ಮಡಿಕೇರಿ, ಆ. ೨೫ : ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ತಾ. ೨೬ ರಂದು (ಇಂದು) ಕೊಡಗು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಬೆಳಿಗ್ಗೆ ೧೧.೩೦ ಗಂಟೆಗೆ ತಿತಿಮತಿ ಬಂಬು ಕಾಡಿನಲ್ಲಿ ಆನೆ ದಾಳಿಗೊಳಾದ ಸಂತ್ರಸ್ತರ ಮನೆಗೆ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ ೧೨.೩೦ ಗಂಟೆಗೆ ಮಾಲ್ದಾರೆ ಗ್ರಾಮ ಪಂಚಾಯಿತಿಯಲ್ಲಿ ಸ್ಥಳ ವೀಕ್ಷಣೆ ಮಾಡಲಿದ್ದಾರೆ. ಬಳಿಕ ಮಧ್ಯಾಹ್ನ ೧.೩೦ ಗಂಟೆಗೆ ಅರೆಕಾಡು ಪೈಸಾರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ೩.೩೦ ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಅರಣ್ಯ ಅಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎ.ಆರ್. ರವಿ ತಿಳಿಸಿದ್ದಾರೆ.