ವೀರಾಜಪೇಟೆ, ಆ. ೨೩: ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ ಅಮೃತ ಸರೋವರ ಅಭಿಯಾನದಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯವು ಈ ಬಾರಿ ನನ್ನ ಮಣ್ಣು-ನನ್ನ ದೇಶ ಅಭಿಯಾನ ಕೈಗೊಂಡಿದೆ.
ಇದರ ಅಂಗವಾಗಿ ಭೂತಾಯಿಗೆ ಹಾಗೂ ದೇಶಕ್ಕಾಗಿ ಸೇವೆ ಸಲ್ಲಿಸಿದ ವೀರ ಯೋಧರಿಗೆ, ಸ್ವಾತಂತ್ರ÷್ಯ ಹೋರಾಟಗಾರರು, ರಕ್ಷಣಾ ಸಿಬ್ಬಂದಿ, ಕೇಂದ್ರ ಸಶಸ್ತç ಪೊಲೀಸ್ ಪಡೆಗಳ ಅಧಿಕಾರಿ, ಸಿಬ್ಬಂದಿ ಹಾಗೂ ರಾಜ್ಯ ಪೊಲೀಸರು ಸೇರಿದಂತೆ ಕರ್ತವ್ಯದ ವೇಳೆ ಪ್ರಾಣ ತ್ಯಾಗ ಮಾಡಿದ ವೀರರಿಗೆ ನಮನ ಸಲ್ಲಿಸುವ ಉದ್ದೇಶದಿಂದ ವೀರಾಜಪೇಟೆಯ ಇತಿಹಾಸ ಪ್ರಸಿದ್ಧ ಗೌರಿಕೆರೆ ಬಳಿ ಸ್ವಾತಂತ್ರ÷್ಯ ದಿನಾಚರಣೆ ಅಂಗವಾಗಿ ಶಿಲಾಫಲಕವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅನಾವರಣಗೊಳಿಸಿದರು. ಈ ಸಂದರ್ಭ ವೀರಾಜಪೇಟೆ ಪುರಸಭೆ ಮುಖ್ಯಾಧಿಕಾರಿ ಎ. ಚಂದ್ರಕುಮಾರ್, ಪುರಸಭೆ ಚುನಾಯಿತ ಸದಸ್ಯರುಗಳು, ಸಾರ್ವಜನಿಕರು ಇದ್ದರು.