ಸೋಮವಾರಪೇಟೆ, ಆ. ೨೪ : ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಪಟ್ಟಣ ಸಮೀಪದ ಹಾನಗಲ್ಲು ಗ್ರಾಮದ ಸುಜಿತ್ ಅವರನ್ನು ನೇಮಕಗೊಳಿಸಲಾಗಿದೆ.
ಪಕ್ಷದ ವರಿಷ್ಠರ ಒಪ್ಪಿಗೆ ಮೇರೆ ಜಿಲ್ಲಾ ಪರಿಶಿಷ್ಟ ಜಾತಿ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಘಟಕದ ಜಿಲ್ಲಾಧ್ಯಕ್ಷ ಬಿ.ಈ. ಜಯೇಂದ್ರ ತಿಳಿಸಿದ್ದಾರೆ. ನೂತನ ಪದಾಧಿಕಾರಿಗಳಿಗೆ ಶಾಸಕ ಡಾ. ಮಂಥರ್ ಗೌಡ ಅವರು ಆದೇಶ ಪತ್ರ ವಿತರಿಸಿದರು.