲಸಗಳಿಗೆ ಇಲಾಖೆಯ ಅಧಿಕಾರಿಗಳು ಅಥವಾ ಸಿಬ್ಬಂದಿಗಳು ಹಣ ಪೀಡಿಸಿರುವುದು ಕಂಡು ಬಂದಲ್ಲಿ ನೇರವಾಗಿ ತಮ್ಮ ಗಮನಕ್ಕೆ ತನ್ನಿ ಸೂಕ್ತ ಕ್ರಮಕೈಗೊಳ್ಳುತ್ತೇನೆ ಎಂದು ಮಡಿಕೇರಿ ಶಾಸಕ ಡಾ.ಮಂಥರ್ಗೌಡ ಅಭಯ ನೀಡಿದರು.
ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಜನಸ್ಪಂದನ ಸಭೆ ನಡೆಸಿ ಸುಂಟಿಕೊಪ್ಪದ ಕೊಡವ ಸಮಾಜದಲ್ಲಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜನರು ಮೊದಲು ಹಣ ಕೊಡುವುದನ್ನು ನಿಲ್ಲಿಸಬೇಕು. ಭ್ರಷ್ಟಚಾರದ ವಿರುದ್ಧ ಸಂಘಟಿತರಾಗಿ ಹೋರಾಟ ನಡೆಸಬೇಕೆಂದು ಕರೆ ನೀಡಿದ ಅವರು, ಪಕ್ಷದ ಕಾರ್ಯಕರ್ತರು ರಾಜ್ಯ ಸರಕಾರ ಜಾರಿಗೆ ತಂದಿರುವ ೫ ಗ್ಯಾರಂಟಿ ಯೋಜನೆಗಳ ಜೊತೆಗೆ ಇತರ ಸರಕಾರಿ ಕಾರ್ಯಕ್ರಮಗಳ ಬಗ್ಗೆ ಜನತೆ ಆರಿವು ಮೂಡಿಸಿ ಸಮಾಜದ ಕಟ್ಟಕಡೆಯ ವ್ಯಕ್ತಿಯು ಕೂಡ ಆರ್ಹ ಫಲಾನುಭವಿಯಾಗಿದ್ದರೆ ಅವರನ್ನು ಗುರುತಿಸುವಂತಾಗಬೇಕು ಎಂದು ಕಿವಿ ಮಾತು ಹೇಳಿದರು.
ಸುಂಟಿಕೊಪ್ಪ ಹೋಬಳಿ ಕೇಂದ್ರವು ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಂದ ವಂಚಿತವಾಗಿರುವುದು ತಮ್ಮ ಗಮನಕ್ಕೆ ಬಂದಿದೆ ವಿಶೇಷವಾಗಿ ಕುಡಿಯುವ ನೀರು, ಆಸ್ಪತ್ರೆ, ಬಸ್ ನಿಲ್ದಾಣ ಮೊದಲಾದವು ಆದ್ಯತೆಯ ಪಟ್ಟಿಯಲ್ಲಿದ್ದು, ಈ ಪೈಕಿ ಕುಡಿಯುವ ನೀರಿನ ಯೋಜನೆಯು ರೂ ೭ ಕೋಟಿ ವೆಚ್ಚದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಮಾರ್ಚ್ ೨೦೨೪ ರೊಳಗೆ ಕಾರ್ಯಗತಗೊಳ್ಳಲಿದೆ ಎಂದು ಡಾ.ಮಂಥರ್ಗೌಡ ಭರವಸೆ ನೀಡಿದರು.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಕೇಂದ್ರ ಸರಕಾರವು ಸರಕಾರಿ ಸಂಸ್ಥೆಗಳನ್ನು ಖಾಸಗೀಕರಣ ಮಾಡುತ್ತಿದ್ದು, ದೇಶದ ಅರ್ಥಿಕತೆಯನ್ನು ದುರ್ಬಲಗೊಳಿಸುವ ನಿಟ್ಟಿನಲ್ಲಿ ಬಹುರಾಷ್ಟಿçÃಯ ಕಂಪೆನಿಗಳ ಕೋಟ್ಯಂತರ ರೂ. ಸಾಲಮನ್ನಾ ಮಾಡಿದ ಹಿನ್ನಲೆಯಲ್ಲಿ ಅರ್ಥಿಕ ಹೊರೆ ಹೆಚ್ಚಾಗಿದೆ ಎಂದು ಆರೋಪಿಸಿದರು.
ಜಿ.ಪಂ. ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಪಿ.ಎಂ. ಲತೀಫ್ ಮಾತನಾಡಿ, ಸುಂಟಿಕೊಪ್ಪದ ಹಲವು ಬಡಾವಣೆಗಳಲ್ಲಿ ರಸ್ತೆಯೇ ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದ್ದು ಬಸ್ನಿಲ್ದಾಣ ಮತ್ತು ಮಾರುಕಟ್ಟೆ ಒಂದೇ ಸ್ಥಳದಲ್ಲಿ ಬಂದರೆ ಜನರಿಗೆ ಅನುಕೂಲವಾಗುತ್ತದೆ ಎಂದು ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಶಾಸಕ ಡಾ. ಮಂಥರ್ಗೌಡ ಮತ್ತು ಬ್ಲಾಕ್ ಅಧ್ಯಕ್ಷ ವಿ.ಪಿ. ಶಶಿಧರ್ ಅವರನ್ನು ಸನ್ಮಾನಿಸಲಾಯಿತು. ಸುಂಟಿಕೊಪ್ಪ ಗ್ರೇಡ್ ೧ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾಗಿ ಅತೀ ಹೆಚ್ಚು ಮತಗಳಿಂದ ಜಯಗಳಿಸಿದ ಹೆಚ್.ಬಿ.ಶಿವಮ್ಮ ಮಹೇಶ್ ಅವರನ್ನು ಶಾಸಕರು ಸನ್ಮಾನಿಸಿದರು. ಎಸ್ಡಿಪಿಐ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಪಂಚಾಯಿತಿ ಸದಸ್ಯೆ ರೇಷ್ಮ ಅವರನ್ನು ಸ್ವಾಗತಿಸಲಾಯಿತು.
ಸಮಾರಂಭದಲ್ಲಿ ಜಿಲ್ಲಾ ಕಾಂಗ್ರೆಸ್ ಸದಸ್ಯ ಶಾಜಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ರೋಸ್ಮೇರಿ ರಾಡ್ರಿಗಸ್, ಯುವ ಕಾಂಗ್ರೆಸ್ ಅಧ್ಯಕ್ಷ ಅನೂಪ್, ಕೆ.ನಿಡುಗಣೆ ಗ್ರಾ.ಪಂ. ಸದಸ್ಯ ಜಾನ್ಸನ್ ಪಿಂಟೂ, ಪರಿಶಿಷ್ಟ ಜಾತಿ ಘಟಕ ಅಧ್ಯಕ್ಷ ಎಂ.ಎಸ್. ರವಿ, ಪಂಚಾಯಿತಿ ಸದಸ್ಯ ರಫೀಕ್ ಖಾನ್, ಮಾಜಿ ಸದಸ್ಯ ರಜಾಕ್, ಗ್ರಾಮದ ಅಧ್ಯಕ್ಷರುಗಳಾದ ಸುರೇಶ್, ಹಕೀಂ, ಕೆ.ಎಚ್.ಶರೀಫ್, ಹಮೀದ್, ರತ್ನಾ ಜಯನ್, ಮರಿಯ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಇದ್ದರು.