ಐಗೂರು, ಆ. ೨೫: ಸಮುದಾಯ ದಲ್ಲಿ ಸರಕಾರಿ ಶಾಲೆಗೆ ಸಹಾಯ ನೀಡುತ್ತಿರುವ ಸ್ಥಳೀಯ ಸಂಘ-ಸAಸ್ಥೆಗಳು ಮತ್ತು ಗ್ರಾಮಸ್ಥರ ನೆರವಿ ನಿಂದ ನಡೆಯುವ ಶಿಕ್ಷಣ ಸಂಸ್ಥೆಗಳಿAದ ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ತುಂಬುತ್ತದೆ ಎಂದು ತಾಲೂಕು ಶಿಕ್ಷಣಾಧಿಕಾರಿಗಳಾದ ಕೆ.ವಿ. ಸುರೇಶ ಹೇಳಿದರು.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಜೂರಿನಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸ್ಥಳೀಯ ಚಾಣಕ್ಯ ಯುವಕ ಸಂಘದ ಚೆಂಡೆಮೇಳದೊAದಿಗೆ ಅತಿಥಿಗಳನ್ನು ವೇದಿಕೆಗೆ ಬರಮಾಡಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಒಟ್ಟು ೧೩ ಶಾಲೆಗಳ ವಿದ್ಯಾರ್ಥಿಗಳು ಮತ್ತು ಮುಖ್ಯ ಶಿಕ್ಷಕರು ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದ್ರಶೇಖರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಮುಖರಾದ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಆಶಾ, ಐಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಿನೋದ್, ಶಿಕ್ಷಕ ಸಂಘದ ಅಧ್ಯಕ್ಷರಾದ ಬಸವರಾಜು, ದಾನಿಗಳಾದ ವಿಶ್ವನಾಥ್ ರಾಜೇ ಅರಸ್, ಅಭಿರಾಮ್, ಮಚ್ಚಾಂಡ ಪ್ರಕಾಶ್, ಹೊನ್ನಪ್ಪ, ಡೇವಿಡ್, ಅಪ್ಪಚ್ಚು, ಕೆ.ಟಿ. ಮೇದಪ್ಪ, ಸುಮಾಚಂದ್ರ ಮತ್ತು ಮಾಜಿ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಧರ್ಮಪ್ಪ, ಮುತ್ತಪ್ಪ, ಉಷಾ ಸುಕುಮಾರ್, ಗೀತಾ ರಾಧಾಕೃಷ್ಣ, ಸಿ.ಆರ್.ಪಿ. ಗಿರೀಶ್. ಮುಖ್ಯ ಶಿಕ್ಷಕಿ ಸರಳಕುಮಾರಿ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕ ಯಶ್ವಂತ್ ಭಾಗವಹಿಸಿದ್ದರು.

ವಿದ್ಯಾರ್ಥಿಗಳು ವೇದಿಕೆಯಲ್ಲಿ ತಮ್ಮಲ್ಲಿರುವ ಕಲಾ ಪ್ರತಿಭೆಗಳನ್ನು ಅನಾವರಣಗೊಳಿಸಿದ ಬಳಿಕ ದೈಹಿಕ ಶಿಕ್ಷಕರಾದ ಅಜಿತ್ ಕುಮಾರ್ ವಂದಿಸಿದರು.