ಚೆಸ್ ವಿಶ್ವಕಪ್ : ಪ್ರಗ್ನಾನಂದಗೆ ಸೋಲು
ಬಾಕು, ಆ. ೨೪: ಅಜರ್ಬೈಜಾನ್ನ ಬಾಕುವಿನಲ್ಲಿ ನಡೆದ ಫಿಡೆ ವಿಶ್ವಕಪ್ ಚೆಸ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತದ ಗ್ರ್ಯಾಂಡ್ಮಾಸ್ಟರ್ ಆರ್ ಪ್ರಗ್ನಾನಂದ ಅವರು ವಿರೋಚಿತ ಸೋಲು ಅನುಭವಿಸಿದ್ದು, ವಿಶ್ವದ ನಂ.೧ ಮ್ಯಾಗ್ನಸ್ ಕಾರ್ಲ್ಸನ್ ಅವರು ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಭಾರತದ ಪ್ರಗ್ನಾನಂದ ಅವರು ಮೊದಲ ಮತ್ತು ಎರಡನೇ ಪಂದ್ಯದಲ್ಲೂ ಡ್ರಾ ಸಾಧಿಸಿದ್ದರು. ಹೀಗಾಗಿ ಇಂದು ನಡೆದ ಟೈ ಬ್ರೇಕರ್ನಲ್ಲಿ ನಾರ್ವೆಯ ಮ್ಯಾಗ್ನಸ್ ಕಾರ್ಲ್ಸನ್ ಅವರು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮ್ಯಾಗ್ನಸ್ ಕಾರ್ಲ್ಸನ್ ಚೊಚ್ಚಲ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಪ್ರಜ್ಞಾನಂದ ರನ್ನರ್ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಮೊದಲ ಟೈ-ಬ್ರೇಕರ್ನಲ್ಲಿ ಜಯ ಸಾಧಿಸಿದ ಕಾರ್ಲ್ಸನ್ ೧-೦ ಮುನ್ನಡೆ ಸಾಧಿಸಿದರು. ನಂತರ ಎರಡನೇ ಪಂದ್ಯವನ್ನು ಡ್ರಾ ಮಾಡಿಕೊಂಡರು. ಈ ಮೂಲಕ ಕಾರ್ಲ್ಸನ್ ಚೊಚ್ಚಲ ವಿಶ್ವಕಪ್ ಚಾಂಪಿಯನ್ ಪಟ್ಟ ಅಲಂಕರಿಸಿದರು.
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ಸಿಎಂ
ಬೆಂಗಳೂರು, ಆ. ೨೪: ಚಂದ್ರಯಾನ-೩ ಮಿಷನ್ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿAಗ್ ಮಾಡಿರುವ ಇಸ್ರೊ ವಿಜ್ಞಾನಿಗಳ ಸಾಧನೆ ಭಾರತದ ಪಾಲಿಗೆ ಐತಿಹಾಸಿಕವಾದದ್ದು ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದ್ದಾರೆ. ಇಂದು ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೊ ಕಂಟ್ರೋಲ್ ರೂಂಗೆ ಭೇಟಿ ನೀಡಿ ವಿಜ್ಞಾನಿಗಳನ್ನು ಸನ್ಮಾನಿಸಿ ಅಭಿನಂದಿಸಿದ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಇಂದು ಇಡೀ ಜಗತ್ತು ಭಾರತದತ್ತ ಅಚ್ಚರಿಯಿಂದ ನೋಡುವ ಪ್ರಶಂಸನೀಯ ಕೆಲಸವನ್ನು ನಮ್ಮ ವಿಜ್ಞಾನಿಗಳು ಮಾಡಿದ್ದಾರೆ. ಇಡೀ ಜಗತ್ತಿನಲ್ಲಿ ಇದುವರೆಗೆ ಅಮೆರಿಕ, ರಷ್ಯಾ ಮತ್ತು ಚೀನಾ ಮೂರು ದೇಶಗಳು ಇದುವರೆಗೆ ಚಂದ್ರನ ಮೇಲೆ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿದ್ದವು. ಭಾರತ ನಾಲ್ಕನೇ ದೇಶವಾಗಿದ್ದು ಅದು ದಕ್ಷಿಣ ಧ್ರುವದಲ್ಲಿ ಮೊದಲ ಬಾರಿಗೆ ಬಾಹ್ಯಾಕಾಶ ನೌಕೆಯನ್ನು ಇಳಿಸಿರುವುದು ಅತ್ಯಂತ ಅಭಿನಂದನೀಯ ಎಂದರು. ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿ ಇಸ್ರೋ ವಿಜ್ಞಾನಿಗಳನ್ನು ಸರ್ಕಾರ ಗೌರವಿಸಲಿದೆ.
ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು, ಆ. ೨೪: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆ ‘ಆಪರೇಷನ್ ಹಸ್ತ' ಶುರುವಾಗಿದ್ದು, ಬಿಜೆಪಿ ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಬೈರತಿ ಬಸವರಾಜ್ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಇದೀಗ ಶಿವಮೊಗ್ಗದ ಹಿರಿಯ ನಾಯಕ, ಮಾಜಿ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿ ಯಲ್ಲಿಂದು ನಡೆದ ಸರಳ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಧ್ವಜ ಸ್ವೀಕರಿಸುವ ಮೂಲಕ ಪಕ್ಷ ಸೇರ್ಪಡೆ ಯಾದರು. ಈ ಸಂದರ್ಭ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸೇರಿದಂತೆ ಶಿವಮೊಗ್ಗ ಜಿಲ್ಲೆಯ ಮುಖಂಡರು ಉಪಸ್ಥಿತರಿದ್ದರು.
ವಿಮಾನ ಪತನದಲ್ಲಿ ವ್ಯಾಗ್ನರ್ ಮುಖ್ಯಸ್ಥ ಸಾವು
ರಷ್ಯಾ, ಆ. ೨೪: ರಷ್ಯಾ ರಾಜಧಾನಿ ಮಾಸ್ಕೋದ ಉತ್ತರ ಭಾಗದಲ್ಲಿ ಖಾಸಗಿ ವಿಮಾನವೊಂದು ಪತನಗೊಂಡು ಹತ್ತು ಮಂದಿ ಸಾವನ್ನಪ್ಪಿದ್ದಾರೆ. ವ್ಯಾಗ್ನರ್ ಮುಖ್ಯಸ್ಥ ಯೆವ್ಗೆನಿ ಪ್ರಿಗೋಜಿನ್ ಕೂಡ ವಿಮಾನದಲ್ಲಿದ್ದು ಅವರು ಸಾವನ್ನಪ್ಪಿದ್ದಾರೆ. ಪ್ರಿಗೋಜಿನ್ ಮತ್ತು ಆರು ಉನ್ನತ ಲೆಫ್ಟಿನೆಂಟ್ ಗಳು ಮಾಸ್ಕೋದಿಂದ ಟೇಕಾಫ್ ಆದ ಕೂಡಲೇ ಮೂವರ ಸಿಬ್ಬಂದಿ ಯೊಂದಿಗೆ ಅಪಘಾತಕ್ಕೀಡಾದ ಜೆಟ್ನಲ್ಲಿದ್ದರು ಎಂದು ರಷ್ಯಾದ ನಾಗರಿಕ ವಿಮಾನಯಾನ ಸಂಸ್ಥೆ ಹೇಳಿದೆ. ಸಿಬ್ಬಂದಿ ಎಲ್ಲಾ ೧೦ ಮಂದಿಯ ಮೃತ ದೇಹಗಳನ್ನು ತ್ವರಿತವಾಗಿ ಪತ್ತೆ ಮಾಡಿದರು. ಪ್ರಿಗೋಜಿನ್ ಅವರ ವ್ಯಾಗ್ನರ್ ಕಂಪನಿಯ ಮೂಲಗಳನ್ನು ಉಲ್ಲೇಖಿಸಿ ಅವರ ಸಾವನ್ನು ರಷ್ಯಾದ ಮಾಧ್ಯಮಗಳು ದೃಢಪಡಿಸಿವೆ.
ಹಿಮಾಚಲ ಪ್ರದೇಶದಲ್ಲಿ ಭೂಕುಸಿತ-ಹಲವರ ಸಾವು
ಶಿಮ್ಲಾ, ಆ. ೨೪: ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಅನ್ನಿ ಪ್ರದೇಶದಲ್ಲಿ ಗುರುವಾರ ಭಾರಿ ಭೂಕುಸಿತ ಸಂಭವಿಸಿದ್ದು, ಅಸುರಕ್ಷಿತವೆಂದು ಘೋಷಿಸಲಾದ ಕನಿಷ್ಟ ಎಂಟು ಕಟ್ಟಡಗಳು ಕುಸಿದು ಬಿದ್ದಿವೆ. ಹಲವು ಜನ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ವಸತಿ ಕಟ್ಟಡಗಳು, ಅಂಗಡಿಗಳು, ಬ್ಯಾಂಕ್ಗಳು ಮತ್ತು ಇತರ ವಾಣಿಜ್ಯ ಸಂಸ್ಥೆಗಳು ನಾಲ್ಕೆöÊದು ದಿನಗಳ ಹಿಂದೆ ಬಿರುಕು ಬಿಟ್ಟಿದ್ದವು ಎಂದು ಸ್ಥಳದಲ್ಲಿದ್ದ ಅನ್ನಿ ಉಪ ವಿಭಾಗೀಯ ಮ್ಯಾಜಿಸ್ಟೆçÃಟ್(ಎಸ್ಡಿಎಂ) ನರೇಶ್ ವರ್ಮಾ ಅವರು ತಿಳಿಸಿದ್ದಾರೆ. ಈ ಕಟ್ಟಡಗಳನ್ನು ಅಸುರಕ್ಷಿತವೆಂದು ಘೋಷಿಸಿ, ಅದರಲ್ಲಿದ್ದ ಜನರನ್ನು ಇತ್ತೀಚೆಗೆ ತೆರವುಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಹಾನಿಯ ಮೌಲ್ಯಮಾಪನವನ್ನು ಮಾಡಲಾಗುತ್ತಿದೆ ಮತ್ತು ಅನ್ನಿಯ ರಾಷ್ಟಿçÃಯ ಹೆದ್ದಾರಿ ೩೦೫ ರ ಉದ್ದಕ್ಕೂ ಇರುವ ಕೆಲವು ಅಸುರಕ್ಷಿತ ಕಟ್ಟಡಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ತೆರವು ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಮಧ್ಯೆ, ಶಿಮ್ಲಾದ ಶಿವ ದೇವಾಲಯದಲ್ಲಿ ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದೆ. ಆದರೆ ಕುಲುವಿನ ಅನ್ನಿ ಪ್ರದೇಶದಲ್ಲಿ ಕಟ್ಟಡ ಕುಸಿತದ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಶಿಮ್ಲಾದ ಮೂರು ಪ್ರಮುಖ ಭೂಕುಸಿತಗಳ ಅವಶೇಷಗಳಿಂದ ಇದುವರೆಗೆ ೨೫ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಶಿಮ್ಲಾದ ಎಸ್ಪಿ ಸಂಜೀವ್ ಕುಮಾರ್ ಗಾಂಧಿ ಅವರು ತಿಳಿಸಿದ್ದಾರೆ.
ಶಾಸಕ ಮನೆ ಆವರಣದಲ್ಲಿ ನೇಣಿಗೆ ಶರಣು
ಕಲಬುರಗಿ, ಆ. ೨೪: ಇಲ್ಲಿನ ಶರಣನಗರ ಬಡಾವಣೆಯಲ್ಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಅಧ್ಯಕ್ಷರೂ ಆಗಿರುವ ಜೇವರಗಿ ಕಾಂಗ್ರೆಸ್ ಶಾಸಕ ಡಾ. ಅಜಯ್ ಸಿಂಗ್ ಅವರ ನಿವಾಸದ ಆವರಣದಲ್ಲಿ ಗುರುವಾರ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತರನ್ನು ಅಜಯ್ ಸಿಂಗ್ ಅವರ ಮನೆಯ ವಾಚ್ಮೆನ್ ಆಗಿದ್ದ ೩೨ ವರ್ಷದ ದೇವೇಂದ್ರ ಎಂದು ಗುರುತಿಸಲಾಗಿದೆ. ತಾಲೂಕಿನ ಪಟ್ಟಣ ಗ್ರಾಮದ ನಿವಾಸಿಯಾದ ದೇವೇಂದ್ರ ಅವರು ಕಳೆದ ನಾಲ್ಕೆöÊದು ವರ್ಷಗಳಿಂದ ಡಾ. ಅಜಯ್ ಸಿಂಗ್ ಅವರ ಮನೆಯಲ್ಲಿ ವಾಚ್ಮೆನ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗುತ್ತಿದೆ. ಬುಧವಾರ ತಡ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಎದುರಾಗಿದ್ದು, ಗುರುವಾರ ಬೆಳಿಗ್ಗೆ ಅಜಯ್ ಸಿಂಗ್ ಅವರ ಮನೆಯ ಅಡುಗೆ ತಯಾರಕ ಮರದಲ್ಲಿನ ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಬೆರಳಚ್ಚು ತಜ್ಞರೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಹೊಸ ಮಸೂದೆಗಳ ಪರಿಶೀಲನೆಗೆ ಸಂಸದೀಯ ಸಮಿತಿ
ನವದೆಹಲಿ, ಆ. ೨೪: ಅಸ್ತಿತ್ವದಲ್ಲಿರುವ ಭಾರತೀಯ ದಂಡ ಸಂಹಿತೆ (ಐಪಿಸಿ), ಅಪರಾಧ ದಂಡ ಸಂಹಿತೆ (ಸಿಆರ್ಪಿಸಿ) ಹಾಗೂ ಭಾರತೀಯ ಸಾಕ್ಷö್ಯ ಕಾಯ್ದೆ ಬದಲಿಗೆ ಜಾರಿಗೊಳಿಸಲು ಉದ್ದೇಶಿಸಿರುವ ಹೊಸ ಮಸೂ ದೆಗಳ ಪರಿಶೀಲನೆಗೆ ಸಂಸದೀಯ ಸಮಿತಿ ಸಭೆ ನಡೆಯಲಿದೆ. ಗೃಹ ಇಲಾಖೆ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಸಮಿತಿ ಸದಸ್ಯರ ಎದುರು ಹೊಸ ಮಸೂದೆಗಳಾದ ಭಾರತೀಯ ನ್ಯಾಯ ಸಂಹಿತೆ ಮಸೂದೆ-೨೦೨೩, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮಸೂದೆ-೨೦೨೩ ಮತ್ತು ಭಾರತೀಯ ಸಾಕ್ಷö್ಯ ಮಸೂದೆ-೨೦೨೩ ಕುರಿತು ವಿಷಯ ಮಂಡಿಸಲಿದ್ದಾರೆ. ಬಿಜೆಪಿಯ ಬ್ರಿಜ್ ಲಾಲ್ ಅವರು ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿದ್ದು, ಸ್ಥಾಯಿ ಸಮಿತಿಯು ಮೂರು ತಿಂಗಳಲ್ಲಿ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಲೋಕಸಭೆಯ ಅಧಿವೇಶನದಲ್ಲಿ ಹೊಸ ಮಸೂದೆಗಳನ್ನು ಮಂಡಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಸದ್ಯ ಇರುವ ಕಾನೂನುಗಳನ್ನು ಬ್ರಿಟಿಷರ ಆಡಳಿತವನ್ನು ಗಟ್ಟಿಗೊಳಿಸುವು ದಕ್ಕಾಗಿ ರಚಿಸಲಾಗಿತ್ತು. ಆ ಕಾನೂನುಗಳನ್ನು ಈಗ ತೆಗೆದು ಹಾಕಲಾಗುತ್ತಿದೆ. ನೂತನ ಮಸೂದೆಗಳು ಜಾರಿಗೆ ಬಂದರೆ ಭಾರತದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆಯಾಗಲಿದೆ. ಈಗಿನ ಅಗತ್ಯಗಳಿಗೆ ಅನುಗುಣವಾಗಿ ಈ ಕಾನೂನುಗಳಿಗೆ ಬದಲಾವಣೆ ತರಲಾಗಿದೆ. ಎಲ್ಲರಿಗೂ ತ್ವರಿತವಾಗಿ ನ್ಯಾಯ ಒದಗಿಸಲು ಅನುವು ಮಾಡಿಕೊಡಲಾಗಿದೆ ಎಂದು ಹೇಳಿದ್ದರು.