ಮಡಿಕೇರಿ, ಆ. ೨೩: ಜನಪ್ರತಿನಿಧಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮಡಿಕೇರಿ ಶಾಸಕ ಡಾ. ಮಂಥರ್ ಗೌಡ ಹೇಳಿದರು. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹೊದ್ದೂರು ಗ್ರಾ.ಪಂ. ಅಧ್ಯಕ್ಷ ಹೆಚ್.ಎ. ಹಂಸ ಕೊಟ್ಟಮುಡಿ ಹುಟ್ಟುಹಬ್ಬದ ಪ್ರಯುಕ್ತ ಅವರ ಹಿತೈಷಿಗಳ ಬಳಗದಿಂದ ನಾಪೋಕ್ಲು ಬಳಿಯ ಚೆರಿಯಪರಂಬು ಶಾದಿ ಮಹಲ್ನಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರ, ಆಟೋ ಚಾಲಕರಿಗೆ ಸಮವಸ್ತç ವಿತರಣೆ, ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶಾಸಕರು ಮಾತನಾಡಿದರು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಕ್ತ ನಿಧಿ ಕೇಂದ್ರದ ಮುಖ್ಯಸ್ಥರಾದ ಡಾ. ಕರುಂಬಯ್ಯ ಮಾತನಾಡಿ ಜಿಲ್ಲೆಯ ರಕ್ತನಿಧಿ ಕೇಂದ್ರಕ್ಕೆ ಹೆಚ್ಚಿನ ರಕ್ತದÀ ಅವಶ್ಯಕತೆ ಇದೆ. ಇಂತಹ ಕಾರ್ಯಕ್ರಮಗಳ ಮೂಲಕ ರಕ್ತವನ್ನು ಸಂಗ್ರಹಿಸಿ ರೋಗಿಗಳಿಗೆ ನೀಡಲಾಗುತ್ತಿದೆ. ಮುಂದೆ ವಿವಿಧ ಸಂಘ-ಸAಸ್ಥೆಗಳು ಇದೇ ರೀತಿ ಕಾರ್ಯಕ್ರಮ ಆಯೋಜಿಸಿ ರೋಗಿಗಳ ನೆರವಿಗೆ ಮುಂದೆ ಬರಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಕೆಪಿಸಿಸಿ ಸದಸ್ಯ ಯಾಕೂಬ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಲತೀಫ್ ಸುಂಟಿಕೊಪ್ಪ, ಹೊದ್ದೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ, ಹೊದ್ದೂರು ಗ್ರಾಮ ಪಂಚಾಯಿತಿ ಸದಸ್ಯರಾದ ಹಮೀದ್ ಕಬಡಕೇರಿ, ಮೊಣ್ಣಪ್ಪ ಸೇರಿದಂತೆ ವಿವಿಧ ನಾಯಕರು ಮಾತನಾಡಿದರು.
ಚೆರಿಯಪರಂಬು ಪ್ರಾಥಮಿಕ ಶಾಲೆ ಮಕ್ಕಳಿಗೆ ಹಂಸ ನೋಟು ಪುಸ್ತಕ ಹಾಗೂ ಪರಿಕರಗಳನ್ನು ವಿತರಿಸಿದರು. ಜಿಲ್ಲೆ, ರಾಜ್ಯ ಹಾಗೂ ರಾಷ್ಟçಮಟ್ಟದ ವಿವಿಧ ಕ್ಷೇತ್ರದಲ್ಲಿ ಗುರುತಿಸಿಕೊಂಡು ಸಾಧನೆ ಮಾಡಿದ ವ್ಯಕ್ತಿಗಳನ್ನು ಹಾಗೂ ಮಡಿಕೇರಿ ಬ್ಲಾಕ್ ಹಂಸ ಅವರನ್ನು ಶಾಸಕ ಮಂಥರ್ ಗೌಡ ಸನ್ಮಾನಿಸಿದರು. ರಕ್ತದಾನ ಶಿಬಿರದಲ್ಲಿ ಸುಮಾರು ೫೦ಕ್ಕೂ ಅಧಿಕ ಮಂದಿ ರಕ್ತದಾನ ಮಾಡಿದರು.
ಈ ಸಂದರ್ಭ ಕೊಟ್ಟಮುಡಿ ಮರ್ಕಜ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಸಖಾಫಿ, ಜೆಡಿಎಸ್ ಮುಖಂಡ ಮನ್ಸೂರ್ ಆಲಿ, ಕೊಟ್ಟಮುಡಿ ಜಮಾಅತ್ ಅಧ್ಯಕ್ಷ ಉಸ್ಮಾನ್, ಹಂಸ ಮುಸ್ಲಿಯಾರ್, ನಾಪೋಕ್ಲು ಆಟೋ ಚಾಲಕರ ಸಂಘದ ಅಧ್ಯಕ್ಷ ರಾಜೀವನ್, ಕಾಂಗ್ರೆಸ್ ಪ್ರಮುಖರಾದ ಶಾಫಿ ಎಡಪಾಲ, ವಿಶ್ವನಾಥ್, ಜುಬೈರ್, ಮೈಸಿ ಕತ್ತಣೀರ, ಜಿಸಿಸಿ ಅಧ್ಯಕ್ಷ ಅಬೂಬಕ್ಕರ್ ಹಾಜಿ, ಕಲೀಲ್ ಕ್ರಿಯೆಟಿವ್, ನಾಪೋಕ್ಲು ಯೂತ್ ಕಾಂಗ್ರೆಸ್ ಅಧ್ಯಕ್ಷ ಸಿರಾಜ್, ಅಹಮದ್ ಸಿ. ಎಚ್, ನಾಪೋಕ್ಲು ಗ್ರಾಂ.ಪA. ಸದಸ್ಯ ಖುರೇಶಿ, ಮಹಮ್ಮದ್, ಮಾಜಿ ಸದಸ್ಯರಾದ ರಶೀದ್, ಅಜೀಜ್, ಹಂಸ ಹಿತೈಷಿ ಬಳಗದ ಪದಾಧಿ ಕಾರಿಗಳು, ಆಟೋ ಚಾಲಕರು, ಕಾಂಗ್ರೆಸ್ ಕಾರ್ಯಕರ್ತರು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಿಬ್ಬಂದಿಗಳು ಮತ್ತಿತರರು ಹಾಜರಿದ್ದರು.