ಮಡಿಕೇರಿ, ಆ. ೨೫ : ರಾಷ್ಟçಕಂಡ ಮಹಾನ್ ಸೇನಾ ನಾಯಕ, ವೀರಸೇನಾನಿ ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಪ್ರತಿಮೆಯನ್ನು ಶೀಘ್ರ ಪುನರ್ ಸ್ಥಾಪಿಸಬೇಕು ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹೇಳಿದರು.

ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಸ್ಥಳಾಂತರಿಸಲಾಗಿರುವ ವೀರಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ವೀಕ್ಷಿಸಿದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

ಮಾಜಿ ಸಚಿವರಾದ ಎಂ.ಸಿ. ನಾಣಯ್ಯ ಹಾಗೂ ಸ್ಥಳೀಯ ಶಾಸಕÀ ಡಾ. ಮಂಥÀರ್ ಗೌಡ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಕೈಗೊಂಡಿರುವ ತೀರ್ಮಾನದಂತೆ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಪುನರ್ ನಿರ್ಮಾಣ ಮಾಡಬೇಕು. ಪ್ರತಿಮೆ ಪುನರ್ ನಿರ್ಮಾಣ ಸಂಬAಧ ಈಗಾಗಲೇ ಅಂದಾಜುಪಟ್ಟಿ ತಯಾರಿಸಲಾಗಿದ್ದು, ಕೆಎಸ್‌ಆರ್‌ಟಿಸಿ ವಿಭಾಗದಿಂದ ರೂ. ೧೦ ಲಕ್ಷ ಭರಿಸಲಿದ್ದಾರೆ ಎಂದು ಪೊನ್ನಣ್ಣ ಮಾಹಿತಿಯಿತ್ತರು.

ಕೊಡಗಿನ ಜನರ ಭಾವನೆಗೆ ಧಕ್ಕೆ ಆಗದಂತೆ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಪುನರ್ ಸ್ಥಾಪಿಸ ಲಾಗುವುದು. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ತುರ್ತು ಕ್ರಮವಹಿಸುವಂತೆ ಎ.ಎಸ್. ಪೊನ್ನಣ್ಣ ನಿರ್ದೇಶನ ನೀಡಿದರು.

ಪ್ರತಿಮೆ ವೀಕ್ಷಣೆಗೂ ಮೊದಲು ಜನರಲ್ ತಿಮ್ಮಯ್ಯ ವೃತ್ತಕ್ಕೆ ಭೇಟಿ ನೀಡಿ ಶಾಸಕರು ಪರಿಶೀಲಿಸಿದರು.

ಕಾಡಾನೆ ಹಾವಳಿ ನಿಯಂತ್ರಣಕ್ಕೆ ಕ್ರಮ: ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಕಾಡಾನೆ ದಾಳಿಗೆ ಇಬ್ಬರು ತುತ್ತಾಗಿದ್ದು, ನೋವು ತಂದಿದೆ. ಕಾಡುಪ್ರಾಣಿಗಳ ಹಾವಳಿ ತಡೆಯಬೇಕಿದ್ದು, ಈ ನಿಟ್ಟಿನಲ್ಲಿ ತಾ. ೨೬ ರಂದು ಅರಣ್ಯ ಸಚಿವರು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಕಾಡಾನೆ ಹಾವಳಿಗೆ ತುತ್ತಾದ ಕುಟುಂಬದವರನ್ನು ಭೇಟಿ ಮಾಡಲಿದ್ದಾರೆ. ಬಳಿಕ ಸಭೆ ನಡೆಸಲಿದ್ದಾರೆ. ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಸಹ ಆಗಮಿಸಲಿದ್ದಾರೆ ಎಂದು ಎ.ಎಸ್. ಪೊನ್ನಣ್ಣ ಮಾಹಿತಿ ನೀಡಿದರು.

ಈ ಸಂದರ್ಭ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಉಪವಿಭಾಗಾ ಧಿಕಾರಿ ಡಾ. ಯತೀಶ್ ಉಳ್ಳಾಲ್, ಕೆಎಸ್‌ಆರ್‌ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕಿ ಗೀತಾ, ಪ್ರಮುಖರಾದ ತೆನ್ನಿರಾ ಮೈನಾ, ಬಿ.ಎಸ್. ತಮ್ಮಯ್ಯ, ಧರ್ಮಜ ಉತ್ತಪ್ಪ ಇತರರು ಇದ್ದರು.