ಪಾಲಿಬೆಟ್ಟ, ಆ. ೨೪: ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೊಣ್ಣಂಡ ಕೆ. ಚಂಗಪ್ಪ ಜ್ಞಾಪಕಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಉಪಸ್ಥಿತಿಯಲ್ಲಿ ಅಮ್ಮತ್ತಿ ಕಸಾಪ ಹೋಬಳಿ ಘಟಕದ ಅಧ್ಯಕ್ಷ ಟಿ.ಹೆಚ್. ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಶೈನಾ ಕೆ.ಕೆ. ಉದ್ಘಾಟಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಕಸಾಪ ಅಮ್ಮತ್ತಿ ಹೋಬಳಿ ಘಟಕದ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಗೊಣಿಕೊಪ್ಪ ಕಾವೇರಿ ಕಾಲೇಜಿನ ಉಪನ್ಯಾಸಕರಾದ ಎಸ್.ಎಂ. ರಜಿನಿ ಅವರು ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಪಾಲಿಬೆಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪಾಧ್ಯಕ್ಷ ಎಂ.ಎA. ಕಾಳಪ್ಪ, ಪಾಲಿಬೆಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆÀ ಲೀಲಾವತಿ, ವೀರಾಜಪೇಟೆ ತಾ.ಪಂ. ಮಾಜಿ ಸದಸ್ಯ ರಾಮದಾಸ್ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು, ಕಸಾಪ ಸದಸ್ಯರಾದ ಕೆ.ಆರ್. ಸೂರಜ್ ಮತ್ತು ಸೋಮಪ್ಪ ಉಪಸ್ಥಿತರಿದ್ದರು. ಉಪನ್ಯಾಸಕ ಪಿ.ಆರ್. ಶಿವದಾಸ್ ಸ್ವಾಗತಿಸಿದರು. ಉಪನ್ಯಾಸಕಿ ಸುನಿತಾ ಕೆ.ಕೆ. ನಿರೂಪಿಸಿ, ರಾಮದಾಸ್ ವಂದಿಸಿದರು.