ಗೋಣಿಕೊಪ್ಪಲು, ಆ. ೨೫: ಸಾಮಾಜಿಕ ಕ್ರಾಂತಿಯ ಹರಿಕಾರ ಹಾಗೂ ಮಾಜಿ ಮುಖ್ಯಮಂತ್ರಿ ದಿ.ಡಿ. ದೇವರಾಜು ಅರಸುರವರ ೧೦೮ನೇ ಜನ್ಮ ದಿನಾಚರಣೆಯು ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಎನ್.ಎಸ್. ಪ್ರಶಾಂತ್ ಉದ್ಘಾಟಿಸಿದರು.
ಕಾರ್ಯಕ್ರಮದ ಅಂಗವಾಗಿ ದಿ. ಡಿ. ದೇವರಾಜ ಅರಸುರವರ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ೨೦೨೨-೨೩ನೇ ಸಾಲಿನ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾಭ್ಯಾಸ ಮುಗಿಸಿ ಸರ್ಕಾರಿ ಹುದ್ದೆಗೆ ನೇಮಕಗೊಂಡ ವಿದ್ಯಾರ್ಥಿಗಳಿಗೆ ಈ ಸಂದರ್ಭ ಸನ್ಮಾನ ಮಾಡಲಾಯಿತು.
ಸಮಾರಂಭದಲ್ಲಿ ತಾಲೂಕು ಪಂಚಾಯಿತಿ ಇಒ ಕೆ.ಸಿ. ಅಪ್ಪಣ್ಣ ತೋಟಗಾರಿಕ ಇಲಾಖೆ ಸಹಾಯಕ ನಿರ್ದೇಶಕಿ ದೀನಾ, ಸಮಾಜ ಕಲ್ಯಾಣ ತಾಲೂಕು ಅಧಿಕಾರಿ, ಪ್ರೀತಿ ಚಿಕ್ಕಮಾದಯ್ಯ ಸೇರಿದಂತೆ ವಿವಿಧ ಇಲಾಖೆಯ ಹೆಚ್.ಸಿ. ನಾಗರಾಜು, ಹೆಚ್.ಹೆಚ್. ಪ್ರಕಾಶ್, ಹಾಗೂ ಉಪನ್ಯಾಸಕರು ಇಲಾಖೆಯ ನಿಲಯ ಮೇಲ್ವಿಚಾರಕರು ಹಾಗೂ ಸಿಬ್ಬಂದಿಗಳು, ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.