ಶನಿವಾರಸಂತೆ, ಆ. ೨೫ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಕೊಡ್ಲಿಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹಲಸಿನ ಮರ ಶ್ರೀಮತಿ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ಸಹಭಾಗಿತ್ವದಲ್ಲಿ ಆರೋಡ ದಾಸೋಹಿ ಧರ್ಮ ಚಿಂತಾಮಣಿ ಮಹಾಶರಣ ಲಿಂ-ಮಾಗನೂರು ಬಸಪ್ಪ ದತ್ತಿ- ಶರಣ ಸಂಸ್ಕೃತಿ ದತ್ತಿ ಕಾರ್ಯಕ್ರಮ ಕೊಡ್ಲಿಪೇಟೆಯ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ತಾ. ೨೬ ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ.

ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಹೈಕೋರ್ಟ್ ಹಿರಿಯ ವಕೀಲ ಎಚ್.ಎಸ್. ಚಂದ್ರಮೌಳಿ ಉದ್ಘಾಟಿಸಲಿದ್ದಾರೆ. ಶ್ರೀ ಕ್ಷೇತ್ರ ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಪತ್ರಕರ್ತ ಎಸ್. ಮಹೇಶ್ ದತ್ತಿ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಾವಣಗೆರೆ ಮಾಗನೂರು ಬಸಪ್ಪ ಪಬ್ಲಿಕ್ ಟ್ರಸ್ಟ್ ಗೌರವ ಕಾರ್ಯದರ್ಶಿ ಎಂ.ಬಿ. ಸಂಗಮೇಶ್ವರ ಗೌಡ, ಪ್ರಾಂಶುಪಾಲ ನಿರಂಜನ್, ತಾಲೂಕು ಕಸಾಪ ಅಧ್ಯಕ್ಷ ಎಸ್.ಡಿ. ವಿಜೇತ್, ಕೊಡ್ಲಿಪೇಟೆ ಹೋಬಳಿ ಕಸಾಪ ಅಧ್ಯಕ್ಷ ಬಿ.ಪಿ. ಶಾಂತಮಲ್ಲಪ್ಪ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಸಾಪ ಪ್ರಕಟಣೆಯಲ್ಲಿ ತಿಳಿಸಿದೆ.