ಕೂಡಿಗೆ, ಆ. ೨೪: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ಕಾಂಚನಾ, ಉಪಾಧ್ಯಕ್ಷೆಯಾಗಿ ಆರ್. ರಶ್ಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾ ಅಧಿಕಾರಿಯಾಗಿ ಕೂಡಿಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಂಜನಾದೇವಿ ಕಾರ್ಯನಿರ್ವಹಿಸಿದರು. ಈ ಸಂದರ್ಭ ಸಂಘದ ನಿರ್ದೇಶಕರುಗಳು ಸೇರಿದಂತೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಪುನೀತ್, ಸಂಘದ ಕಾರ್ಯದರ್ಶಿ ಜಾನಕಿ ಹಾಜರಿದ್ದರು.