ಕುಶಾಲನಗರ, ಆ. ೨೪: ಕುಶಾಲನಗರ ತಾಲೂಕು ಒಕ್ಕಲಿಗರ ಸಂಘದ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಸ್ಥಳೀಯ ರೈತ ಸಹಕಾರ ಭವನದಲ್ಲಿ ನಡೆಯಿತು.

ಸಂಸದ ಪ್ರತಾಪ್ ಸಿಂಹ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕರ್ನಾಟಕ ರಾಜ್ಯದಾದ್ಯಂತ ಕೆಂಪೇಗೌಡ ಜಯಂತಿ ಆಚರಣೆ ಯಾಗಬೇಕಿದೆ. ಕೆಂಪೇಗೌಡರು ಕೇವಲ ಒಕ್ಕಲಿಗ ಸಮುದಾಯಕ್ಕೆ ಮಾತ್ರ ಸೀಮಿತವಿಲ್ಲ. ಬೆಂಗಳೂರಿನಲ್ಲಿ ಜೀವನ ಕಂಡುಕೊAಡಿರುವ ಪ್ರತಿಯೊಬ್ಬರೂ ಅವರನ್ನು ಸ್ಮರಿಸಬೇಕಿದೆ ಎಂದರು.

ಅತಿಥಿಗಳಾಗಿ ಪಾಲ್ಗೊಂಡಿದ್ದ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂಥರ್ ಗೌಡ ಮಾತನಾಡಿ, ಕುಶಾಲನಗರ ತಾಲೂಕು, ಜಿಲ್ಲಾ ವ್ಯಾಪ್ತಿಯಲ್ಲಿ ಒಕ್ಕಲಿಗರ ಭವನ ನಿರ್ಮಾಣಕ್ಕೆ ಅಗತ್ಯ ನೆರವು ಕಲ್ಪಿಸಲು ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಎಚ್.ಎನ್. ರವೀಂದ್ರ ಜಿ.ಪಂ. ಮಾಜಿ ಸದಸ್ಯ ವಿ.ಪಿ. ಶಶಿಧರ್ ಮಾತನಾಡಿದರು. ರಾಜ್ಯ ಶಿಕ್ಷಕರ ಸಂಘದ ಕಾರ್ಯದರ್ಶಿ ಎಚ್.ಎಸ್. ಚೇತನ್ ನಾಡಪ್ರಭು ಕೆಂಪೇಗೌಡರ ಬಗ್ಗೆ ಉಪನ್ಯಾಸ ನೀಡಿದರು. ಸಭೆಗೂ ಮುನ್ನ ನಾಡಪ್ರಭು ಕೆಂಪೇಗೌಡ ಮತ್ತು ಬಾಲಗಂಗಾಧರ ಸ್ವಾಮೀಜಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಕುಶಾಲನಗರ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಕೆ.ದಿನೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಘದ ಅಧ್ಯಕ್ಷ ಎಸ್.ಎಂ.ಚAಗಪ್ಪ, ಯುವ ವೇದಿಕೆ ಅಧ್ಯಕ್ಷ ಎಂ.ಡಿ.ಕೃಷ್ಣಪ್ಪ, ಮಡಿಕೇರಿ ತಾಲೂಕು ಅಧ್ಯಕ್ಷ ವಿ.ಜಿ. ಮೋಹನ್, ಸೋಮವಾರಪೇಟೆ ತಾಲೂಕು ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ, ವೀರಾಜಪೇಟೆ ಅಧ್ಯಕ್ಷ ಕೆ.ಪಿ.ನಾಗರಾಜ್, ತಾಲೂಕು ಯುವ ಘಟಕ ಅಧ್ಯಕ್ಷ ವಿ.ಬಿ ಜಯರಾಜ್ ಮತ್ತಿತರರು ಇದ್ದರು. ಈ ಸಂದರ್ಭ ಶಾಸಕ ಮಂಥರ್ ಗೌಡ, ಜಿ.ಪಂ. ಮಾಜಿ ಸದಸ್ಯ ವಿ.ಪಿ. ಶಶಿಧರ್, ಸಮಾಜಸೇವಕ ಎಚ್.ಎನ್. ರವೀಂದ್ರ ಸೇರಿದಂತೆ ವಿವಿಧ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸಂಘದ ಪದಾಧಿಕಾರಿಗಳಾದ ರಮೇಶ್, ಧನಂಜಯ, ಗಿರೀಶ್, ಶೇಕ್ರೇಗೌಡ, ಗೌತಮ್, ವೆಂಕಟೇಶ್, ಜಗದೀಶ್, ಪ್ರಕಾಶ್, ನಾಗೇಗೌಡ, ಕಿಟ್ಟಿ, ನವೀನ್, ಅರುಣ್ ಚಂಗಪ್ಪ, ಸರೋಜಮ್ಮ, ಗೌರಮ್ಮ, ರಶ್ಮಿ, ಬಿ.ಬಿ. ಭಾರತೀಶ್, ಕೆ.ಕೆ. ಮಂಜುನಾಥ್ ಕುಮಾರ್ ಮತ್ತಿತರರು ಇದ್ದರು.